Homeಮುಖಪುಟದಲಿತ ಯುವತಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ದಲಿತ ಯುವತಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

- Advertisement -
- Advertisement -

ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಫೋಟೋಗಳನ್ನು ವೈರಲ್‌ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡಿದ ಘಟನೆ ಒಡಿಶಾದ ಪಟ್ಟಮುಂಡೈ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ಬ್ಯೂಟಿ ಪಾರ್ಲರ್ ಮಾಲೀಕ ನೀಲಿಕಂಠ ಗ್ರಾಮದ ಪ್ರತಾಪ್ ಸಾಹೂ(35) ಎಂಬಾತನನ್ನು  ಪಟ್ಟಮುಂಡೈ ಪೊಲೀಸರು ಬಂಧಿಸಿದ್ದಾರೆ.

ಪಟ್ಟಮುಂಡೈ ಠಾಣಾಧಿಕಾರಿ ರಂಜಿತ್ ಮೊಹಂತಿ ಮಾತನಾಡಿ, ಆರೋಪಿಯು ಕೆಲವು ತಿಂಗಳ ಹಿಂದೆ  22ರ ಹರೆಯದ ಯುವತಿಯ ಜೊತೆ ಸ್ನೇಹ ಬೆಳೆಸಿ ಚೌಡಕುಲತ್‌ನಲ್ಲಿರುವ ತನ್ನ ಬ್ಯೂಟಿ ಪಾರ್ಲರ್‌ನಲ್ಲಿ ಆಕೆಗೆ ಕೆಲಸ ಕೊಡಿಸಿದ್ದಾನೆ. ಕಳೆದ ತಿಂಗಳು ಪಾರ್ಲರ್‌ನೊಳಗೆ ಯುವತಿಗೆ ನಿದ್ರೆ ಮಾತ್ರೆ ಹಾಕಿ ತಂಪು ಪಾನೀಯವನ್ನು ಆಕೆಗೆ ನೀಡಿದ್ದಾನೆ. ಆಕೆ ಪ್ರಜ್ಞಾಹೀನಳಾಗಿ ಬಿದ್ದಾಗ ಸಾಹೂ ಆಕೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ನಗ್ನ ಚಿತ್ರಗಳು ಮತ್ತು ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ ಎಂದು ಹೇಳಿದ್ದಾರೆ.

ಪ್ರತಾಪ್ ಸಾಹೂ ಬಳಿಕ ತನ್ನಲ್ಲಿದ್ದ ಖಾಸಗಿ ಫೋಟೋಗಳನ್ನು ಯುವತಿಗೆ ತೋರಿಸಿ ಬ್ಲಾಕ್ ಮೇಲ್ ಮಾಡಿದ್ದು, ಪೋಟೋ ವೈರಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಸಾಹೂ ಯುವತಿಯನ್ನು ಬ್ಲಾಕ್ ಮೇಲ್ ಮಾಡಿ ಒಂದು ತಿಂಗಳ ಕಾಲ ಅತ್ಯಾಚಾರವನ್ನು ನಡೆಸಿದ್ದಾನೆ. ಕೃತ್ಯವನ್ನು ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ಕಳೆದ ವಾರ ಯುವತಿ ಆರೋಪಿ ಸಾಹೂ ಮಾಲಕತ್ವದ ಬ್ಯೂಟಿ ಪಾರ್ಲರ್‌ ಬಿಟ್ಟು ಕೇಂದ್ರಪಾರ ಪಟ್ಟಣದ ಮತ್ತೊಂದು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಯುವತಿ ಪಟ್ಟಮುಂಡೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಐಪಿಸಿಯ ಸೆಕ್ಷನ್ 376, 420, 506 ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66, 67 ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಯುವತಿ ಮತ್ತು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂತ್ರಸ್ತೆ ಮತ್ತು ಆರೋಪಿಯ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...