Homeಮುಖಪುಟಉ.ಪ್ರದೇಶ: ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ಉ.ಪ್ರದೇಶ: ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

- Advertisement -
- Advertisement -

40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ.

ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ ಮಹಿಳೆ ಆರೋಪಿ ರಾಜ್‌ಕುಮಾರ್ ಶುಕ್ಲಾ ಅವರ ಹಿಟ್ಟಿನ ಗಿರಣಿಯನ್ನು ಸ್ವಚ್ಛಗೊಳಿಸಲು ಮನೆಗೆ ತೆರಳಿದ್ದರು. ಸ್ವಲ್ಪ ಸಮಯದ ನಂತರ ಆ ಮಹಿಳೆಯ 20 ವರ್ಷದ ಮಗಳು ಶುಕ್ಲಾ ಅವರ ಮನೆಗೆ ಹೋಗಿದ್ದಾಳೆ, ಒಳಗಿನಿಂದ ಚಿಲಕ ಹಾಕಿದ ಕೊಠಡಿಯಿಂದ ತಾಯಿಯ ಕಿರುಚಾಟ ಕೇಳಿದೆ” ಎಂದು ತಿಳಿಸಿದರು.

ಸ್ವಲ್ಪ ಸಮಯದ ನಂತರ ಕೋಣೆಯ ಬಾಗಿಲು ತೆರೆದಾಗ ಬಾಲಕಿ ತಾಯಿಯ ಶವ ಮೂರು ತುಂಡುಗಳಾಗಿ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ರಾಜ್‌ಕುಮಾರ್ ಶುಕ್ಲಾ, ಅವರ ಸಹೋದರ ಬೌವಾ ಶುಕ್ಲಾ ಮತ್ತು ರಾಮಕೃಷ್ಣ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ. ಆರೋಪಿಗಳು ನಾಪತ್ತೆಯಾಗಿದ್ದು, ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಘಟನೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಎಕ್ಸಾನಲ್ಲಿ ಪೋಸ್ಟ್ ಮಾಡಿದ ಯಾದವ್, ”ಬಂಡಾದಲ್ಲಿ ದಲಿತರೊಬ್ಬರ ಅತ್ಯಾಚಾರ ಮತ್ತು ಹೇಯ ಹತ್ಯೆಯ ಸುದ್ದಿ ಹೃದಯ ವಿದ್ರಾವಕವಾಗಿದೆ. ಉತ್ತರ ಪ್ರದೇಶದ ಮಹಿಳೆಯರು ಭಯಗೊಂಡಿದ್ದಾರೆ ಮತ್ತು ಕೋಪಗೊಂಡಿದ್ದಾರೆ” ಎಂದು ಹೇಳಿದ್ದಾರೆ.

”ಉತ್ತರ ಪ್ರದೇಶದ ಮಹಿಳೆಯರು ಬಿಜೆಪಿ ಸರ್ಕಾರದ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಈಗ ಈ ಸರ್ಕಾರದಿಂದ ಏನೂ ನಿರೀಕ್ಷೆ ಮಾಡಲಾಗುವುದಿಲ್ಲ” ಎಂದು ಯಾದವ್ ಹೇಳಿದರು.

ಇದನ್ನೂ ಓದಿ: ಮಣಿಪುರ ಪೊಲೀಸರಿಂದ ಮಹಿಳೆಯರಿಗೆ ಕಿರುಕುಳ, ಹಲ್ಲೆ: ಕುಕಿ ಶಾಸಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...