Homeಮುಖಪುಟದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ

ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದ್ದು, ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್‌ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ ಗ್ರಾಮದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಅಂಕಿತ್ ಎಂಬ ದಲಿತ ಸಮುದಾಯಕ್ಕೆ ಸೇರಿದ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಅಂಕಿತ್ ಕುಟುಂಬದವರು ಈ ಕುರಿತು ದೂರು ದಾಖಲಿಸಿದ್ದು, ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ರವಿವಾರದಿಂದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು, ಆ ಬಳಿಕ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದು ಖತೌಲಿ ಸರ್ಕಲ್ ಆಫೀಸರ್ ರವಿಶಂಕರ್ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಂಕಿತ್‌ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವನು ಸಾವನ್ನಪ್ಪಿದ್ದಾನೆ ಎಂದು ಘೋಷಿಸಲಾಯಿತು.

ಈ ಕುರಿತು ಖತೌಲಿ ಸರ್ಕಲ್ ಆಫೀಸರ್ ರವಿಶಂಕರ್ ಮಾತನಾಡಿದ್ದು, ಘಟನೆ ಬಗ್ಗೆ ಸಂತ್ರಸ್ತನ ಕುಟುಂಬಸ್ಥರು ಪ್ರಕರಣವನ್ನು ದಾಖಲಿಸಿದ್ದಾರೆ. ತನಿಖೆಯ ಭಾಗವಾಗಿ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು  ಅಂಕಿತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತ ವರದಿ ಬಂದ ಬಳಿಕ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಠಿಣ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯಿದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಪ್ರಕರಣವು ಸ್ಥಳೀಯರ ಭಾವನೆಯನ್ನು ಕೆರಳಿಸಿದ್ದು, ಯುವಕನ ಹತ್ಯೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಪೊಲೀಸರು ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನಿಗಾ ವಹಿಸಿದ್ದಾರೆ.

ಇದನ್ನು ಓದಿ: ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...