Homeಮುಖಪುಟಮತಾಂತರದ ಆರೋಪ: ದಲಿತ ಯುವಕನಿಗೆ ಥಳಿಸಿ, ತಲೆ ಬೋಳಿಸಿ, ತಲೆಕೆಳಗಾಗಿಸಿ ಮೆರವಣಿಗೆ

ಮತಾಂತರದ ಆರೋಪ: ದಲಿತ ಯುವಕನಿಗೆ ಥಳಿಸಿ, ತಲೆ ಬೋಳಿಸಿ, ತಲೆಕೆಳಗಾಗಿಸಿ ಮೆರವಣಿಗೆ

- Advertisement -
- Advertisement -

ಖಗಾ (ಫತೇಪುರ್):  ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾನೆ ಎಂದು ಆರೋಪಿಸಿ ದಲಿತ ಯುವಕನಿಗೆ ಥಳಿಸಿ, ಬೆದರಿಕೆ ಹಾಕಿ, ತಲೆಕೆಳಗಾಗಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಪ್ರಕರಣ ಉತ್ತರಪ್ರದೇಶದ ಫತೇಪುರ್ ನಲ್ಲಿ ಬೆಳಕಿಗೆ ಬಂದಿದೆ. ಇದರ ವಿಡಿಯೋ ಕೂಡ ಮಾಡಲಾಗಿದ್ದು, ವೈರಲ್ ಆಗಿದೆ.

ಖಗಾ ಕೊತ್ವಾಲಿಯ ಅಲೈ ಗ್ರಾಮದಿಂದ ಈ ಘಟನೆ ವರದಿಯಾಗಿದೆ. ಸಂತ್ರಸ್ತ ಯುವಕ ಭಜರಂಗದಳದ ಕಾರ್ಯಕರ್ತರ ವಿರುದ್ಧ ಆರೋಪಿಸಿ ದೂರು ನೀಡಿದ್ದಾನೆ. ಶುಕ್ರವಾರ ಸಂಜೆ ಈ ವೀಡಿಯೊ ವೈರಲ್ ಆಗಿದೆ.  ವೈರಲ್ ಆಗಿರುವ ವಿಡಿಯೋ ತನ್ನ ಗಮನಕ್ಕೆ ಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಅಲೈ ಗ್ರಾಮದ ಶಿವಬರನ್ ಪಾಸ್ವಾನ್ ಅವರು, ಗುರುವಾರ ತಮ್ಮ ಮಗನ ಚಿಕಿತ್ಸೆಗೆ ಹೋಗುತ್ತಿದ್ದಾಗ, ಆ ಪ್ರದೇಶದ ಬಜರಂಗದಳದ ಕಾರ್ಯಕರ್ತ ರೋಹಿತ್ ಕೆಲವು ಸ್ನೇಹಿತರೊಂದಿಗೆ ನನ್ನನ್ನು ಸುತ್ತುವರೆದರು. ಧಾರ್ಮಿಕ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪ ಮಾಡುತ್ತಾ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಶುಕ್ರವಾರ ಬೆಳಗ್ಗೆ ಉನ್ನಾವೊದಿಂದ ಹಿಂತಿರುಗಿದಾಗ ಬಜರಂಗದಳ ಕಾರ್ಯಕರ್ತರು ನನ್ನನ್ನು ಹಿಡಿದು ಈ ಕೃತ್ಯ ಎಸೆಗಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಹೆಂಡತಿ ಮತ್ತು ಮಕ್ಕಳಿಗೆ ಹೊಡೆದು, ಬಲವಂತವಾಗಿ ನನ್ನ ತಲೆ ಬೋಳಿಸಿ ಊರೆಲ್ಲ ಸುತ್ತಿ ಥಳಿಸಿದರು.  ಹಲವಾರು ಗಂಟೆಗಳ ಕಾಲ ಸುತ್ತಾಡಿಸಿದ ನಂತರ, ಅವರು ನನ್ನನ್ನು ಗ್ರಾಮದ ಹೊರಗಿನ ದೇವಸ್ಥಾನಕ್ಕೆ ಕರೆದೊಯ್ದರು. ಬಲವಂತವಾಗಿ ತಲೆಬಾಗಿಸಿ, ಪೂಜೆ ಮಾಡುವಂತೆ ಒತ್ತಾಯಿಸಿದರು. ಪೊಲೀಸರಿಗೆ ದೂರು ನೀಡಿದರೂ ವರದಿ ಕ್ರಮಕೈಗೊಂಡಿಲ್ಲ. ಪೊಲೀಸ್ ಠಾಣೆಯ ಹೊರಗೂ ಬಜರಂಗದಳದವರು ನನ್ನನ್ನು ಸುತ್ತುವರಿದಿದ್ದರು ಎಂದು ಪಾಸ್ವಾನ್ ಹೇಳಿದ್ದಾರೆ.

ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ. ಎರಡು ವರ್ಷಗಳ ಹಿಂದೆ ಸಂತ್ರಸ್ತ ಯುವಕನ ವಿರುದ್ಧ ಧರ್ಮ ಮತಾಂತರ ಪ್ರಕರಣ ದಾಖಲಾಗಿತ್ತು ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಬಜರಂಗದಳದ ಜಿಲ್ಲಾ ಸಂಚಾಲಕ ರಾಜು ಸೋನಕರ್ ಮಾತನಾಡಿ, ಅಲೈ ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ. ನಾನು ವೈಯಕ್ತಿಕ ಕಾರಣಗಳಿಂದ ಫತೇಪುರದಿಂದ ಹೊರಗಿದ್ದೇನೆ ಎಂದು ಹೇಳಿದ್ದಾರೆ. ವಿಎಚ್‌ಪಿ ಜಿಲ್ಲಾಧ್ಯಕ್ಷ ಕೆ.ಕೆ. ಮಿಶ್ರಾ ಹಲ್ಲೆ ಆರೋಪವನ್ನು ತಳ್ಳಿಹಾಕಿದ್ದು, ಯುವಕನನ್ನು ಮನೆಗೆ ಮರಳುವಂತೆ ಮಾಡಲಾಗಿದೆ. ಅವರು ತಮ್ಮ ಸ್ವಂತ ಇಚ್ಛೆಯ ಮೇರೆಗೆ ಹಿಂದೂ ಧರ್ಮಕ್ಕೆ ಮರಳಿದ್ದಾರೆ ಮತ್ತು ಎಲ್ಲಾ ಹಿಂದೂ ಆಚರಣೆಗಳನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯುವಕನು ಥಳಿಸಲಾಗಿದೆ ಮತ್ತು ಬಲವಂತವಾಗಿ ಗ್ರಾಮದ ಸುತ್ತಲೂ ಕರೆದೊಯ್ಯಲಾಗಿದೆ ಎಂದು ಫತೇಪುರ್ ಎಸ್ಪಿ ಧವಲ್ ಜೈಸ್ವಾಲ್ ಆರೋಪಿಸಿದ್ದಾರೆ.

ಯುವಕನ ಆಸೆಯಂತೆ ಮನೆಗೆ ಮರಳಿ ಅಂದರೆ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ಕರೆತರಲಾಗಿದೆ ಎಂದು ಒಂದು ಕಡೆ ಹೇಳುತ್ತಾರೆ. ಯುವಕನ ವಿರುದ್ಧ 2022ರಲ್ಲಿ ಧಾರ್ಮಿಕ ಮತಾಂತರ ಪ್ರಕರಣ ದಾಖಲಾಗಿದೆ. ದೂರಿನ ತನಿಖೆ ನಡೆಯುತ್ತಿದೆ. ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.

ಹವ್ಯಕರು  ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಿ: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...