Homeದಲಿತ್ ಫೈಲ್ಸ್ದಲಿತ ಯುವಕ ವೈರಮುತ್ತು ಕೊಲೆ ಪ್ರಕರಣ; ಸಂಚು ರೂಪಿಸಿದ ಗೆಳತಿಯ ತಾಯಿ ಬಂಧನ

ದಲಿತ ಯುವಕ ವೈರಮುತ್ತು ಕೊಲೆ ಪ್ರಕರಣ; ಸಂಚು ರೂಪಿಸಿದ ಗೆಳತಿಯ ತಾಯಿ ಬಂಧನ

- Advertisement -
- Advertisement -

ಸೆಪ್ಟೆಂಬರ್ 17 ರ ಬುಧವಾರದಂದು ಮೈಲಾಡುತುರೈನಲ್ಲಿ ನಡೆದ ದಲಿತ ಯುವಕ ಕೆ. ವೈರಮುತ್ತು ಕೊಲೆಗೆ ಸಂಬಂಧಿಸಿದಂತೆ ಯುವತಿಯ ತಾಯಿ ವಿಜಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ವೈರಮುತ್ತು, ವಿಜಯ ಅವರ ಮಗಳು ಮಾಲಿನಿಯೊಂದಿಗೆ ಸಂಬಂಧ ಹೊಂದಿದ್ದರು, ತಾಯಿಯು ಮಗಳ ಈ ಸಂಬಂಧವನ್ನು ತೀವ್ರವಾಗಿ ವಿರೋಧಿಸಿದ್ದರು ಎನ್ನಲಾಗಿದೆ.

ಸೆಪ್ಟೆಂಬರ್ 15 ರ ಸೋಮವಾರ ತಡರಾತ್ರಿ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ಪರೈಯರ್ ಸಮುದಾಯದ ಇಪ್ಪತ್ತೆಂಟು ವರ್ಷದ ವೈರಮುತ್ತು ಅವರನ್ನು, ಅಂತರ್ಜಾತಿ ದಂಪತಿಗಳ ಮಗಳಾದ ಮಾಲಿನಿ ಜೊತೆ ಸಂಬಂಧ ಹೊಂದಿದ್ದಕ್ಕಾಗಿ ಕೊಚ್ಚಿ ಕೊಲ್ಲಲಾಯಿತು.

ಮಾಲಿನಿಯ ತಂದೆ ಅದೇ ಪರೈಯರ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಆಕೆಯ ತಾಯಿ ವಿಜಯಾ ಚೆಟ್ಟಿಯಾರ್ ಸಮುದಾಯಕ್ಕೆ ಸೇರಿದವರು (ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ).

ಬಂಧಿತರಲ್ಲಿ ವಿಜಯಾ, ಅವರ ಮಗ ಗುಗನ್ (21), ಅನ್ಬುಣಿತಿ (19), ಮತ್ತು ಭಾಸ್ಕರ್ (42) ಸೇರಿದ್ದಾರೆ. ವಿಜಯಾ ಹೊರತುಪಡಿಸಿ ಉಳಿದವರೆಲ್ಲರೂ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಾ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಇಬ್ಬರು ಶಂಕಿತರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಪ್ರಕರಣವನ್ನು ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಬಾಲಾಜಿಗೆ ಹಸ್ತಾಂತರಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಮೈಲಾಡುತುರೈ ಎಸ್‌ಪಿ ಜಿ.ಸ್ಟಾಲಿನ್ ಪ್ರಕಾರ, ವೈರಮುತ್ತು ಅವರ ಕೊಲೆ ‘ಜಾತಿಯ ಹತ್ಯೆ’ ಅಲ್ಲ. “ವಿಜಯಾ ವೈರಮುತ್ತು ಅವರ ಆರ್ಥಿಕ ಸ್ಥಿತಿಯ ಬಗ್ಗೆ ಅಸಮಾಧಾನ ಹೊಂದಿದ್ದರು. ಮಾಲಿನಿ ತನ್ನ ಆಯ್ಕೆಯ ಹೊಂದಾಣಿಕೆಗೆ ವಿರುದ್ಧವಾಗಿ ಅವರನ್ನು ಮದುವೆಯಾಗಲು ಆಯ್ಕೆ ಮಾಡಿಕೊಂಡಿದ್ದರಿಂದ ಅವರು ಆಕ್ರೋಶಗೊಂಡರು” ಎಂದು ಎಸ್‌ಪಿ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ.

ಡಿಎಂಇಯಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದ ವೈರಮುತ್ತು, ಆದಿಯಮಂಗಲಂ ಗ್ರಾಮದ ದ್ವಿಚಕ್ರ ವಾಹನ ಮೆಕ್ಯಾನಿಕ್ ಆಗಿದ್ದರು. ಆದರೆ, ಮಾಲಿನಿ ಚೆನ್ನೈನಲ್ಲಿ ಉದ್ಯೋಗದಲ್ಲಿರುವ ಎಂಬಿಎ ಪದವೀಧರರಾಗಿದ್ದರು.

ಸೆಪ್ಟೆಂಬರ್ 14 ರಂದು, ದಂಪತಿಗಳು ಪೊಲೀಸರನ್ನು ರಕ್ಷಣೆ ಕೋರಿ ಸಂಪರ್ಕಿಸಿದ್ದರು. ಸಭೆಯಲ್ಲಿ, ಮಾಲಿನಿ ವೈರಮುತ್ತು ಅವರನ್ನು ಮದುವೆಯಾಗುವ ನಿರ್ಧಾರವನ್ನು ಪ್ರತಿಪಾದಿಸಿದರು. ಅವರ ಕುಟುಂಬವು ನಿರಾಕರಿಸಿದ ನಂತರವೂ ಅವರೊಂದಿಗೆ ವಾಸಿಸುತ್ತಿದ್ದರು. ಮಾಲಿನಿಯ ಕುಟುಂಬವು ಮದುವೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪೊಲೀಸರಿಗೆ ಲಿಖಿತ ಹೇಳಿಕೆಯನ್ನು ಸಹ ನೀಡಿತು. ಆದರೆ, ಮರುದಿನ, ವೈರಮುತ್ತು ಅವರನ್ನು ಅಡ್ಡಗಟ್ಟಿ ಕೊಲ್ಲಲಾಯಿತು.

ತಮಿಳುನಾಡು| ಪ್ರಬಲ ಜಾತಿ ಯುವತಿಯೊಂದಿಗೆ ಸಂಬಂಧ; ದಲಿತ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...