Homeಕರ್ನಾಟಕಕೆ.ಆರ್ ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ: ಘಟನಾ ಸ್ಥಳಕ್ಕೆ ಸಿಐಡಿ ತಂಡ ಭೇಟಿ

ಕೆ.ಆರ್ ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ: ಘಟನಾ ಸ್ಥಳಕ್ಕೆ ಸಿಐಡಿ ತಂಡ ಭೇಟಿ

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಇಂದು (ಜೂ.21, ಶನಿವಾರ) ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿರುವ ತಂಡ, ಅವರ ಪತ್ನಿಯಿಂದ ಮಾಹಿತಿ ಪಡೆದುಕೊಂಡಿದೆ.

ಬಳಿಕ, ಕೆ.ಆರ್ ಪೇಟೆ ಐಬಿಗೆ ಆಗಮಿಸಿರುವ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದವರ ಹೇಳಿಕೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಬೆಂಗಳೂರಿನಿಂದ ಸಿಐಡಿ ಡಿವೈಎಸ್‌ಪಿ ಉಮೇಶ್ ಹಾಗೂ ಸಬ್ ಇನ್‌ಸ್ಪೆಕ್ಟರ್ ದೇವರಾಜ್ ಕತ್ತರಘಟ್ಟಕ್ಕೆ ತೆರಳಿದ್ದು, ಅವರಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜಯಕುಮಾರ್ ಅವರ ಸಾವಿನ ಹಿಂದೆ ಸ್ಥಳೀಯರ ಪೊಲೀಸರ ನಿರ್ಲಕ್ಷ್ಯದ ಆರೋಪವನ್ನು ದಲಿತ, ಪ್ರಗತಿಪರ ಸಂಘಟನೆಗಳು ಮಾಡಿದ್ದವು. ಮೇ 27ರಂದು ಬೃಹತ್ ಕೆ.ಆರ್ ಪೇಟೆ ಚಲೋ ನಡೆಸಿದ್ದ ಸಂಘಟನೆಗಳು, ಪೊಲೀಸರನ್ನು ಅಮಾನತು ಮಾಡಿ, ಅವರ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿತ್ತು.

ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ದೂಡಿ ಸಜೀವವಾಗಿ ಸುಟ್ಟಿರುವ ಆರೋಪವಿದೆ. ಜಯಕುಮಾರ್‌ ಜಮೀನಿನಲ್ಲಿ ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲುಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ, ಮೇ 16ರಂದು ಜಯಕುಮಾರ್ ಕೆ.ರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್‌ ಕುಮಾರ್ ಎಂಬಾತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ದೂರು ನೀಡಿದ್ದರು. ಮರುದಿನವೇ ಅವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಸ್ತುತ, ಆರೋಪಿ ಅನಿಲ್‌ ಕುಮಾರ್ ನ್ಯಾಯಾಂಗ ಬಂಧನಲ್ಲಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...