Homeಮುಖಪುಟಗಣರಾಜ್ಯೋತ್ಸವದ ಭಾಷಣದಲ್ಲಿ 'ಜೈ ಭೀಮ್-ಜೈ ಭಾರತ್' ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

ಗಣರಾಜ್ಯೋತ್ಸವದ ಭಾಷಣದಲ್ಲಿ ‘ಜೈ ಭೀಮ್-ಜೈ ಭಾರತ್’ ಹೇಳಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಥಳಿತ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತ ದೌರ್ಜನ್ಯ ಪ್ರಕರಣ ಮುಂದುವರಿದಿದ್ದು, ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯ ನರೌಲಿ ಪಟ್ಟಣದ ಶಾಲೆಯೊಂದರಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಷಣ ಮುಗಿಸಿದ ನಂತರ ‘ಜೈ ಭೀಮ್-ಜೈ ಭಾರತ್’ ಎಂದು ಘೋಷಣೆ ಕೂಗಿದ ಕಾರಣಕ್ಕೆ ದಲಿತ ವಿದ್ಯಾರ್ಥಿಗೆ ಇಬ್ಬರು ವಿದ್ಯಾರ್ಥಿಗಳು ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ.  ಕೃತ್ಯವು ಪುಟ್ಟ ಮಕ್ಕಳ ಮನಸ್ಸಿನಲ್ಲಿ ಯಾವ ರೀತಿ ದ್ವೇಷವನ್ನು ಹುಟ್ಟು ಹಾಕಲಾಗಿದೆ ಎಂಬುವುದಕ್ಕೆ ನಿದರ್ಶನವಾಗಿದೆ. ಇತ್ತೀಚೆಗೆ ಉತ್ತರಪ್ರದೇಶದ ಶಾಲೆಯಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಹೇಳುತ್ತಿರುವ ವಿಡಿಯೋ ವೈರಲ್‌ ಆಗಿತ್ತು. ಘಟನೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ನ್ಯಾಯಾಲಯ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಗಣರಾಜ್ಯೋತ್ಸವ ಸಮಾರಂಭದಲ್ಲಿ ನರೌಲಿ ಪಟ್ಟಣದ ಸರ್ದಾರ್ ಸಿಂಗ್ ಇಂಟರ್ ಕಾಲೇಜಿನ 12ನೇ ತರಗತಿ ವಿದ್ಯಾರ್ಥಿ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಕುರಿತು ಭಾಷಣ ಮಾಡಿದ್ದ. ಭಾಷಣದ ಕೊನೆಯಲ್ಲಿ  ‘ಜೈ ಭೀಮ್-ಜೈ ಭಾರತ್’ ಎಂದು ಹೇಳಿ ಭಾಷಣವನ್ನು ಕೊನೆಗೊಳಿಸಿದ್ದ. ‘ಜೈ ಭೀಮ್-ಜೈ ಭಾರತ್’ ಘೋಷಣೆ ಕೂಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅದೇ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಗೇಟ್‌ನ ಹೊರಗೆ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಕುರಿತು ಸಂತ್ರಸ್ತ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸರ್ಕಲ್ ಆಫೀಸರ್ ಪ್ರದೀಪ್ ಕುಮಾರ್ ಮಾತನಾಡಿ, ಬನಿಯಾ ಥೇರ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ಕಾರ್ಯಕ್ರಮದ ವೇಳೆ ಮೂವರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆಯಡಿಯಲ್ಲಿ ಬನಿಯಾ ಥರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಅಂಬೇಡ್ಕರ್‌ ಪೋಟೋ ಇದ್ದ ಧ್ವಜಕ್ಕೆ ಅವಮಾನ: ಮೂವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Useless Aditya cm of up and he don’t have humanity wt he is doing these type of incidents occurred, seems they are encouraging this type of incidents Dalits are origin of india and they are struggling since independence but no values for them

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...