Homeದಲಿತ್ ಫೈಲ್ಸ್ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ದಲಿತ ಯುವಕನ ಬೈಕ್, ಮೊಬೈಲ್ ಕಿತ್ತುಕೊಂಡು ಪದೇ ಪದೇ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿಯಲ್ಲಿ ಜರುಗಿದೆ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಆನಂತರ ಮತ್ತೆ ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸುತ್ತಿದ್ದರು. ಈ ವಿಷಯ ತಿಳಿದ ನಾನು ರಾತ್ರಿ 8.30ರ ಸಮಯದಲ್ಲಿ ನಮ್ಮ ಗ್ರಾಮದ ಹಿರಿಯರನ್ನು ಕರೆದುಕೊಂಡು ಪೆತಾಂಡ್ಲಹಳ್ಳಿಗೆ ಹೋಗಿ ಮಾತಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದೆವು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಉದಯ್ ಕಿರಣ್ ಅವಮಾನ ತಾಳಲಾರದೆ ಮನನೊಂದು ತೋಟದ ಮನೆಯಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಆರೋಪಿಗಳು ಪದೇ ಪದೇ ಜಾತಿ ದೌರ್ಜನ್ಯವೆಸಗಿರುವುದೇ ಕಾರಣವಾಗಿದೆ ಎಂದು ಮೃತನ ಸೋದರ ಮಾವ ನಾಗರಾಜ್ ಆರೋಪಿಸಿದ್ದಾರೆ.

“ಈ ವಿಚಾರ ನಂಗಲಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿ, ಆರೋಪಿಗಳ ಮೇಲೆ FIR ದಾಖಲಿಸಲಾಗಿದೆ. ಪೊಲೀಸರು ನಾಳೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಮುಳಬಾಗಿಲಿನ ಹೋರಾಟಗಾರರಾದ ಜೈಭೀಮ್ ಗಂಗಾಧರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...