Homeಮುಖಪುಟತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

ತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

- Advertisement -
- Advertisement -

ಭಾರತಕ್ಕೆ ಭೇಟಿ ನೀಡಿರುವ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಮುಂದೆ, 2021ರಲ್ಲಿ ಅಫ್ಘಾನಿಸ್ತಾನದಲ್ಲಿ ಸಂಘರ್ಷವನ್ನು ವರದಿ ಮಾಡುವಾಗ ನಡೆದ, ಪುಲಿಟ್ಝರ್ ಪ್ರಶಸ್ತಿ ವಿಜೇತ ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಅವರ ಹತ್ಯೆ ವಿಷಯವನ್ನು ಪ್ರಸ್ತಾಪಿಸುವಂತೆ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ. ಸಿದ್ದಿಕಿ ಅವರನ್ನು ಬಂಧಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಫೌಂಡೇಶನ್ ಆರೋಪಿಸಿದೆ.

ಭಾರತ ಸರ್ಕಾರ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಹೊಣೆಗಾರಿಕೆ ಕಾರ್ಯವಿಧಾನಗಳ ಮೂಲಕ ಸಿದ್ದಿಕಿ ಅವರ ಸಾವಿನ ನ್ಯಾಯಕ್ಕಾಗಿ ಒತ್ತಾಯಿಸುವಂತೆ ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ.

ಮುಲ್ಲಾ ಹಸನ್ ಅಖುಂದ್, ಅಬ್ದುಲ್ ಘನಿ ಬರಾದಾರ್ ಮತ್ತು ಜಬಿಯುಲ್ಲಾ ಮುಜಾಹಿದ್ ಸೇರಿದಂತೆ ಹಿರಿಯ ತಾಲಿಬಾನ್ ನಾಯಕರನ್ನು ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಯುದ್ಧಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಹೊಣೆಯಾಗಿಸಿ ಮಾರ್ಚ್ 2022ರಲ್ಲಿ ಸಿದ್ದಿಕಿ ಪೋಷಕರು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ ಔಪಚಾರಿಕ ದೂರು ಸಲ್ಲಿಸಿದ್ದಾರೆ.

ತಾಲಿಬಾನ್ ವಿದೇಶಾಂಗ ಸಚಿವ ಈಗ ಭಾರತಕ್ಕೆ ಭೇಟಿ ನೀಡಿರುವ ಹಿನ್ನೆಲೆ, ತಾಲಿಬಾನ್‌ಗೆ ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯ ತನ್ನ ಬಾಧ್ಯತೆಗಳನ್ನು ನೆನಪಿಸಲು ಮತ್ತು ಡ್ಯಾನಿಶ್ ಹತ್ಯೆಯ ಸ್ವತಂತ್ರ ತನಿಖೆಗೆ ಸಹಕಾರ ನೀಡುವಂತೆ ಒತ್ತಾಯಿಸಲು ಭಾರತಕ್ಕೆ ಉತ್ತಮ ಅವಕಾಶ ದೊರೆತಿದೆ ಎಂದು ಸಿದ್ದಿಕಿ ಫೌಂಡೇಶನ್ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಫೋಟೋ ಜರ್ನಲಿಸ್ಟ್ ಆಗಿದ್ದ ಡ್ಯಾನಿಶ್ ಸಿದ್ದಿಕಿ ಅವರು ಜುಲೈ 2021ರಲ್ಲಿ ಕಂದಹಾರ್‌ನಲ್ಲಿ ಕರ್ತವ್ಯದಲ್ಲಿದ್ದಾಗ, ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಕಾಳಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿದ್ದಿಕಿ ಪಾಕಿಸ್ತಾನ ಗಡಿ ಬಳಿಯ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘಾನ್‌ ವಿಶೇಷ ಪಡೆಗಳ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ (ಸಿಪಿಜೆ), ರಿಪೋಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್‌) ಸೇರಿದಂತೆ ಸ್ವತಂತ್ರ ಪತ್ರಿಕಾ ಸಂಘಟನೆಗಳು ಡ್ಯಾನಿಶ್ ಸಿದ್ದಿಕಿ ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ. ಅವರ ಮೃತದೇಹದ ಮೇಲೆ ಗಂಭೀರ ಗಾಯಗಳು ಇತ್ತು ಎಂದು ಆರೋಪಿಸಿವೆ. ಆದರೆ, ತಾಲಿಬಾನ್ ಇದನ್ನು ತಳ್ಳಿ ಹಾಕಿವೆ.

ಸಿದ್ದಿಕಿ ಅವರ ಹತ್ಯೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಜಾಗತಿಕ ಪತ್ರಿಕಾ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ಹತ್ಯೆಯನ್ನು ಖಂಡಿಸಿತ್ತು ಮತ್ತು ತಾಲಿಬಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿತ್ತು.

ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ಸಿದ್ದಿಕಿ ಮಾಡಿದ್ದ ವರದಿಗೆ 2018ರ ಪುಲಿಟ್ಝರ್ ಪ್ರಶಸ್ತಿ ಮತ್ತು ಭಾರತದ ಕೋವಿಡ್‌-19 ಕುರಿತ ವರದಿಗಾಗಿ 2022ರಲ್ಲಿ ಮರಣೋತ್ತರ ಪುಲಿಟ್ಝರ್ ಪ್ರಶಸ್ತಿ ಸಿದ್ದಿಕಿ ಅವರಿಗೆ ದೊರೆತಿತ್ತು. ಸಿದ್ದಿಕಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗುರುತಿಸಲ್ಪಟ್ಟ ಭಾರತೀಯ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...