Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ; ಸಿಜೆಐ ಕಳವಳ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ; ಸಿಜೆಐ ಕಳವಳ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳು ಅನುಭವಿಸುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾನುಭೂತಿ (ಇನ್ನೊಬ್ಬರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಹಂಚಿಕೊಳ್ಳುವ ಸಾಮರ್ಥ್ಯ) ಅಗತ್ಯವಿದೆ ಎಂದಿರುವ ಅವರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಒಡಿಶಾದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಕಳೆದ ವರ್ಷ ಆದಿವಾಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಉಲ್ಲೇಖಿಸಿರುವ ಸಿಜೆಐ, “ಈ ವಿದ್ಯಾರ್ಥಿಗಳ ಸಂತ್ರಸ್ತ ಕುಟುಂಬವನ್ನು ಕಂಡು ನನ್ನ ಹೃದಯವು ದುಃಖಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ನಮ್ಮ ಸಂಸ್ಥೆಗಳು ಎಲ್ಲಿ ತಪ್ಪೆಸಗುತ್ತಿವೆ ಎಂದು ಆಶ್ಚರ್ಯವಾಗುತ್ತಿದೆ” ಎಂದಿದ್ದಾರೆ.

ಹೈದರಾಬಾದ್‌ನಲ್ಲಿರುವ ದಿ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅವರು ಮಾತನಾಡಿದ್ದು, “ಗುಜರಾತ್ ಮೂಲದ ಪ್ರಥಮ ವರ್ಷದ ವಿದ್ಯಾರ್ಥಿ ದರ್ಶನ್ ಸೋಲಂಕಿ ಫೆಬ್ರವರಿ 12 ರಂದು ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅಂಚಿಗೆ ತಳ್ಳಲ್ಪಷ್ಟ ಸಮುದಾಯಗಳ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಸಾಮಾನ್ಯವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂಖ್ಯೆಗಳು ಕೇವಲ ಅಂಕಿಅಂಶಗಳಲ್ಲ. ಅವು ಕೆಲವೊಮ್ಮೆ ಶತಮಾನಗಳ ಹೋರಾಟದ ಕಥೆಗಳಾಗಿವೆ. ನಾವು ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಬಯಸುವುದಾದರೆ, ಮೊದಲು ಸಮಸ್ಯೆಯನ್ನು ಒಪ್ಪಿಕೊಂಡು ಅದನ್ನು ಗುರುತಿಸಬೇಕು ಎಂದು ನಾನು ನಂಬುತ್ತೇನೆ” ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯದ ನಂತರದ 75 ವರ್ಷಗಳ ನಮ್ಮ ಪಯಣದಲ್ಲಿ, ನಾವು ‘ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್’ (ಉನ್ನತ ದರ್ಜೆಯ ಬೋಧನಾ ವ್ಯವಸ್ಥೆ) ಅನ್ನು ರಚಿಸುವತ್ತ ಗಮನಹರಿಸಿದ್ದೇವೆ, ಆದರೆ ಅದಕ್ಕಿಂತ ಹೆಚ್ಚಾಗಿ ನಮಗೆ ‘ಇನ್‌ಸ್ಟಿಟ್ಯೂಷನ್ಸ್‌ ಆಫ್‌ ಎಂಪಥಿ’ (ಸಹಾನುಭೂತಿಯ ಸಂಸ್ಥೆಗಳು) ಅಗತ್ಯವಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯ ನ್ಯಾಯಾಧೀಶರು ಈ ವಿಷಯದ ಬಗ್ಗೆ ಏಕೆ ಮಾತನಾಡುತ್ತಿದ್ದಾರೆ ಎಂದು ನಿಮ್ಮಲ್ಲಿ ಕೆಲವರು ಆಶ್ಚರ್ಯ ಪಡಬಹುದು. ಏಕೆಂದರೆ ತಾರತಮ್ಯದ ವಿಷಯವು ಶಿಕ್ಷಣ ಸಂಸ್ಥೆಗಳಲ್ಲಿನ ಸಹಾನುಭೂತಿಯ ಕೊರತೆಯೊಂದಿಗೆ ನೇರ ಸಂಬಂಧ ಹೊಂದಿವಬೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ನ್ಯಾಯಾಧೀಶರು ಸಾಮಾಜಿಕ ವಾಸ್ತವಗಳಿಂದ ದೂರ ಸರಿಯುವಂತಿಲ್ಲ ಎಂದು ತಿಳಿಸಿದ್ದಾರೆ.

ಜಾರ್ಜ್ ಫ್ಲಾಯ್ಡ್ ಹತ್ಯೆಯ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಚಳವಳಿ ಹುಟ್ಟಿಕೊಂಡಿತು. ಆಗ ವಾಷಿಂಗ್ಟನ್ ಸುಪ್ರೀಂ ಕೋರ್ಟ್‌ನ ಎಲ್ಲಾ ಒಂಬತ್ತು ನ್ಯಾಯಾಧೀಶರು, “ಕಪ್ಪು ಜೀವಗಳ ಅವನತಿ ಮತ್ತು ಅಪಮೌಲ್ಯೀಕರಣ” ಕುರಿತು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು ಎಂದು ಸಿಜೆಐ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಸಾಮಾಜಿಕ ಬದಲಾವಣೆಗೆ ಒತ್ತಡ ತರಲು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಸಮಾಜದೊಂದಿಗೆ ಸಂವಾದ ನಡೆಸುವಲ್ಲಿ ಭಾರತದ ನ್ಯಾಯಾಧೀಶರು ನಿರ್ಣಾಯಕ ಪಾತ್ರವನ್ನು ಹೊಂದಿದ್ದಾರೆ ಎಂದು ವಿವರಿಸಿದ್ದಾರೆ.

ಪ್ರಮುಖ ನ್ಯಾಯಾಂಗ ಕೆಲಸ ಮತ್ತು ಆಡಳಿತಾತ್ಮಕ ಕರ್ತವ್ಯಗಳ ಹೊರತಾಗಿ, ನಮ್ಮ ಸಮಾಜ ಎದುರಿಸುತ್ತಿರುವ ರಚನಾತ್ಮಕ ಸಮಸ್ಯೆಗಳ ಮೇಲೆ ಮುಖ್ಯ ನ್ಯಾಯಮೂರ್ತಿಯಾಗಿ ಬೆಳಕು ಚೆಲ್ಲಬೇಕಾಗುತ್ತದೆ ಎಂದು ಆಶಿಸಿದ್ದಾರೆ.

“ಆದ್ದರಿಂದ, ಸಹಾನುಭೂತಿಯನ್ನು ಉತ್ತೇಜಿಸುವುದು ಶಿಕ್ಷಣ ಸಂಸ್ಥೆಗಳು ತೆಗೆದುಕೊಳ್ಳಬೇಕಾದ ಮೊದಲ ಹೆಜ್ಜೆಯಾಗಿರಬೇಕು. ಸಹಾನುಭೂತಿ ಬೆಳೆಸುವುದರಿಂದ ಮೇಲರಿಮೆ ಮತ್ತು ಹೊರಗಿಡುವ ಸಂಸ್ಕೃತಿಯನ್ನು ಕೊನೆಗೊಳಿಸಬಹುದು. ಇದನ್ನು ಸಣ್ಣ ಹೆಜ್ಜೆಗಳಿಂದ ಪ್ರಾರಂಭಿಸುವ ಮೂಲಕ ಮಾಡಬಹುದು” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...