Homeದಲಿತ್ ಫೈಲ್ಸ್ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ.

ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ ಈತ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಮೀರತ್ ಮತ್ತು ಸಹರಾನ್ಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹರಿದ್ವಾರ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಶದಲ್ಲಿದ್ದ ಯುವತಿಯನ್ನು ರಕ್ಷಿಸಿದ್ದಾರೆ. ಇಬ್ಬರನ್ನೂ ಮೀರತ್‌ಗೆ ಕರೆತರಲಾಗಿದೆ ಎಂದು ವರದಿಯಾಗಿದೆ.

ಯುವತಿಯ ಹೇಳಿಕೆ ಪಡೆಯುವುದು ಸೇರಿದಂತೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಮತ್ತು ಆರೋಪಿ ಯುವಕನ ನಡುವೆ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಈ ನಡುವೆ ಯುವತಿಯ ಕುಟುಂಬಸ್ಥರು ಆಕೆಗೆ ಬೇರೆ ಯುವಕನ ಜೊತೆ ಮದುವೆ ಮಾಡಲು ಮುಂದಾಗಿದ್ದರು. ಈ ವಿಷಯ ತಿಳಿದು ಆಕೆಯನ್ನು ಕರೆದೊಯ್ಯಲು ಯುವಕ ಮುಂದಾಗಿದ್ದ. ಇದಕ್ಕೆ ಅಡ್ಡಿಯಾದ ಆಕೆಯ ತಾಯಿಯನ್ನು ಕೊಲೆ ಮಾಡಿದ್ದಾನೆ ಎಂದು ಕೆಲ ವರದಿಗಳು ಹೇಳಿವೆ. ಅಪರಾಧದ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಘಟನೆಯ ಹಿನ್ನೆಲೆ : ಮೀರತ್‌ನ ಸರ್ಧಾನ ಪೊಲೀಸ್ ಠಾಣೆ ವ್ಯಾಪ್ತಿಯ ಕಪ್ಸದ್ ಗ್ರಾಮದಲ್ಲಿ ಜನವರಿ 8ರಂದು ಬೆಳಿಗ್ಗೆ ಘಟನೆ ನಡೆದಿದೆ. ಯುವತಿ ಮತ್ತು ಆಕೆಯ ತಾಯಿ ಹೊಲಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಅವರನ್ನು ತಡೆದ ಆರೋಪಿ ಪರಾಸ್ ಸೋಮ್, ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ತಾಯಿ ಮಗಳನ್ನು ರಕ್ಷಿಸಲು ಮುಂದಾದಾಗ ಆರೋಪಿ ಪರಾಸ್ ಆಕೆಯ ತಲೆಗೆ ಹರಿತವಾಗಿ ಆಯುಧದಿಂದ ಹೊಡೆದಿದ್ದ. ಪರಿಣಾಮ ಆಕೆಗೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ತೀವ್ರ ರಕ್ತಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತಾಯಿಯ ತಲೆಗೆ ಹೊಡೆದ ಬಳಿಕ, ಆರೋಪಿ ಪರಾಸ್ ಆತನ ಸಹಚರರ ಜೊತೆಗೂಡಿ ಯುವತಿಯನ್ನು ಅಪಹರಿಸಿದ್ದ. ಆರೋಪಿಯ ಸಹಚರರ ಪೈಕಿ ಓರ್ವನ ಹೆಸರು ಸುನಿಲ್ ಕುಮಾರ್ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ರಾಜಕೀಯ ನಾಯಕರಿಂದ ಖಂಡನೆ

ದಲಿತ ಮಹಿಳೆಯ ಕೊಲೆ ಮತ್ತು ಆಕೆಯ ಮಗಳ ಅಪಹರಣ ಪ್ರಕರಣ ಉತ್ತರ ಪ್ರದೇಶದ ಮಾತ್ರವಲ್ಲದೆ, ದೇಶದಾದ್ಯಂತ ಸುದ್ದಿಯಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭೀಮ್ ಆರ್ಮಿ ಸೇರಿದಂತೆ ದಲಿತ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿವೆ.

ಮಾಯಾವತಿ, ಅಖಿಲೇಶ್ ಯಾದವ್, ಚಂದ್ರಶೇಖರ್ ಆಝಾದ್ ಸೇರಿದಂತೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದ ಚಂದ್ರಶೇಖರ್ ಆಝಾದ್ ಅವರನ್ನು ಶನಿವಾರ ಪೊಲೀಸರು ತಡೆದಿದ್ದಾರೆ.

ಪೊಲೀಸರು ಕೊಲೆ, ಅಪಹರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಗ್ರಾಮದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ರಾಜಕೀಯ ಭೇಟಿಗಳನ್ನು ತಡೆಯಲು ರಸ್ತೆಗಳನ್ನು ಮುಚ್ಚಲಾಗಿದೆ. ಸಂತ್ರಸ್ತೆಯ ಕುಟುಂಬವು ಆರಂಭದಲ್ಲಿ ಅಂತ್ಯಕ್ರಿಯೆ ನಡೆಸಲು ನಿರಾಕರಿಸಿತ್ತು. ಆರೋಪಿಗಳ ಬಂಧನ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿತ್ತು.

ಕೊಲೆಯಾದ ಮಹಿಳೆಯ ಕುಟುಂಬಕ್ಕೆ ಆರಂಭದಲ್ಲಿ 10 ಲಕ್ಷ ರೂಪಾಯಿ ಪರಿಹಾರ ಮತ್ತು ಭದ್ರತೆಯನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...