Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...