Homeಕರ್ನಾಟಕಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ...

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

- Advertisement -
- Advertisement -

ಬೈಕ್ ಮುಟ್ಟಿದ್ದನ್ನೆ ನೆಪವಾಗಿಟ್ಟುಕೊಂಡು ದಲಿತ ಯುವಕನನ್ನು ಸವರ್ಣಿಯ ಗುಂಪೊಂದು ಅರೆಬೆತ್ತಲುಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಜರುಗಿದೆ.

ಜುಲೈ 18ರ ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ನೀಡಿದ ದೂರಿನ ಮೇರೆಗೆ 13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಘಟನೆಯ ವಿವರ: 28 ವರ್ಷದ ದಲಿತ ಯುವಕ ಕಾಶಿನಾಥ ತಳವಾರ ತನ್ನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ಜೊತೆ ಜುಲೈ 18ರಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ 25ಕ್ಕೂ ಹೆಚ್ಚು ಜನರಿದ್ದ ಸವರ್ಣಿಯರ ಗುಂಪು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ.

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: ಬಂಧನಕ್ಕೆ ಒತ್ತಾಯ

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

Posted by Naanu Gauri on Monday, July 20, 2020

ವೈರಲ್ ಆಗಿರುವ ಮನಕಲಕುವ ವಿಡಿಯೋದಲ್ಲಿರುವಂತೆ, ಕಾಶಿನಾಥನನ್ನು ಪ್ಯಾಂಟ್ ಕಿತ್ತು ಆತನ ಮೇಲೆ ಕೋಲು ಮತ್ತು ಚಪ್ಪಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಆತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಸಹ 30ಕ್ಕೂ ಹೆಚ್ಚು ಜನ ಹಲ್ಲೆಯನ್ನು ನಿಂತು ನೋಡುತ್ತಿದ್ದಾರೆಯೇ ಹೊರತು ಯಾರೋಬ್ಬರೂ ಸಹ ಸಹಾಯಕ್ಕೆ ಬಂದಿಲ್ಲ. ಮುಂದೆ ಹೋಗುತ್ತಿದ್ದ ಯುವಕನ ತಂದೆ ಓಡಿಬಂದು ತನ್ನ ಮಗನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸವರ್ಣಿಯ ಜಾತಿಗೆ ಸೇರಿದ ಮಹಾಂತೇಶ, ಮುತ್ತಣ್ಣ ಮಹಾದೇವಪ್ಪ, ಶರಣಗೌಡ, ಸಂಗನಗೌಡ ಮುಂತಾದವರು ತನ್ನ ಗಾಡಿ ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂಬ ನೆಪವಿಟ್ಟುಕೊಂಡು ಸಣ್ಣ ಜಾತಿಯವರು ನೀವು, ಕೆಟ್ಟದಾಗಿ ನಿಂದಿಸಿ ಜಾತಿನಿಂದನೆ ಮಾಡಿದ್ದಾರೆ, ನಿಮ್ಮನ್ನು ಜೀವ ಸಹಿತ ಇರಲು ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ, ನನ್ನ ಮಗನನ್ನು ಬಿಡಿಸಿಕೊಳ್ಳಲು ಹೋದಾಗ ನನ್ನ ಮತ್ತು ನನ್ನ ಕುಟುಂಬದವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಯಂಕಪ್ಪ ಹುಸೇನಪ್ಪ ತಳವಾರ ಆರೋಪಿಸಿದ್ದಾರೆ.

ಆ ಸಮಯದಲ್ಲಿ ಅದೇ ದಾರಿಯಲ್ಲಿ ಮುದ್ದೇಬಿಹಾಳ ಸಿಪಿಐರವರು ಬಂದ ಕಾರಣ ಆರೋಪಿಗಳು ಓಡಿ ಹೋದರು. ನಂತರ ಆಂಬುಲೆನ್ಸ್‌ನಲ್ಲಿ ನನ್ನ ಮಗನನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೂರಿನ ಆಧಾರದಲ್ಲಿ ಸೆಕ್ಷನ್ 143,147, 324, 354, 504, 506, 149 ಮತ್ತು  ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳಡಿಯಲ್ಲಿ ತಾಳಿಕೋಟೆ ಪೊಲೀಸರು 13ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅಧಿಕೃತವಾಗಿ ಯಾರನ್ನು ಬಂಧಿಸದಿರುವುದು ದಲಿತ ಮುಖಂಡರಲ್ಲಿ ಆಕ್ರೋಶ ಹುಟ್ಟುಹಾಕಿದೆ.

 

 

 

 

 

 

ವಕೀಲರು ಮತ್ತು ದಲಿತ ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ “ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿಯವರ ಹಿಂಬಾಲಕರಾಗಿದ್ದಾರೆ. ಶಾಸಕರ ಬೆಂಬಲದಿಂದಲೇ ರಾಜರೋಷವಾಗಿ ಇಂತಹ ಕುಕೃತ್ಯಗಳಲ್ಲಿ ತೊಡಗಿದ್ದಾರೆ. ಈ ಹಿಂದೆಯೂ ಜಾತಿ ವಿಚಾರಕ್ಕೆ ಜಗಳ ನಡೆದಿತ್ತು. ಈಗ ಬೈಕ್ ನೆಪದಲ್ಲಿ ಅಮಾನವೀಯವಾಗಿ ಥಳಿಸಿ, ಓಡಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ವಿಜಯಪುರ ಸಮಾನತೆಯನ್ನು ಸಾರಿದ ಬಸವಣ್ಣನವರ ನಾಡು. ಇಲ್ಲಿ ದಿನನಿತ್ಯ ದಲಿತರ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಲೇ ಇವೆ. ಕೆಲವು ಮಾತ್ರ ಮಾಧ್ಯಮಗಳ ಕಣ್ಣಿವೆ ಬೀಳುತ್ತಿವೆ. ಇದರ ಕುರಿತು ಪ್ರಜ್ಞಾವಂತರು ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದೇ ರೀತಿ ಅವರಿಗೂ ರೊಡಲ್ಲಿ ಹಾಕಿ ಬಾರಿಸಬೇಕು.
    ಅವಾಗ ಅವರಿಗೆ ಬುದ್ದಿಬರಬಹುದು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...