Homeಮುಖಪುಟಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವಂತೆ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದ ಧುಲೆ ಕ್ಷೇತ್ರದಲ್ಲಿ ಶೋಭಾ ಬಚಾವ್ ಪರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ತಮ್ಮ ಪಕ್ಷವನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ಆಗ್ರಹಿಸಿದ್ದಾರೆ.

ಸ್ವಾತಂತ್ರ್ಯದ ಮೊದಲು ಬಡವರು, ದಲಿತರು ಮತ್ತು ಆದಿವಾಸಿಗಳನ್ನು ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿತ್ತು. ನೀವು ಮೋದಿ ಮತ್ತು ಶಾಗೆ ಮೂರನೇ ಅವಧಿಗೆ ಅಧಿಕಾರವನ್ನು ನೀಡಿದರೆ, ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆ, ನಾವು ಮತ್ತೆ ಗುಲಾಮರಾಗುತ್ತೇವೆ. ನೀವು ನಿಮ್ಮ ಸ್ವಂತಕ್ಕಾಗಿ ಮತ್ತು ನಿಮ್ಮ ಸ್ವಂತ ಜನರಿಗಾಗಿ ಮತ ಚಲಾಯಿಸಬೇಕು. ನಾವು ಸಂವಿಧಾನವನ್ನು ಉಳಿಸಬೇಕಾಗಿದೆ. ಈ ಚುನಾವಣೆ ದೇಶದ ಭವಿಷ್ಯವನ್ನು ರೂಪಿಸುತ್ತದೆ ಹೀಗಾಗಿ ಇದೊಂದು ಮಹತ್ವದ ಚುನಾವಣೆಯಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನ ಇಲ್ಲದಿದ್ದರೆ, ನಿಮ್ಮನ್ನು ಉಳಿಸಲು ಯಾರೂ ಇರುವುದಿಲ್ಲ, ಸಂವಿಧಾನವನ್ನು ಬದಲಾಯಿಸಬೇಕು ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ 2015ರಲ್ಲಿ ಹೇಳಿದ್ದರು. ನಂತರ ಹಲವು ಬಿಜೆಪಿ ಸಂಸದರು ಮತ್ತು ಕೇಸರಿ ಪಕ್ಷದ ನಾಯಕರು ಕೂಡ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು  ಖರ್ಗೆ ಹೇಳಿದ್ದಾರೆ.

ಪ್ರಧಾನಿ ಮೋದಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರುವ ಬೇಡಿಕೆಯನ್ನು ಮೋದಿ ಈಡೇರಿಸಿಲ್ಲ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಹೇಳಿಕೊಂಡಿದ್ದರು, ಆದರೆ ಉದ್ಯೋಗ ಸೃಷ್ಟಿಸಿಲ್ಲ. ಮೋದಿ ಹೇಳಿರುವಂತೆ ರೈತರ ಆದಾಯ ಹೆಚ್ಚಳವಾಗಿಲ್ಲ, ಬದಲಾಗಿ ತಪ್ಪು ನೀತಿಗಳಿಂದ ಬೆಳೆಗಾರರ ಉತ್ಪಾದನಾ ವೆಚ್ಚ ಹೆಚ್ಚಳವಾಗಿದೆ. ಹೀಗಾಗಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಉತ್ತರ ಮಹಾರಾಷ್ಟ್ರದ ಧುಲೆಯಲ್ಲಿ ಮೇ 20ರಂದು ಐದನೇ ಹಂತದ ಸಾರ್ವತ್ರಿಕ ಚುನಾವಣೆ ವೇಳೆ ಮತದಾನ ನಡೆಯಲಿದೆ. ಇಲ್ಲಿ ಬಿಜೆಪಿ ಮಾಜಿ ಕೇಂದ್ರ ಸಚಿವ ಸುಭಾಷ್ ಭಮ್ರೆ ಅವರನ್ನು ಕಣಕ್ಕಿಳಿಸಿದೆ.

ಇದನ್ನು ಓದಿ: ‘ನನ್ನನ್ನು ಯಾರೂ ಅಪಹರಣ ಮಾಡಿಲ್ಲ’: ರೇವಣ್ಣ ಕಿಡ್ನಾಪ್‌ ಮಾಡಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯಿಂದ ವಿಡಿಯೋ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...