Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಎಫ್‌ಐಆರ್‌ನಲ್ಲಿ ಮಹುವಾ ಜೊತೆಗೆ 'ದರ್ಶನ್ ಹಿರಾನಂದಾನಿ' ಹೆಸರು ಉಲ್ಲೇಖ

ಪ್ರಶ್ನೆಗಾಗಿ ನಗದು ಪ್ರಕರಣ: ಎಫ್‌ಐಆರ್‌ನಲ್ಲಿ ಮಹುವಾ ಜೊತೆಗೆ ‘ದರ್ಶನ್ ಹಿರಾನಂದಾನಿ’ ಹೆಸರು ಉಲ್ಲೇಖ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಜೊತೆಗೆ ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದಾನಿ ಅವರನ್ನು ಕೂಡ ಸಿಬಿಐ ಎಫ್‌ಐಆರ್‌ನಲ್ಲಿ ಆರೋಪಿ ಎಂದು ಹೆಸರಿಸಲಾಗಿದೆ.

ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ಸಂಸದೀಯ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಹಂಚಿಕೊಂಡಿದ್ದಾರೆ ಎಂದು ಮಾಜಿ ಸಂಸದ ಮಹುವಾ ಮೊಯಿತ್ರಾ ವಿರುದ್ಧ ಈ ಹಿಂದೆ ಆರೋಪ ಮಾಡಲಾಗಿತ್ತು. ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಈ ವಾರದ ಆರಂಭದಲ್ಲಿ ಮೊಯಿತ್ರಾ ವಿರುದ್ಧದ ಆರೋಪಗಳನ್ನು ತನಿಖೆ ಮಾಡಿ ಆರು ತಿಂಗಳೊಳಗೆ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಕೇಳಿತ್ತು. ಇದಲ್ಲದೆ ಪ್ರತಿ ತಿಂಗಳು ತನಿಖೆಯ ಸ್ಥಿತಿಗತಿಗಳ ಬಗ್ಗೆ ವರದಿಗಳನ್ನು ಸಲ್ಲಿಸುವಂತೆ ಸಿಬಿಐಗೆ ತಿಳಿಸಿತ್ತು.

ಲೋಕಪಾಲ್ ಅವರ ಆದೇಶಕ್ಕೆ ಅನುಗುಣವಾಗಿ ಹೊರಡಿಸಲಾದ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಮೊಯಿತ್ರಾ, ಹಿರಾನಂದನಿ ಮತ್ತು ಅಪರಿಚಿತ ಇತರರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಮೋಯಿತ್ರಾ  ತಪ್ಪನ್ನು ನಿರಾಕರಿಸಿದ್ದಾರೆ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದಿಂದ ತೃಣಮೂಲ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.

ಮಹುವಾ ಮೊಯಿತ್ರಾ ಅವರು ಲಂಚ ಮತ್ತು ಇತರ ಪ್ರಯೋಜನಗಳನ್ನು ಪಡೆಯುವುದು ಸೇರಿದಂತೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪಗಳನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.

ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿ ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಲೋಕಸಭೆಯಲ್ಲಿ ಮಂಡಿಸಿದ್ದರು. ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದರ ಆಧಾರದಲ್ಲಿ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು. ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದನ್ನು ಪ್ರಶ್ನಿಸಿ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಹತ್ಯೆ ಶಂಕೆಯ ಮೇಲಷ್ಟೇ ವಾಹನ ಜಪ್ತಿ ಮಾಡುವಂತಿಲ್ಲ: ಸಂತ್ರಸ್ತನಿಗೆ 15 ಲಕ್ಷ ರೂ. ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶ

ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ಗೋಹತ್ಯೆಯ ಶಂಕೆಯ ಆಧಾರದ ಮೇಲೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸಂಪೂರ್ಣ ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಯಮಬಾಹಿರವಾಗಿ ವಾಹನ ಜಪ್ತಿ ಮಾಡಿ ಸಂತ್ರಸ್ತನಿಗೆ ನಷ್ಟ...

ಕ್ಯಾಬ್ ಚಾಲಕನಿಂದ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ಎಲ್ಲ ಮೃತದೇಹಗಳೂ ಪತ್ತೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದ ಪ್ರಕರಣದಲ್ಲಿ, ನವೆಂಬರ್ 9ರ ಸೋಮವಾರ ಕೊನೆಯ ಎರಡೂ ಮೃತದೇಹಗಳನ್ನೂ ಪೊಲೀಸರು ಪತ್ತೆಹಚ್ಚಿದ್ದಾರೆ. ಶಿರಾಡಿ ಘಾಟ್‌ನ ಅರಣ್ಯ...

ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪಕ್ಕೆ ಕರ್ನಾಟಕ ಸರ್ಕಾರ ಬದ್ಧ: ಸಚಿವ ರಿಜ್ವಾನ್ ಅರ್ಷದ್

ಪೆಟ್ರೋಲ್‌ನಲ್ಲಿ ನಿಗದಿಪಡಿಸಿರುವ ಶೇ.20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ತನ್ನ ವರದಿಗೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ...

ಫಿರೋಜಾಬಾದ್‌ನಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಭೀಕರ ಹಲ್ಲೆ: ಆಗ್ರಾ ಆಸ್ಪತ್ರೆಯಲ್ಲಿ 16ರ ಬಾಲಕಿ ಸಾವು 

ಉತ್ತರ ಪ್ರದೇಶ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಮೂವರು ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಅತ್ಯಂತ ಕ್ರೂರ ಹಲ್ಲೆಗೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಒಂದು ವಾರದ ಸಾವು ಬದುಕಿನ ಹೋರಾಟದ ಬಳಿಕ ಶುಕ್ರವಾರ...

ಗ್ಯಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆ: ಕೇರಳದ ವಿಜಿಲೆನ್ಸ್ ಮುಂದೆ ಹಾಜರಾದ ಗುತ್ತಿಗೆದಾರ; ಹಿಂದಿನ ತನಿಖೆ ಸಾಕ್ಷ್ಯ ಮುಚ್ಚಿಹಾಕಿದ ಆರೋಪ

ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ತನಿಖೆ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಡೆದ ರಸ್ತೆ...

ಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ...

ಗೌರಿ ಲಂಕೇಶ್, ಕಲ್ಬುರ್ಗಿ ಹತ್ಯೆ ಪ್ರಕರಣ: 6 ತಿಂಗಳಲ್ಲಿ ವಿಚಾರಣೆ ಮುಗಿಸಿ ಆರೋಪಿಗಳನ್ನು ಜೈಲಿಗೆ ಕಳುಹಿಸುವೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಮುಂಬರುವ ಆರು ತಿಂಗಳೊಳಗೆ ಪೂರ್ಣಗೊಳಿಸಿ, ಆರೋಪಿಗಳನ್ನು ಜೈಲಿಗೆ ಕಳುಹಿಸುವುದಾಗಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಕೇರಳದ...

ದೀಪಾವಳಿಯ ಮರುದಿನ ದಟ್ಟ ಹೊಗೆಯಿಂದ ಮುಸುಕಾದ ದೆಹಲಿ ಆಕಾಶ; ಅಪಾಯಕಾರಿ ಮಟ್ಟಕ್ಕೆ ಏರಿದ ವಾಯುಮಾಲಿನ್ಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ನಗರದಾದ್ಯಂತ ಪಟಾಕಿ ಸಿಡಿಸಿದ ಪರಿಣಾಮ, ಸೋಮವಾರ ಬೆಳಗ್ಗೆ ದೆಹಲಿ ತೀವ್ರ ವಾಯುಮಾಲಿನ್ಯದ ಹೊಡೆತಕ್ಕೆ ಸಿಲುಕಿದೆ. ದಟ್ಟ ಬೂದು ಬಣ್ಣದ ಹೊಗೆಯ ಮಂಜು ನಗರದ ಆಕಾಶವನ್ನು...

‘ಉತ್ತರ ಪ್ರದೇಶದಲ್ಲಿ ನಾಗರಿಕ ಸ್ವಾತಂತ್ರ್ಯದ ಸ್ಥಿತಿ ನಾಚಿಕೆಗೇಡಿನದ್ದು’; ಹಕ್ಕುಗಳ ಉಲ್ಲಂಘನೆ ಪೊಲೀಸರಿಗೆ ದಿನನಿತ್ಯದ ಸಂಗತಿ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ರಾಜ್ಯದಲ್ಲಿನ ನಾಗರಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು 'ನಾಚಿಕೆಗೇಡಿನದ್ದು' ಎಂದು ಬಣ್ಣಿಸಿದೆ. ನಾಗರಿಕರ...

ಗಾಜಾದಲ್ಲಿ ಟೆಂಟ್‌ಗಳ ಮೇಲೆ ಕುಸಿದ ಮರಳಿನ ದಿಬ್ಬ; ನಾಲ್ವರು ಮಕ್ಕಳು ಸೇರಿ ಐವರ ಸಾವು

ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿ ಸ್ಥಳಾಂತರಗೊಂಡ ಕುಟುಂಬಗಳು ಆಶ್ರಯ ಪಡೆದಿದ್ದ ಟೆಂಟ್‌ಗಳ ಮೇಲೆ ಮರಳಿನ ದಿಬ್ಬ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆ ಸೇರಿದಂತೆ ಕನಿಷ್ಠ ಐವರು ಪ್ಯಾಲೆಸ್ತೀನಿಯರು...