Homeಚಳವಳಿದಲ್ಲೆವಾಲ್ ಉಪವಾಸ ಸತ್ಯಾಗ್ರಹ - ಸುಪ್ರಿಂಕೋರ್ಟ್‌ ಅಡ್ಡಿ ಎಂದು ಬಿಂಬಿಸಿದ ಪಂಜಾಬ್ ಸರ್ಕಾರದ ವಿರುದ್ಧ ಕಿಡಿ

ದಲ್ಲೆವಾಲ್ ಉಪವಾಸ ಸತ್ಯಾಗ್ರಹ – ಸುಪ್ರಿಂಕೋರ್ಟ್‌ ಅಡ್ಡಿ ಎಂದು ಬಿಂಬಿಸಿದ ಪಂಜಾಬ್ ಸರ್ಕಾರದ ವಿರುದ್ಧ ಕಿಡಿ

- Advertisement -
- Advertisement -

ಪಂಜಾಬ್ ಸರ್ಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್‌, ಸರ್ಕಾರ ಅಧಿಕಾರಿಗಳು ಮತ್ತು ಕೆಲವು ರೈತ ಮುಖಂಡರು ಮಾಧ್ಯಮಗಳಲ್ಲಿ ತಪ್ಪು ಅಭಿಪ್ರಾಯವನ್ನು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದೆ. ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸವನ್ನು ಮುರಿಯಲು ಸುಪ್ರೀಂಕೋರ್ಟ್ ಪ್ರಯತ್ನಿಸುತ್ತಿದೆ ಎಂಬಂತೆ ಬಿಂಬಿಸಲಾಗುತ್ತಿದೆ ಅದು ಹೇಳಿದೆ. ದಲ್ಲೆವಾಲ್ ಪ್ರತಿಭಟನೆ

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ದಲ್ಲೆವಾಲ್ ಅವರ ಪ್ರತಿಭಟನೆಯನ್ನು ಮುರಿಯಲು ನ್ಯಾಯಾಲಯವು ಎಂದಿಗೂ ನಿರ್ದೇಶಿಸಿಲ್ಲ, ನ್ಯಾಯಾಲಯವು ಅವರ ಆರೋಗ್ಯದ ಬಗ್ಗೆ ಮಾತ್ರ ಕೋರ್ಟ್ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ತುರ್ತು ವೈದ್ಯಕೀಯ ನೆರವು ನೀಡಬೇಕು ಎಂದು ಸ್ಪಷ್ಟಪಡಿಸಬೇಕಾಗಿದೆ ಎಂದು ಹೇಳಿದೆ. ದಲ್ಲೆವಾಲ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಾಲಯವು ಹೆಚ್ಚು ಹೇಳಲು ಬಯಸುವುದಿಲ್ಲ ಆದರೆ ಪಂಜಾಬ್ ಸರ್ಕಾರದ ಅಧಿಕಾರಿಗಳು ಮತ್ತು ಕೆಲವು ರೈತ ಮುಖಂಡರು ಮಾಧ್ಯಮಗಳಲ್ಲಿ ಬೇಜವಾಬ್ದಾರಿ ಹೇಳಿಕೆಗಳು ಸ್ಥಳದ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುವಂತೆ ತೋರುತ್ತಿದೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ. ಅಷ್ಟೆ ಅಲ್ಲದೆ, “ದಲ್ಲೆವಾಲ್ ಬಗ್ಗೆ ಕೆಲವು ರೈತ ಮುಖಂಡರ ವಿಶ್ವಾಸವನ್ನು ನಾವು ಪರಿಶೀಲಿಸಬೇಕಾಗಿದೆ” ಎಂದು ಪೀಠವು ಹೇಳಿದೆ.

ಅದಾಗ್ಯೂ, ಪಂಜಾಬ್ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು ಪರಿಸ್ಥಿತಿಯನ್ನು ಬಿಗಡಾಯಿಸುವ ಯಾವುದೇ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ ಎಂದು ಹೇಳಿದ್ದು, ದಲ್ಲೆವಾಲ್ ಅವರ ಉಪವಾಸವನ್ನು ಮುರಿಯದೆ ವೈದ್ಯಕೀಯ ನೆರವು ಪಡೆಯಲು ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದಲ್ಲೆವಾಲ್ ಅವರನ್ನು ಸರ್ಕಾರದ ವೈದ್ಯಕೀಯ ಸೌಲಭ್ಯಗಳಿಗೆ ವರ್ಗಾಯಿಸಲು ಪಂಜಾಬ್ ಸರ್ಕಾರಕ್ಕೆ ನ್ಯಾಯಾಲಯವು ಡಿಸೆಂಬರ್ 20 ರಂದು ಆದೇಶ ನೀಡಿತ್ತು. ಈ ಆದೇಶದ ಅನುಸರಣೆಯ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸುವಂತೆ ಅದು ಪಂಜಾಬ್‌ನ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ)ಗೆ ಕೇಳಿದೆ. ಜನವರಿ 6 ರಂದು ಮುಂದಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ಪಟ್ಟಿ ಮಾಡಿದೆ.

ಈ ನಡುವೆ, 2021ರ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ರೈತರ ಬೆಳೆಗಳ ಮೇಲೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಅಂದು ನೀಡಿದ್ದ ಭರವಸೆಗಳನ್ನು ಪಾಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದಲ್ಲೆವಾಲ್ ಪರವಾಗಿ ಸಲ್ಲಿಸಲಾದ ಹೊಸ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು

ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...