Homeದಲಿತ್ ಫೈಲ್ಸ್ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

- Advertisement -
- Advertisement -

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

“ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ ಇಲ್ಲ. ಇದು ನನ್ನ, ನನ್ನ ಕುಟುಂಬದ, ನನ್ನ ಸಮುದಾಯದ ಹೋರಾಟ” ಎಂದು ಪ್ರೇಮ್ ಬಿರ್ಹಾಡೆ ಅಳಲು ತೋಡಿಕೊಂಡಿದ್ದಾರೆ.

ಕಾಲೇಜು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅಕ್ಟೋಬರ್ 14ರಂದು ನೀಡಿದ ಪ್ರಮಾಣಪತ್ರದ ಪ್ರತಿಯನ್ನು ಹಂಚಿಕೊಂಡಿದೆ. ಕಾಲೇಜು ಅಥವಾ ಯಾವುದೇ ಸಿಬ್ಬಂದಿಗಳು ಅವರ ಜಾತಿ ಬಗ್ಗೆ ಚರ್ಚಿಸಿಲ್ಲ. ಎಜ್ಯುಕೇಶನ್ ರೆಫೆರೆನ್ಸ್ ನೀಡದಿರುವುದು ಸಂಸ್ಥೆಯ ನಿಯಮಗಳು ಮತ್ತು ಶಿಸ್ತಿನ ಕಾರಣದಿಂದಾಗಿ ಎಂದು ತಿಳಿಸಿದೆ.

ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಈ ಕುರಿತು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಶುಕ್ರವಾರ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್ ಕಾಲೇಜು ದಲಿತ ಯುವಕನೋರ್ವನ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ದೃಢಪಡಿಸಲು ನಿರಾಕರಿಸಿದ್ದರಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಂಪನಿ ಕಳಿಸಿದ್ದ ಈ ಮೇಲ್‌ಗೆ ಪ್ರತಿಕ್ರಿಯಿಸಲು ಕಾಲೇಜಿನವರು ತಡ ಮಾಡಿದ್ದು ಏಕೆ? ಏಕೆಂದೆ, ಪ್ರೇಮ್ ಬಿರ್ಹಾಡೆ ಓರ್ವ ದಲಿತ ಯುವಕ ಎಂದು ಹೇಳಿದ್ದಾರೆ.

ಕಾಲೇಜಿನ ಕಾರಣಕ್ಕೆ ಕೆಲಸದ ಅವಕಾಶ ಕಳೆದುಕೊಂಡ ಹಿನ್ನೆಲೆ ಬಿರ್ಹಾಡೆ ಅವರ ಕುಟುಂಬವು ಕಾಲೇಜಿನ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಉದ್ದೇಶಿಸಿದೆ ಎಂದು ವಿಬಿಎ ನಾಯಕರು ಹೇಳಿದ್ದಾರೆ. ಈ ನಡುವೆ ಮಹಿಳಾ ಶಿಕ್ಷಕರನ್ನು ನಿಂದಿಸಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಿರುವುದಾಗಿ ಕಾಲೇಜು ತಿಳಿಸಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಲೇಜನ್ನು ನಡೆಸುತ್ತಿರುವ ಪ್ರೋಗ್ರೆಸಿವ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಜಾನನ್ ಎಕ್ಬೋಟೆ, “ಕಂಪನಿಯು ನಮಗೆ ಎರಡು ಇ-ಮೇಲ್‌ಗಳನ್ನು ಕಳುಹಿಸಿತ್ತು. ಒಂದು ಸೆಪ್ಟೆಂಬರ್ 30 ರಂದು, ಇನ್ನೊಂದು ಶುಕ್ರವಾರ ಬೆಳಿಗ್ಗೆ. ಇ-ಮೇಲ್‌ಗಳಿಗೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಅವಧಿಯನ್ನು ಉಲ್ಲೇಖಿಸಿರಲಿಲ್ಲ. ವಿದ್ಯಾರ್ಥಿಯು ಶಿಫಾರಸು ಪತ್ರ ಮತ್ತು ಒರಿಜಿನಲ್ ಸರ್ಟಿಫಿಕೇಟ್‌ಗಾಗಿ ಕೋರಿದ್ದರು. ಪೊಲೀಸ್ ತನಿಖೆ ಇನ್ನೂ ಬಾಕಿ ಇರುವುದರಿಂದ ಶಿಫಾರಸು ಪತ್ರವನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಕಂಪನಿಯು ಎರಡನೇ ಬಾರಿಗೆ ಇ-ಮೇಲ್ ಕಳುಹಿಸಿದ 10 ನಿಮಿಷಗಳ ಒಳಗೆ ನಾವು ಸರ್ಟಿಫಿಕೇಟ್ ಅನ್ನು ಒದಗಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...