Homeಮುಖಪುಟದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5...

ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

- Advertisement -
- Advertisement -

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು ಎಂದು ಕವಿನ್ ಕುಟುಂಬ ಪಟ್ಟು ಹಿಡಿದಿತ್ತು. ಶುಕ್ರವಾರ, ಸಬ್ ಇನ್ಸ್‌ಪೆಕ್ಟರ್ ಸರವಣನ್‌ ಬಂಧನದ ನಂತರ, ಮೃತ ಟೆಕ್ಕಿಯ ಕುಟುಂಬ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತದೇಹವನ್ನು ಸ್ವೀಕರಿಸಿದೆ. ಈ ವೇಳೆ ಸಚಿವ ಕೆ.ಎನ್. ನೆಹರು ಮತ್ತು ಜಿಲ್ಲಾಧಿಕಾರಿ ಆರ್. ಸುಕುಮಾರ್ ಸಹ ಉಪಸ್ಥಿತರಿದ್ದರು.

ಪ್ರೀತಿಯೇ ಹತ್ಯೆಗೆ ಕಾರಣ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕವಿನ್ ಮತ್ತು ಆರೋಪಿ ಸುರ್ಜಿತ್‌ನ ಸಹೋದರಿ ಸುಭಾಷಿಣಿ ನಡುವಿನ ಪ್ರೇಮಸಂಬಂಧವೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ, ಸುಭಾಷಿಣಿ ಈ ಕುರಿತು ವಿಡಿಯೋವೊಂದರಲ್ಲಿ ಸ್ಪಷ್ಟಪಡಿಸಿದ್ದು, “ನಾವು ನಿಜವಾಗಿಯೂ ಪರಸ್ಪರ ಪ್ರೀತಿಸುತ್ತಿದ್ದೆವು. ಆದರೆ, ನಮ್ಮ ಸಂಬಂಧದ ಬಗ್ಗೆ ತಕ್ಷಣವೇ ನಮ್ಮ ಪೋಷಕರಿಗೆ ತಿಳಿಸಬಾರದೆಂದು ನಿರ್ಧರಿಸಿದ್ದೆವು. ಮೇ 30ರಂದು ನನ್ನ ಅಣ್ಣ ಸುರ್ಜಿತ್ ಈ ವಿಷಯವನ್ನು ನನ್ನ ತಂದೆಗೆ ತಿಳಿಸಿದ್ದ. ಆದರೆ, ಕವಿನ್ ಸ್ವಲ್ಪ ಸಮಯ ಬೇಕು ಎಂದಿದ್ದರಿಂದ ನಾನು ಸುಮ್ಮನಿದ್ದೆ” ಎಂದು ಹೇಳಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಕವಿನ್ ಅವರ ಸಂಬಂಧಿ ಸೆಲ್ವಂ, “ಇದು ಸ್ಪಷ್ಟವಾಗಿ ಮರ್ಯಾದೆಗೇಡು ಹತ್ಯೆ (Honour killing). ಸುರ್ಜಿತ್‌ ಬಂಧನವಾಗಿದೆ, ಆದರೆ ಅವನ ತಂದೆ-ತಾಯಿಯನ್ನೂ ಬಂಧಿಸಬೇಕು. ಎಫ್‌ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಲು ಅವಕಾಶವಿದೆ,” ಎಂದು ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿ (Crime Branch–CID) ಗೆ ವರ್ಗಾಯಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕವಿನ್ ಸೆಲ್ವಗಣೇಶ್ ಮತ್ತು ಸುಭಾಷಿಣಿ ಪ್ರೀತಿಸುತ್ತಿದ್ದರು. ಈ ಸಂಬಂಧ ಸುರ್ಜಿತ್‌ಗೆ ಇಷ್ಟವಿರಲಿಲ್ಲ. ಮೇ 30ರಂದು ಕವಿನ್‌ರನ್ನು ಆತನ ಪ್ರೇಯಸಿ ಸುಭಾಷಿಣಿ ಕೆಲಸ ಮಾಡುತ್ತಿದ್ದ ಸಿಧಾ ಕೇಂದ್ರದ ಬಳಿ ಸುರ್ಜಿತ್ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಈ ಘಟನೆ ದಾಖಲಾಗಿದೆ. ನಂತರ ಕವಿನ್ ದೇಹವು ತೀವ್ರ ಗಾಯಗಳೊಂದಿಗೆ ಪತ್ತೆಯಾಗಿತ್ತು. ಸುರ್ಜಿತ್‌ನನ್ನು ಕೊಲೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರ ಬಂಧನದ ನಂತರ, ನ್ಯಾಯ ಸಿಗುವ ಭರವಸೆಯಲ್ಲಿ ಕುಟುಂಬವು ಪ್ರತಿಭಟನೆಯನ್ನು ಹಿಂತೆಗೆದುಕೊಂಡು ಮೃತದೇಹವನ್ನು ಸ್ವೀಕರಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ಜಾತಿವಾದದ ವಿರುದ್ಧ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಮಲ್ ಹಾಸನ್ ಸೇರಿದಂತೆ ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...