Homeದಲಿತ್ ಫೈಲ್ಸ್ದಲಿತ ಮಹಿಳೆ ಮೇಲಿನ ಹಲ್ಲೆ ಪ್ರಕರಣ; ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್‌ಪುರಗೆ 4 ವರ್ಷ...

ದಲಿತ ಮಹಿಳೆ ಮೇಲಿನ ಹಲ್ಲೆ ಪ್ರಕರಣ; ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್‌ಪುರಗೆ 4 ವರ್ಷ ಜೈಲು ಶಿಕ್ಷೆ

- Advertisement -
- Advertisement -

ದಲಿತ ಮಹಿಳೆಯ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ 12 ವರ್ಷಗಳ ಹಿಂದಿನ ಪ್ರಕರಣದಲ್ಲಿ, ಖಾದೂರ್ ಸಾಹಿಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್‌ಪುರ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ಪ್ರಕರಣದಲ್ಲಿ ಆರು ಜನ ಪೊಲೀಸರು ಸೇರಿದಂತೆ ಹನ್ನೊಂದು ಜನರನ್ನು ದೋಷಿಗಳೆಂದು ನಿರ್ಣಯಿಸಿದ್ದಾರೆ. ಲಾಲ್‌ಪುರ ಮತ್ತು ಇತರ ಆರು ಜನರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ, ಉಳಿದ ಮೂವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಬುಧವಾರ, ನ್ಯಾಯಾಲಯವು ಈ ಪ್ರಕರಣದಲ್ಲಿ ಆರು ಪೊಲೀಸರು ಸೇರಿದಂತೆ 11 ಜನರನ್ನು ದೋಷಿಗಳು ಎಂದು ತೀರ್ಪು ನೀಡಿತು. ಶುಕ್ರವಾರ ಶಿಕ್ಷೆಯನ್ನು ಪ್ರಕಟಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರೇಮ್ ಕುಮಾರ್, ಲಾಲ್ಪುರ ಮತ್ತು ಇತರ ಆರು ಜನರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು. ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ಆರೋಪಿಗಳಲ್ಲಿ ಒಬ್ಬನಾದ ಹರ್ವಿಂದರ್ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಅವನ ಶಿಕ್ಷೆಯ ಪ್ರಮಾಣವು ಸೆಪ್ಟೆಂಬರ್ 16 ರಂದು ನಿಗದಿಯಾಗಿದೆ. ಮತ್ತೊಬ್ಬ ಆರೋಪಿ ಪರಮ್ಜಿತ್ ಸಿಂಗ್ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ.

“ನ್ಯಾಯಾಲಯವು ಆರೋಪಿಗಳಿಗೆ ತಲಾ 50,000 ರೂ. ದಂಡವನ್ನು ವಿಧಿಸಿದೆ. ಕಾನೂನಿನ ಪ್ರಕಾರ ಬಲಿಪಶುವಿಗೆ ಪರಿಹಾರವನ್ನು ಪಾವತಿಸಬೇಕೆಂದು ನಿರ್ದೇಶಿಸಿತು” ಎಂದು ಸಂತ್ರಸ್ತೆ ಪರ ವಕೀಲ ಅಮಿತ್ ಧವನ್ ಹೇಳಿದರು. ಶಿಕ್ಷೆಯ ಘೋಷಣೆಯ ನಂತರ, ಶಾಸಕರನ್ನು ವಶಕ್ಕೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಯಿತು.

ಸೆಪ್ಟೆಂಬರ್ 4, 2013 ರಂದು, ಟ್ಯಾಕ್ಸಿ ಚಾಲಕ ಮತ್ತು ಇತರ ಕೆಲವು ಪುರುಷರು 19 ವರ್ಷದ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರು ಮದುವೆಗೆ ಹೋಗುತ್ತಿದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದರು. ಸ್ಥಳಕ್ಕೆ ಬಂದ ಪೊಲೀಸ್ ತಂಡವೂ ಮಹಿಳೆಯ ಮೇಲೆ ಹಲ್ಲೆ ನಡೆಸಿತು ಎನ್ನಲಾಗಿದೆ.

ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...