Homeಮುಖಪುಟಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

- Advertisement -
- Advertisement -

ಕ್ರೈಸ್ತ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ. ಹಾಗಾಗಿ, ಪರಿಶಿಷ್ಟ ಸಮುದಾಯದ ವ್ಯಕ್ತಿ ಆ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್‌ ತೀರ್ಪು ನೀಡಿದೆ.

ಪಾದ್ರಿಯೊಬ್ಬರ ಮೇಲಿನ ಹಲ್ಲೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌. ಹರಿನಾಥ್‌ ಅವರಿದ್ದ ಏಕಸದಸ್ಯ ಪೀಠ, ವ್ಯಕ್ತಿಯೊಬ್ಬರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ನಂತರ, ಅವರು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯನಾಗಿ ಉಳಿಯುವುದಿಲ್ಲ. ಪರಿಶಿಷ್ಟ ಜಾತಿ ಪ್ರಮಾಣಪತ್ರ ಹೊಂದಿರುವ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೆ, ಅವರಿಗೆ ಕಾಯ್ದೆಯಡಿ ರಕ್ಷಣೆ ಇರುವುದಿಲ್ಲ ಎಂದಿರುವುದಾಗಿ barandbench.com ವರದಿ ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವ್ಯಕ್ತಿಗೆ ಮಾತ್ರ ಕಾಯ್ದೆಯನ್ನು ಅನ್ವಯಿಸಬಹುದಾಗಿದೆ. ಪಾದ್ರಿ ಸ್ವಯಂಪ್ರೇರಣೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದು, ಕಳೆದ 10 ವರ್ಷಗಳಿಂದ ಚರ್ಚ್‌ನಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಅವರಿಗೆ ರಕ್ಷಣೆ ನೀಡಲು ಅನುಮತಿಸಲಾಗದು ಎಂದು ನ್ಯಾಯಾಲಯ ಹೇಳಿದೆ ಎಂದು ವರದಿ ವಿವರಿಸಿದೆ.

ಈ ಮೂಲಕ ಪಾದ್ರಿ ವಿರುದ್ಧ ಜಾತಿ ನಿಂದನೆ ಪದ ಬಳಸಿದ ಮತ್ತು ಹಲ್ಲೆ ನಡೆಸಿದ ಗುಂಪಿನ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಹಲ್ಲೆ ಮಾಡಿದವರ ವಿರುದ್ಧ ಪೊಲೀಸರು ಎಸ್‌ಸಿ. ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಆದರೆ, ಪಾದ್ರಿ ಕ್ರೈಸ್ತ ಧರ್ಮೀಯರಾಗಿರುವುದರಿಂದ ಎಸ್‌ಸಿ ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಆರೋಪಿಗಳು ವಾದಿಸಿದ್ದರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಐಪಿಸಿಯಡಿಯ ಅಪರಾಧಗಳು ಕೂಡ ಸಾಬೀತಾಗಿಲ್ಲ. ಸುಳ್ಳು ದೂರು ದಾಖಲಿಸಲಾಗಿದ್ದು, ಪ್ರಕರಣದ ಅರ್ಜಿದಾರರನ್ನು ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುವಂತೆ ಹೇಳಿದರೆ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದು barandbench.com ತಿಳಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರ ಅಸ್ತಿತ್ವಕ್ಕೆ ಧಕ್ಕೆ: ಹಿಂದೂ ಸಂಘಟನೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...