Homeಮುಖಪುಟಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ಬಿಜೆಪಿ ನಿಂತಿರುವುದು ಆತ್ಮವಂಚನೆ: ಸಿದ್ದರಾಮಯ್ಯ

ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ಬಿಜೆಪಿ ನಿಂತಿರುವುದು ಆತ್ಮವಂಚನೆ: ಸಿದ್ದರಾಮಯ್ಯ

- Advertisement -
- Advertisement -

ಧರ್ಮಸ್ಥಳದಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಹತ್ಯೆಗೈದ ಬಜರಂಗದಳ ಮುಖಂಡನನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ. ಈ ಕೂಡಲೇ ದಲಿತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ‌ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗದಳದ ನಾಯಕ‌ನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ‌‌ ಮಣಿಯದೆ ಕೊಲೆ ಆರೋಪಿಯ‌ನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿಯು ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಫೆಬ್ರವರಿ 23 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಕನ್ಯಾಡಿಯ ಕೃಷ್ಣ ಎಂಬ ಬಜರಂಗದಳದ ಮುಖಂಡ ಅದೇ ಗ್ರಾಮದ ದಿನೇಶ್ ಎಂಬ ದಲಿತ ಯುವಕನ ಮೇಲೆ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದನು. ಆ ದೃಶ್ಯಗಳು ಸಿಸಿಕ್ಯಾಮರದಲ್ಲಿ ದಾಖಲಾಗಿದ್ದು, 45 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆನಂತರ ಫೆಬ್ರವರಿ 24 ರಂದು ಆಸ್ಪತ್ರೆಗೆ ಸೇರಿಸಲಾಯಿತಾದರೂ ಫೆಬ್ರವರಿ 25 ರಂದು ದಿನೇಶ್ ಸಾವನಪ್ಪಿದ್ದ.

ಈ ಕುರಿತು ಮೃತನ ತಾಯಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೂ ಆರೋಪಿಯನ್ನು ಬಂಧಿಸಲಾಗಿಲ್ಲ.


ಇದನ್ನೂ ಓದಿ; ಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....