Homeಕರ್ನಾಟಕಕೊಪ್ಪಳದಲ್ಲಿ ದಲಿತರ ಮೇಲೆ ದೌರ್ಜನ್ಯ: ದೌರ್ಜನ್ಯಕ್ಕೊಳಗಾದವರ ಮೇಲೆಯೆ ಕೇಸು ದಾಖಲು!

ಕೊಪ್ಪಳದಲ್ಲಿ ದಲಿತರ ಮೇಲೆ ದೌರ್ಜನ್ಯ: ದೌರ್ಜನ್ಯಕ್ಕೊಳಗಾದವರ ಮೇಲೆಯೆ ಕೇಸು ದಾಖಲು!

- Advertisement -
- Advertisement -

ಕೊಪ್ಪಳ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ದಲಿತ ಯುವತಿಯರ ಮೇಲೆ ದೌರ್ಜನ್ಯ ನಡೆದ ಬಗ್ಗೆ ವರದಿಯಾಗಿದೆ. ಹೋಳಿ ಹಬ್ಬದ ಕಾಮದಹನ ಮಾಡುವ ಸಮಯದಲ್ಲಿ ಈ ಘಟನೆ ನಡೆದಿದೆ. ವಿಧಾನ ಸಭೆಯ ಅಧಿವೇಶನದಲ್ಲಿ ದೇಶದ ಸಂವಿಧಾನ, ಅಂಬೇಡ್ಕರ್ ಹಾಗೂ ಅಸ್ಪೃಶ್ಯತೆ ಕುರಿತು ಶಾಸಕರು, ಸಚಿವರು ಚರ್ಚೆ ನಡೆಸುತ್ತಿದ್ದರೆ ಇಲ್ಲಿ ದಲಿತರ ಸ್ವಾಭಿಮಾನ ಕಿತ್ತುಕೊಳ್ಳಲಾಗುತ್ತಿದೆ.

ಕೊಪ್ಪಳ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ಕಾಮದಾಹನ ಮಾಡುವ ಸಂದರ್ಭ 11 ವರ್ಷದ ಗುಡದಪ್ಪ ಎನ್ನುವ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ. ಬಾಲಕನ ತಾಯಿ ಮರಿಯಮ್ಮ ಮತ್ತು ಸಹೋದರ ಸಂಬಂಧಿಗಳಾದ ಶೋಭಾ(13) ಮತ್ತು ಮಂಜುಳಾ(14) ಎಂಬ ಬಾಲಕಿಯರ ಮೇಲೆ ಕೂಡಾ ಹಲ್ಲೆ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ ಅಂಬೇಡ್ಕರ್ ಭಾವಚಿತ್ರಕ್ಕೆ ಕೂಡಾ ಕಲ್ಲು ಎಸೆಯಲಾಗಿದೆ ಎನ್ನಲಾಗಿದೆ.

ದೌರ್ಜನ್ಯಕ್ಕೊಳಗಾದ ದಲಿತರ ಮೇಲೆಯೆ ಮುನೀರಾಬಾದ್ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಘಟನೆಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಂಜಿಗಾಲಪ್ಪ ಪ್ರಮುಖ ಕಾರಣ ಎಂಬ ಆರೋಪವಿದೆ. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಕೊಪ್ಪಳ ತಾಲೂಕಿನ ಮೈನಹಳ್ಳಿಯಲ್ಲಿ ಕೂಡಾ ದಲಿತರು ದೌರ್ಜನ್ಯಕ್ಕೆ ಒಳಗಾಗಿದ್ದರು ಅಲ್ಲದೆ ದೌರ್ಜನ್ಯಕ್ಕೊಳಗಾದ 20 ಜನ ದಲಿತರ ಮೇಲೆಯೆ ಕೇಸು ದಾಖಲಿಸಲಾಗಿತ್ತು.

ಘಟನೆಯ ಬಗ್ಗೆ ವಿಠಪ್ಪ ಗೋರಂಟ್ಲಿ, ಭಾರದ್ವಜರವರ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಮುಂದುವರೆಯಲು ಪೋಲಿಸ್ ಅಧಿಕಾರಿಗಳು ಕೂಡಾ ಪ್ರಮುಖ ಕಾರಣರಾಗಿದ್ದಾರೆ. ಕೇಸ್, ಕೌಂಟರ್ ಕೇಸ್ ರಾಜಕೀಯ ನಡೆಯುವುದರಿಂದ, ದೌರ್ಜನ್ಯ ಮಾಡುವವರಿಗೆ, ಕಾಯ್ದೆಯ ಮತ್ತು ಪೋಲಿಸ್ ವ್ಯವಸ್ಥೆಯ ಭಯ ಇಲ್ಲವಾಗಿದೆ. ರಾಜಕೀಯ ಒತ್ತಡಕ್ಕೊಳಗಾಗುವ ಪೋಲಿಸ್ ಅಧಿಕಾರಿಗಳು ದೌರ್ಜನ್ಯಕ್ಕೊಳಗಾದ ದಲಿತರ ಮೇಲೆ ಸುಳ್ಳು ಕೇಸ್ ದಾಖಲಿಸುತ್ತಾರೆ. ಈ ಕಾರಣದಿಂದಲೇ ದೌರ್ಜನ್ಯ ಮಾಡುವ ದುರಹಂಕಾರಿಗಳಿಗೆ ಇನ್ನಷ್ಟು ಪುಷ್ಟಿ ದೊರೆತಂತಾಗುತ್ತದೆ ಎಂದು ಕರ್ನಾಟಕ ರೈತ ಸಂಘ (AIKKS)ದ ರಾಜ್ಯಾಧ್ಯಕ್ಷರಾದ ಡಿ.ಎಚ್‌ ಪೂಜಾರ್‌ರವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...