Homeದಲಿತ್ ಫೈಲ್ಸ್ಮುಟ್ಟಾದ ದಲಿತ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

ಮುಟ್ಟಾದ ದಲಿತ ವಿದ್ಯಾರ್ಥಿನಿಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು

- Advertisement -
- Advertisement -

ಋತುಮತಿಯಾದ ಪರಿಶಿಷ್ಟ ಜಾತಿಯ (ಅರುಂಥತಿಯಾರ್) 8ನೇ ತರಗತಿ ವಿದ್ಯಾರ್ಥಿನಿಯನ್ನು ಶಿಕ್ಷಕರು ತರಗತಿ ಕೊಠಡಿಯ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಅಮಾನವೀಯ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಿನಾತುಕಡವು ತಾಲೂಕಿನ ಸೆಂಗುಟ್ಟೈಪಾಳ್ಯಂ ಗ್ರಾಮದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಶಾಲೆಗೆ ಭೇಟಿ ನೀಡಿದ ವೇಳೆ ಮಗಳು ತರಗತಿಯ ಹೊರಗಡೆ ಕುಳಿತು ಪರೀಕ್ಷೆ ಬರೆಯುತ್ತಿರುವುದನ್ನು ವಿಡಿಯೋ ಮಾಡಿಕೊಂಡಿದ್ದ ವಿದ್ಯಾರ್ಥಿನಿಯ ತಾಯಿ, ಇತರರಿಗೆ ವಿಷಯ ತಿಳಿಸಿದ್ದರು. ಬಳಿಕ ಆ ವಿಡಿಯೋ ವೈರಲ್ ಆಗಿದೆ.

ಸೆಂಗುಟ್ಟೈಪಾಳ್ಯಂ ಗ್ರಾಮದಲ್ಲಿರುವ ಸ್ವಾಮಿ ಚಿದ್ಭವಾನಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿದೆ. ಏಪ್ರಿಲ್ 5ರಂದು ವಿದ್ಯಾರ್ಥಿನಿಗೆ ಮುಟ್ಟಾಗಿತ್ತು. ಏಪ್ರಿಲ್ 7ರಂದು ಸಮಾಜ ವಿಜ್ಞಾನ ಪರೀಕ್ಷೆ ಬರೆಯಲು ಆಕೆ ಶಾಲೆಗೆ ತೆರಳಿದಾಗ ಶಿಕ್ಷಕರು ಹೊರಗಡೆ ಕೂರಿಸಿ ಪರೀಕ್ಷೆ ಬರೆಸಿದ್ದಾರೆ. ಏಪ್ರಿಲ್ 9ರಂದು ವಿಜ್ಞಾನ ಪರೀಕ್ಷೆ ವೇಳೆಯೂ ಇದೇ ರೀತಿ ನಡೆದಿದೆ ಎಂದು ವರದಿಗಳು ಹೇಳಿವೆ.

ಘಟನೆಯ ಬಗ್ಗೆ ಕೊಯಮತ್ತೂರು ಗ್ರಾಮೀಣ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಕೊಯಮತ್ತೂರು ಜಿಲ್ಲಾಧಿಕಾರಿ ಪವನಕುಮಾರ್ ಜಿ ಗಿರಿಯಪ್ಪನವರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಡಳಿತಕ್ಕೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಮೆಟ್ರಿಕ್ಯುಲೇಷನ್ ಶಾಲೆಯ ಇನ್ಸ್‌ಪೆಕ್ಟರ್‌ಗೆ ನಿರ್ದೇಶಿಸಲಾಗಿದೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕೊಯಮತ್ತೂರು ಮುಖ್ಯ ಶಿಕ್ಷಣಾಧಿಕಾರಿ (ಸಿಇಒ) ಆರ್ ಬಾಲಮುರಳಿ ಮತ್ತು ಖಾಸಗಿ ಶಾಲೆಗಳ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಪುನಿತಾ ಅಂತೋನಿಮಾಳ್ ಗುರುವಾರ ಶಾಲೆಗೆ ಭೇಟಿ ನೀಡಿ ಶಾಲಾ ಆಡಳಿತ ಮಂಡಳಿಯವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

“ನನ್ನ ಮಗಳಿಗೆ ಮುಟ್ಟಾಗಿತ್ತು. ಹಾಗಾಗಿ, ಆಕೆ ಆರಾಮಾಗಿ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ನಾವು ಶಿಕ್ಷಕರಲ್ಲಿ ಕೋರಿದ್ದೆವು. ಶಿಕ್ಷಕರು ಪ್ರತ್ಯೇಕ ವ್ಯವಸ್ಥೆ ಮಾಡುವ ಬದಲು ಆಕೆಯನ್ನು ಬಲವಂತವಾಗಿ ತರಗತಿ ಕೊಠಡಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ್ದಾರೆ. ಏಪ್ರಿಲ್ 7ರಂದು ಸುಮಾರು ಎರಡೂವರೆಗೆ ತಾಸು ತರಗತಿಯ ಹೊರಗೆ ಮೆಟ್ಟಿಲ ಮೇಲೆ ಕುಳಿತು ಪರೀಕ್ಷೆ ಬರೆದು ಆಕೆಗೆ ಕಾಲು ನೋವು ಬಂದಿತ್ತು” ಎಂದು ವಿದ್ಯಾರ್ಥಿನಿಯ ತಂದೆ ಹೇಳಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮಗಳು ಶಾಲೆಯಲ್ಲಿ ನಡೆದ ವಿಷಯ ನಮಗೆ ತಿಳಿಸಿದ್ದಳು. ನಾವು ಏಪ್ರಿಲ್ 9ರಂದು ಖುದ್ದಾಗಿ ಶಾಲೆಗೆ ತೆರಳಿದಾಗ ಮಗಳು ಮೆಟ್ಟಿಲ ಮೇಲೆ ಕುಳಿತು ಪರೀಕ್ಷೆ ಬರೆಯುವುದು ಕಂಡಿತು. ಈ ಬಗ್ಗೆ ಶಿಕ್ಷಕರನ್ನು ವಿಚಾರಿಸಿದಾಗ, “ಅದೊಂದು ದೊಡ್ಡ ಸಮಸ್ಯೆನಾ?” ಎಂದು ಪ್ರಶ್ನಿಸಿದರು. ಮಗಳು ತರಗತಿಯ ಹೊರಗೆ ಕುಳಿತು ಪರೀಕ್ಷೆ ಬರೆಯುತ್ತಿರುವುದನ್ನು ನಾವು ವಿಡಿಯೋ ಮಾಡಿಕೊಂಡು ಬಂದಿದ್ದೆವು. ಅದನ್ನು ಸಂಬಂಧಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ” ಎಂದು ವಿದ್ಯಾರ್ಥಿನಿಯ ತಂದೆ ವಿವರಿಸಿದ್ದಾಗಿ ವರದಿ ತಿಳಿಸಿದೆ.

ಮಹಾರಾಷ್ಟ್ರ | ‘ಎಕ್ಸ್‌ಕ್ಯೂಸ್‌ಮಿ’ ಎಂದ ಮಹಿಳೆಯರಿಗೆ ಮರಾಠಿ ಮಾತನಾಡಿ ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...