Homeಕರ್ನಾಟಕಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

- Advertisement -
- Advertisement -

ಬ್ಯಾಟರಾಯನಪುರ: ದಲಿತ ಮಹಿಳೆ ಕುಳಿತಿದ್ದ ಕುರ್ಚಿಯನ್ನು, ಗೋಮೂತ್ರದಿಂದ ಶುದ್ಧೀಕರಿಸಿ ನಂತರ ಬಳಸಿರುವ ಘಟನೆ ಇಲ್ಲಿನ ಬಾಗಲೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ದಲಿತ ಮಹಿಳೆ ಅಧ್ಯಕ್ಷರಾಗಿ ಕುಳಿತ್ತಿದ್ದ ಕುರ್ಚಿಯನ್ನು ಅವರು ಅಧಿಕಾರದಿಂದ ಕೆಳಗಿಳಿದ ಬಳಿಕ ಸವರ್ಣಿಯ ವ್ಯಕ್ತಿ ಗೋಮೂತ್ರದಿಂದ ಶುದ್ಧೀಕರಿಸಿದ್ದಾನೆ ಎಂದು ಬಿಜೆಪಿ ಎಸ್‌ಸಿ ಮೊರ್ಚಾ ಆರೋಪಿಸಿದೆ. ಈ ಕುರಿತು ಮೊರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಏನಿದು ಘಟನೆ? ಬಿಜೆಪಿ ಎಸ್‌.ಸಿ. ಮೋರ್ಚಾದ ಆರೋಪವೇನು?

ಬಾಗಲೂರು ಕಾಂಗ್ರೆಸ್ ಮುಖಂಡ, ಗ್ರಾ.ಪಂ.ಅಧ್ಯಕ್ಷ ಜೆ.ಮುನೇಗೌಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರ ಹೆಸರಲ್ಲಿ ನಕಲಿ ಖಾತೆ ತೆರೆದು ಗ್ರಾ.ಪಂ.ಹಣ ದುರುಪಯೋಗ ಪಡಿಸಿಕೊಳ್ಳುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಪ್ರಾದೇಶಿಕ ಆಯುಕ್ತರು ಬೆಂಗಳೂರು ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖೆಗಳಿಗೆ 2019ರಲ್ಲಿ ಲಿಖಿತ ದೂರು ಸಲ್ಲಿಸಲಾಗಿತ್ತು. ಸದರಿ ದೂರನ್ನು ಕಳೆದ ಎರಡು ವರ್ಷಗಳಿಂದ ಪರಿಶೀಲಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 43(ಎ) ಮತ್ತು (48(4)ರ ಅನ್ವಯ ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡ ಅವರನ್ನು ಗ್ರಾ.ಪಂ. ಅಧ್ಯಕ್ಷ ಸ್ಥಾನದಿಂದ ಅಮಾನತ್ತುಗೊಳಿಸಲಾಗಿತ್ತು.

ಅಮಾನತುಗೊಂಡ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸಿ ಉಪಾಧ್ಯಕ್ಷೆ ಯಶೋಧಮ್ಮ ಮೂರು ದಿನಗಳ ಕಾಲ ಆಡಳಿತ ನಡೆಸಿದ್ದರು. ಈ ನಡುವೆ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡ ನ್ಯಾಯಾಲಯದ ಮೊರೆ ಹೋಗಿ, ತಮ್ಮ ವಿರುದ್ಧ ಕೈಗೊಂಡಿರುವ ಅಮಾನತು ಆದೇಶವನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡರ ಮನವಿಯನ್ನು ಪರಿಶೀಲಿಸಿ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಜೆ.ಮುನೇಗೌಡರು ಪುನಃ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

(ವಿಡಿಯೊ ನೋಡಿ)

ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ಆದರೆ ಜೆ.ಮುನೇಗೌಡ ಅಮಾನತುಗೊಂಡ ವೇಳೆಯ ಮೂರು ದಿನಗಳ ಕಾಲ ಅಧ್ಯಕ್ಷರ ಕುರ್ಚಿ ಅಲಂಕರಿಸಿದ್ದ ಉಪಾಧ್ಯಕ್ಷೆ ಯಶೋಧಮ್ಮ ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯಾಗಿದ್ದು, ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅಧ್ಯಕ್ಷ ಸ್ಥಾನವನ್ನು ಪುನಃ ಅಲಂಕರಿಸಲು ಆಗಮಿಸಿದ ಜೆ.ಮುನೇಗೌಡ ಅಧ್ಯಕ್ಷರ ಕುರ್ಚಿಯನ್ನು ಗ್ರಾ.ಪಂ. ಕಚೇರಿಯಿಂದ ಹೊರತಂದು, ಅದನ್ನು ಸ್ವಚ್ಛಗೊಳಿಸಿ, ಸಗಣಿ ಮತ್ತು ಗೋಮೂತ್ರ ಪ್ರೋಕ್ಷಣೆ ಮಾಡಿದ್ದಾರೆ ಎಂದು ದೂರಲಾಗಿದೆ. ದಲಿತ ಮಹಿಳೆ ಕುರ್ಚಿಯ ಮೇಲೆ ಕುಳಿತಿದ್ದರಿಂದ ಅದು ಅಪವಿತ್ರವಾಗಿದೆ ಎಂದು ಜೆ.ಮುನೇಗೌಡ ಈ ರೀತಿ ಮಾಡಿದ್ದಾರೆ ಎಂಬುದು ದಲಿತ ಸಮುದಾಯದ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿ ಎಸ್.ಸಿ.ಮೋರ್ಚಾ ಪದಾಧಿಕಾರಿಗಳು ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಲವು ಮುಖಂಡರೊಡಗೂಡಿ ಬಾಗಲೂರು ಉಪಾಧ್ಯಕ್ಷೆ, ಘಟನೆಯ ಕೇಂದ್ರ ಬಿಂದುವಾಗಿರುವ ಯಶೋಧಮ್ಮನವರ ಮನೆಗೆ ಭೇಟಿ ನೀಡಿದ್ದಾರೆ.

ದಲಿತ ಸಮುದಾಯಕ್ಕೆ ಅಪಮಾನಿಸಿರುವ ಇಂತಹ ಕೃತ್ಯಗಳು ಮರುಕಳಿಸಬಾರದು ಹಾಗೂ ಉಪಾಧ್ಯಕ್ಷೆ ಯಶೋಧಮ್ಮ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಾಗಲೂರು ಪೊಲೀಸರಿಗೆ ಲಿಖಿತ ದೂರಿನ ಮನವಿಯನ್ನು ದಲಿತ ಮುಖಂಡರು ಮಾಡಿದ್ದಾರೆ.

“ದಲಿತ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ನ ದಲಿತ ವಿರೋಧಿತನವಿದು” ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಾಗಲೂರು ಗ್ರಾಪಂ ಸೇರಲಿದ್ದು, ಕ್ಷೇತ್ರದ ಶಾಸಕ ಕೃಷ್ಣ ಭೈರೇಗೌಡ ಅವರ ಪ್ರತಿಕ್ರಿಯೆಗೆ ‘ನಾನುಗೌರಿ.ಕಾಂ’ ಸಂಪರ್ಕಿಸಿತು. “ಈ ಕುರಿತು ಮಾಹಿತಿ ಇಲ್ಲ” ಎಂದು ಶಾಸಕರು ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...