Homeಮುಖಪುಟದಲಿತ ಬಾಲಕಿಯ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

- Advertisement -
- Advertisement -

ಹದಿನೈದು ವರ್ಷದ ದಲಿತ ಬಾಲಕಿಯ ಮೇಲೆ ಇಬ್ಬರು ದುಷ್ಕರ್ಮಿಗಳು ನಿರಂತರವಾಗಿ ಅತ್ಯಾಚಾರ ನಡೆಸಿದ ಪ್ರಕರಣ ಉತ್ತರಪ್ರದೇಶದ ಶಹಜಾನ್‌ಪುರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ ಪಕ್ಕದ ಮಹಿಳೆಯೊಬ್ಬರ ಮನೆಗೆ ಪ್ರತಿದಿನ ಭೇಟಿ ನೀಡುತ್ತಿದ್ದಳು. ಅಲ್ಲಿ ಆಕೆಗೆ ತನ್ವೀರ್ ಹಾಗೂ ದಿಲ್‍ಬಾಗ್ ಎಂಬುವವರನ್ನು ಮಹಿಳೆ ಪರಿಚಯಿಸಿದ್ದಳು ಎಂದು ಹೆಚ್ಚುವರಿ ಎಸ್ಪಿ ಸುಧೀರ್ ಜೈಸ್ವಾಲ್ ಹೇಳಿದ್ದಾರೆ.

ಸಂತ್ರಸ್ತೆ ಬಾಲಕಿಯ ತಂದೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ತನ್ವೀರ್ ಹಾಗೂ ದಿಲ್‍ಬಾಗ್ ನಾಲ್ಕು ತಿಂಗಳ ಕಾಲ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು, ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇದೀಗ ತನ್ವೀರ್, ದಿಲ್‍ಬಾಗ್ ಹಾಗೂ ಪಕ್ಕದ ಮನೆಯ ಮಹಿಳೆಯ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 376ಡಿ, 354 ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನು ಓದಿ: ಉಡುಪಿ: ಚೈತ್ರಾ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...