Homeಮುಖಪುಟಜಾತಿ ನಿಂದನೆ ಮಾಡಿದ ಗ್ರಾಮದ ಮುಖ್ಯಸ್ಥ: ಶಾಲಾ ಪ್ರಾಂಶುಪಾಲ ಆತ್ಮಹತ್ಯೆ

ಜಾತಿ ನಿಂದನೆ ಮಾಡಿದ ಗ್ರಾಮದ ಮುಖ್ಯಸ್ಥ: ಶಾಲಾ ಪ್ರಾಂಶುಪಾಲ ಆತ್ಮಹತ್ಯೆ

- Advertisement -
- Advertisement -

ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪ್ರಾಂಶುಪಾಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಅವರು ತನ್ನ ವಿಡಿಯೋ ಹೇಳಿಕೆಯಲ್ಲಿ ಗ್ರಾಮದ ಸರಪಂಚ್ ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಲಾ ಪ್ರಾಂಶುಪಾಲರಾಗಿದ್ದ 52 ವರ್ಷದ ಕಾಂತಿ ಚೌಹಾಣ್ ಅವರು ಆತ್ಮಹತ್ಯೆ ಮಾಡಿಕೊಂಡವರು. ಅವರು ವಿಷ ಸೇವಿಸುವ ಮೊದಲು ರೆಕಾರ್ಡ್ ಮಾಡಿದ ವೀಡಿಯೊ ಸಂದೇಶದಲ್ಲಿ ಗ್ರಾಮದ ಸರಪಂಚ್ ಜಾತಿಯ ಆಧಾರದ ಮೇಲೆ ತನಗೆ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಕೆಳ ಜಾತಿಯಿಂದ ಬಂದಿರಬಹುದು ಆದರೆ ನಾನು ಶಿಕ್ಷಕನ ಕೆಲಸವನ್ನು ಮಾಡುತ್ತಿದ್ದೇನೆ. ದಯವಿಟ್ಟು ನನ್ನ ಹುದ್ದೆಯನ್ನು ನನ್ನಿಂದ ಕಿತ್ತುಕೊಳ್ಳಬೇಡಿ. ನೀವು ನಮ್ಮ ಜಾತಿಯನ್ನು ಅಸ್ತ್ರವಾಗಿ ಬಳಸಿಕೊಂಡು ನಮ್ಮನ್ನು ಕೆಣಕಲು ಪ್ರಯತ್ನಿಸುತ್ತಿದ್ದೀರಿ ಮತ್ತು ಸರಪಂಚ್ ಆಗಿರುವ ನಿಮಗೆ ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಚೌಹಾಣ್ ಹೇಳಿರುವ ಬಗ್ಗೆ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಸರಪಂಚ್ ನನಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ನಾನು ಪಡೆದಿರುವ ಅನುದಾನವನ್ನು ವಾಪಾಸ್ಸು ನೀಡುವಂತೆ ಕೇಳುತ್ತಿದ್ದಾರೆ. ಸರಪಂಚ್ ಹಳ್ಳಿ ಜನರಿರುವ ವಾಟ್ಸಾಪ್‌ ಗ್ರೂಪ್‌ನಲ್ಲಿ ನನ್ನ ಮತ್ತು ನನ್ನ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ  ಸಂದೇಶವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಆರೋಪಿತ ಗ್ರಾಮದ ಸರಪಂಚ್‌ಗೆ ಮುಕೇಶ್ ಬೋರಿಸಾಗರ್ ಎಂದು ಗುರುತಿಸಲಾಗಿದೆ. ಗುಜರಾತ್ ಸರ್ಕಾರವು ಇತರ ಉದ್ದೇಶಗಳಿಗಾಗಿ ಬಿಡುಗಡೆ ಮಾಡಿದ ಶಾಲಾ ಆಡಳಿತ ಸಮಿತಿಯ ಹಣವನ್ನು ಬೇರೆಡೆಗೆ ವರ್ಗಾಯಿಸಲು ಚೌಹಾಣ್ ಮೇಲೆ ಸರಪಂಚ್‌ ಒತ್ತಡ ಹೇರಿದ್ದರು ಎಂದು ಹೇಳಲಾಗಿದೆ.

ಬೋರಿಸಾಗರ್ ಮತ್ತು ವಿಪುಲ್ ಕ್ಯಾಡಾ ಎಂಬವರು ಚೌಹಾಣ್ ಅವರನ್ನು ಪ್ರಾಂಶುಪಾಲ ಹುದ್ದೆಯಿಂದ ತೆಗೆದುಹಾಕಲು ಯಶಸ್ವಿಯಾಗಿ ಸಂಚು ಹೂಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಚೌಹಾಣ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಚೌಹಾಣ್ ಅವರ ಪತ್ನಿ ಪತಿಯ ಸಾವಿನ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಚೌಹಾಣ್‌ ಸಾವಿನ ಸುದ್ದಿ ತಿಳಿದು ದಲಿತ ಸಮುದಾಯದ ಸದಸ್ಯರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬೋರಿಸಾಗರ್, ವಿಪುಲ್ ಕ್ಯಾಡಾ ಮತ್ತು ಮೂವರು ಶಿಕ್ಷಕರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮ್ರೇಲಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಪಿ ಭಂಡಾರಿ,  ನಾವು ಐಪಿಸಿಯ ಸೆಕ್ಷನ್ 306 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾಕ್ಕೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿದ ಭಾರತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...