Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...