Homeಕರ್ನಾಟಕತುಮಕೂರು | 'ಜೈ ಭೀಮ್' ಹಾಡು ಹಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು | ‘ಜೈ ಭೀಮ್’ ಹಾಡು ಹಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ‘ಜೈ ಭೀಮ್’ ಹಾಡು ಹಾಕಿದ್ದಕ್ಕೆ ದಲಿತ (ಮಾದಿಗ) ಯುವಕನ ಮೇಲೆ ಪ್ರಬಲ ಜಾತಿಯವರು (ಸವರ್ಣೀಯರು) ಮಾರಾಣಾಂತಿಕ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮುದ್ದನಹಳ್ಳಿ ಗ್ರಾಮದಿಂದ ಕೇಳಿ ಬಂದಿದೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೀಪು (19) ಗಂಭೀರ ಹಲ್ಲೆಗೊಳಗಾದ ಯುವಕ, ಆತನ ಜೊತೆಗಿದ್ದ ನರಸಿಂಹಮೂರ್ತಿ ಎಂಬಾತನಿಗೂ ಥಳಿಸಲಾಗಿದೆ. ರೈಲ್ವೆ ಪೊಲೀಸ್ ಎಂದು ಹೇಳಿಕೊಂಡಿರುವ ಮುದ್ದನಹಳ್ಳಿ ಗ್ರಾಮದ ನಿವಾಸಿ ಚಂದ್ರಶೇಖರ್ ಮತ್ತು ಇನ್ನೋರ್ವ ನರಸಿಂಹರಾಜು ಎಂಬವರು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಇಬ್ಬರೂ ಯುವಕರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾದ ಯುವಕರು ತಮ್ಮ ಟಾಟಾ ಏಸ್‌ ವಾಹನದಲ್ಲಿ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವಿವಿದೆಡೆಗಳಿಂದ ಹಾಲಿನ ಕ್ಯಾನ್‌ಗಳನ್ನು ಸಂಗ್ರಹಿಸಿ, ಸಿರವಾರ ಡೈರಿಗೆ ಕೊಂಡೊಯ್ಯುತ್ತಿದ್ದರು. ಜನವರಿ 4ರಂದು ಸಂಜೆ ಹಾಲಿನ ಕ್ಯಾನ್‌ಗಳನ್ನು ಸಂಗ್ರಹಿಸಲು ಹೋಗುತ್ತಿದ್ದಾಗ ರೂಢಿಯಂತೆ ತಮ್ಮ ವಾಹನದಲ್ಲಿ ‘ಜೈ ಭೀಮ್’ ಹಾಡು ಹಾಕಿದ್ದರು. ಈ ವೇಳೆ ವಾಹನ ಅಡ್ಡಗಟ್ಟಿದ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳು ವಾಹನ ಅಡ್ಡಗಟ್ಟಿ ನಾವು ರೈಲ್ವೆ ಪೊಲೀಸರು ಎಂದು ಹೇಳಿಕೊಂಡಿದ್ದು, ವಾಹನದ ದಾಖಲೆಗಳನ್ನು ಕೇಳಿದ್ದಾರೆ. ಈ ವೇಳೆ ವಾಹನ ಚಲಾಯಿಸುತ್ತಿದ್ದ ನರಸಿಂಹಮೂರ್ತಿ ಎಲ್ಲಾ ದಾಖಲೆ ನೀಡಿದ್ದಾರೆ. ಅಷ್ಟರಲ್ಲಿ ವಾಹನದಲ್ಲಿ ಕುಳಿತಿದ್ದ ದೀಪು ಅವರನ್ನು ಕೆಳಗೆಳೆದ ಆರೋಪಿಗಳು, ಅವರ ಜಾತಿ ವಿಚಾರಿಸಿ ನಿಂದನೆ ಮಾಡಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಗುಬ್ಬಿ ಪೊಲೀಸರು ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 307 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯ್ದೆ-1989 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...