Homeದಲಿತ್ ಫೈಲ್ಸ್ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

- Advertisement -
- Advertisement -

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ವಿದ್ಯುತ್ ಶಾಕ್ ನೀಡಲಾಗಿದೆ.

ಈ ಘಟನೆ ಜೂನ್ 14 ರಂದು ರೈಸೇನ್ ಜಿಲ್ಲೆಯ ಕರ್ಮೋಡಿಯಾ ಗ್ರಾಮದಲ್ಲಿ ನಡೆದಿದ್ದರೂ, ಸುಮಾರು ಒಂದು ತಿಂಗಳ ನಂತರ ಜುಲೈ 12 ರ ಶನಿವಾರ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

https://www.facebook.com/share/r/1MSEXF8Caf/

ಟೈಮ್ಸ್ ಆಫ್ ಇಂಡಿಯಾ ಪ್ರಕಾರ, ದಲಿತರು ಯುವಕರು ಬೈರಾಗಿ ಸಮುದಾಯದವರು. ಅವರ ಮೇಲೆ ಜಮೀನಿಗೆ ನುಗ್ಗಿ ಮೋಟಾರ್ ಪಂಪ್ ಕದ್ದ ಆರೋಪ ಹೊರಿಸಲಾಗಿದೆ.

ಯುವಕರನ್ನು ಥಳಿಸಿ, ಚಿತ್ರಹಿಂಸೆ ನೀಡಿ, ವಿದ್ಯುತ್ ಶಾಕ್ ನೀಡಲಾಗಿದೆ. ವೀಡಿಯೊದಲ್ಲಿ, ಅವರು ನೋವಿನಿಂದ ಅಳುತ್ತಿರುವುದು, ಹಿಂಸೆ ನಿಲ್ಲಿಸುವಂತೆ ಬೇಡಿಕೊಳ್ಳುತ್ತಿರುವುದು ಕಂಡುಬರುತ್ತದೆ.

ರೈಸೇನ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಶುತೋಷ್ ಮಾತನಾಡಿ, “ಆರೋಪಿಗಳಿಂದ ಹಲವಾರು ಕದ್ದ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕಾಣಿಸಿಕೊಂಡ ನಂತರವೇ ಶಂಕಿತರನ್ನು ಚಿತ್ರಹಿಂಸೆ ನೀಡಿ ವಿದ್ಯುತ್ ಶಾಕ್ ನೀಡಲಾಗಿದೆ ಎಂಬ ಆರೋಪಗಳು ಹೊರಬಿದ್ದವು” ಎಂದು ಹೇಳಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಈ ಘಟನೆಯನ್ನು ಗಮನಕ್ಕೆ ತೆಗೆದುಕೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...