Homeಚಳವಳಿಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

ಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

"ನಾವು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಪಾಲಿನ ತುಂಡು ಭೂಮಿ ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ"

- Advertisement -
- Advertisement -

ಜೀವ ಬಿಟ್ಟರೂ ಸರಿಯೆ, ನಮ್ಮ ಪಾಲಿನ ತುಂಡು ಭೂಮಿ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಮಂಡ್ಯ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ದಲಿತರು ಕರ್ನಾಟಕ ಗೃಹ ಮಂಡಳಿಯ ಭೂಸ್ವಾಧೀನ ವಿರುದ್ಧ ಸತತ ಮೂರು ದಿನದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಗೃಹ ಮಂಡಳಿಯು ಮಂಡ್ಯ ತಾಲ್ಲೂಕಿನ ತೂಬಿನಗೆರೆ ಗ್ರಾ.ಪಂ.ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದ ಸಮೀಪ ಹೊಸ ಬಡಾವಣೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸೇರಿದ 21 ಎಕರೆ ತೋಟಿ ಇನಾಂ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಡಾ.ಬಾಬೂಜಿ ಮತ್ತು ಡಾ.ಭೀಮ್ ರಾವ್ ಯುವಕರ ಸಂಘದ ನೇತೃತ್ವದಲ್ಲಿ ನೂರಾರು ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದಲಿತರನ್ನು ಮತ್ತೆ ಗುಲಾಮಗಿರಿಗೆ ದೂಡುವ ಹುನ್ನಾರ – ಸ್ವಾಮಿ ವೈ.ಜೆ

ಗ್ರಾಮದ ಯುವ ದಲಿತ ಮುಖಂಡ ವೈ.ಜೆ ಸ್ವಾಮಿ ಮಾತನಾಡಿ, “200 ವರ್ಷಗಳಿಂದ ನಮ್ಮ ಹಿರೀಕರು ದುಡಿದ ಪರಿಣಾಮ ನಮ್ಮ 20 ದಲಿತ ಕುಟುಂಬಗಳಿಗೆ 21 ಎಕರೆ ತೋಟಿ ಇನಾಂ ಭೂಮಿ ಸಿಕ್ಕಿದೆ. ಆ ಭೂಮಿಯನ್ನು ನಂಬಿಕೊಂಡು ನಾವು ಕೃಷಿ-ಹೈನುಗಾರಿಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಈ ತುಂಡು ಭೂಮಿಯನ್ನು ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಸಾಕು ಆಡು-ಕುರಿಗಳು, ಹಸು-ದನಗಳು ಅಪ್ಪಿ ತಪ್ಪಿ ಸವರ್ಣಿಯರ ಹೊಲ- ಗದ್ದೆಗೆ ಹೋಗಿಬಿಟ್ಟರೆ ಆಕಾಶವೇ ಉರುಳಿಹೋದ ಹಾಗೆ ಆಡುತ್ತಾರೆ. ದಲಿತರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದು ತಪ್ಪಬೇಕು, ನಮ್ಮ ಭೂಮಿಯಲ್ಲಿ ನಾವು ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ನಮ್ಮ ಭೂಮಿಯನ್ನು ಚಿಲ್ಲರೆ ಕಾಸು ಕೊಟ್ಟು ಕಿತ್ತುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಒಂದು ವೇಕೆ ಕೆಎಚ್‌ಬಿ ಭೂಸ್ವಾಧೀನ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ಹಿರಿಯರು  ಮಾತನಾಡಿ, “ನಮಗೆ ಈ ಭೂಮಿಯೇ ಗತಿ. ನಮ್ಮ ಮಕ್ಕಳ ಭವಿಷ್ಯಕ್ಕೆ ಇರುವುದು ಈ ಭೂಮಿ ಮಾತ್ರ. ಹಾಗಾಗಿ ನೀವು ಏನು ಮಾಡಿದರೂ ಸಹ ಈ ಭೂಮಿ ಬಿಟ್ಟುಕೊಡುವುದಿಲ್ಲ. ಎಷ್ಟು ದುಡ್ಡು ಕೊಟ್ಟರೂ ನಾವು ಭೂಮಿ ಬಿಡುವುದಿಲ್ಲ. ಬಡವರಿಗೆ ದಯವಿಟ್ಟು ಮೋಸ ಮಾಡಬೇಡಿ” ಎಂದು ಅಳಲು ತೋಡಿಕೊಂಡರು.

ಕೃಷಿ ಯೋಗ್ಯ ಭೂಮಿಯ – ಕೆರೆಯ ವಶಕ್ಕೆ ವಿರೋಧ

ಎಲೆಚಾಕನಹಳ್ಳಿ ಗ್ರಾಮದ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಗೃಹ ಮಂಡಳಿಯು ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ ಸುಮಾರು 50 ಎಕರೆ ಕೃಷಿ ಯೋಗ್ಯ ಜಮೀನು ಪರಿಶಿಷ್ಟ ಜಾತಿಗೆ ಸೇರಿದ ತೋಟಿ ಇನಾಂ ಭೂಮಿಯಾಗಿದೆ. ಒಂದು ಕೆರೆ ಸಹ ಇದ್ದು ಭಾರೀ ಮಳೆಗೆ ತುಂಬಿದೆ. ಈ ಭೂಮಿಯನ್ನೆ ನಂಬಿಕೊಂಡು ಸುಮಾರು 20 ಪರಿಶಿಷ್ಟ ಜಾತಿಯ ಕುಟುಂಬಗಳು ಜೀವನ ನಡೆಸುತ್ತಿದ್ದು, ಅಲ್ಲಿ ಟಮೋಟ, ಬದನೆಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡು ಅಲ್ಲಿ ನಿವೇಶನ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಲೆ ನಿಗದಿಯಲ್ಲಿ ಭಾರಿ ತಾರತಮ್ಯ

ಅಲ್ಲದೆ ದಲಿತರ ಭೂಮಿ ವಶಪಡಿಸಿಕೊಳ್ಳುವಾಗ ಬೆಲೆ ನಿಗಧಿಯಲ್ಲಿಯೂ ಸಹ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಕೆಲವರ ಜಮೀನಿಗೆ ಎಕರೆಯೊಂದಕ್ಕೆ 52 ಲಕ್ಷ ರೂ.ಗಳ ಬೆಲೆ ನಿಗದಿ ಮಾಡಿದರೆ ದಲಿತರ ಭೂಮಿಗೆ ಎಕರೆಯೊಂದಕ್ಕೆ ಕೇವಲ 7 ಲಕ್ಷ ರೂ. ನಿಗದಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಭೂಮಿಗೆ ಎಕರೆಗೆ ಕೇವಲ 7 ಲಕ್ಷ ರೂಗಳನ್ನು ಯಾವ ಆಧಾರದಲ್ಲಿ ಮಾಡಲಾಗಿದೆ? ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ನೀಡಿ ವಂಚಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕೆರೆಯನ್ನು ಮಣ್ಣಿನಿಂದ ಮುಚ್ಚಿ ಅದರ ಮೇಲೆ ಮನೆ ಕಟ್ಟಲು ಹೊರಟಿರುವ ಕೆ.ಎಚ್.ಬಿ!

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಹೆಚ್.ಬಿ. ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೆನ್ಸ್, ಮತ್ತೊಬ್ಬ ಅಧಿಕಾರಿ ವೇಣುಗೋಪಾಲ್ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ್ದಾರೆ. ಆದರೆ ಭೂ ಸ್ವಾಧೀನ ಕೈಬಿಡುವುದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಲದಿಗೆ ಜೆಸಿಬಿ ಯಂತ್ರಗಳನ್ನು ತಂದು ಕಾಮಗಾರಿ ಆರಂಭಿಸಲಾಗುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ವೈ.ಜೆ ಸ್ವಾಮಿ, ದಿನೇಶ್, ಗವಿ, ಬೋರಯ್ಯ, ಜವರಯ್ಯ, ಸಾಗರ್ ಮತ್ತಿತರರು ಹೋರಾಟದ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ; ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...