Homeಮುಖಪುಟದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಹೆಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

- Advertisement -
- Advertisement -

ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದರು.

ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದರು.

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಹಲವು ಸಂಘಟನೆಗಳ ವತಿಯಿಂದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂದರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ.ಸಾಗರ್ ಸೇರಿ 35 ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದರು.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಹೆಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಇದನ್ನೂ ಓದಿ; ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...