Homeದಲಿತ್ ಫೈಲ್ಸ್ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

“ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಸಿಎಂಗೆ ದರ್ಶನ್‌ ಸೋಲಂಕಿಯವರ ಕುಟುಂಬ ಪತ್ರ ಬರೆದಿದೆ

- Advertisement -
- Advertisement -

ಬಾಂಬೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್‌ ಸೋಲಂಕಿ ಅವರ ಕುಟುಂಬ ಮತ್ತಷ್ಟು ಸಮಸ್ಯೆಗಳಿಗೆ ಎದುರಾಗಿದೆ. “ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಐಐಟಿ ಬಾಂಬೆಯಲ್ಲಿ ದರ್ಶನ್‌ ಜಾತಿ ತಾರತಮ್ಯವನ್ನು ಎದುರಿಸುತ್ತಿದ್ದರು ಎಂದು ಅವರ ಕುಟುಂಬ ಹೇಳಿಕೊಂಡಿತ್ತು. ಆದಾಗ್ಯೂ, ಐಐಟಿ-ಬಾಂಬೆ ಸ್ಥಾಪಿಸಿದ ತನಿಖಾ ಸಮಿತಿಯು ಈ ಆರೋಪವನ್ನು ನಿರಾಕರಿಸಿದೆ. ಸೋಲಂಕಿಯವರು ಶೈಕ್ಷಣಿಕವಾಗಿ ಹಿಂದುಳಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಸಮಿತಿ ಹೇಳಿಕೊಂಡಿದೆ.

ಈ ಎಲ್ಲ ಬೆಳವಣಿಗೆಗಳ ನಂತರ ಮತ್ತೊಂದು ಸಂಗತಿ ಹೊರಬಿದ್ದಿತ್ತು. ಸೋಲಂಕಿಯವರ ಜೊತೆಯಲ್ಲಿ ಈ ಹಿಂದೆ ಮಾತನಾಡಿದ್ದ ಹಿರಿಯ ವಿದ್ಯಾರ್ಥಿಯೊಬ್ಬರ ಆಡಿಯೊ ಕುರಿತು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು. ತಮ್ಮ ಹಾಸ್ಟೆಲ್ ರೂಮ್‌ ಬದಲಿಸಬೇಕೆಂದು, ರೂಮ್‌ಮೇಟ್‌ ಜಾತಿ ತಾರತಮ್ಯ ಎಸಗುತ್ತಿದ್ದಾನೆಂದು ಸೋಲಂಕಿ ಹೇಳಿಕೊಂಡಿದ್ದಾಗಿ ಆ ಆಡಿಯೊ ಸಂಭಾಷಣೆ ಬಹಿರಂಗಪಡಿಸಿತ್ತು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದಾರೆ.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದು, “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ದಲಿತ ವಿದ್ಯಾರ್ಥಿಯ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಸೋಲಂಕಿ ಅವರ ಸಹಪಾಠಿಯೊಬ್ಬರನ್ನು ಅದರಲ್ಲಿ ಹೆಸರಿಸಲಾಗಿದೆ ಎಂದು ಸೋಮವಾರ ಎಸ್‌ಐಟಿ ಹೇಳಿಕೊಂಡಿತ್ತು.

ಸೋಲಂಕಿ ಅವರ ಉತ್ತರ ಪತ್ರಿಕೆಗಳು ಮತ್ತು ಅವರ ಕೆಲವು ಹಳೆಯ ನೋಟ್‌ಬುಕ್‌ಗಳನ್ನು ವಶಕ್ಕೆ ಪಡೆದು ಸೂಸೈಡ್ ನೋಟ್‌ನಲ್ಲಿನ ಕೈಬರಹವನ್ನು ಹೋಲಿಕೆ ಮಾಡಲು ಎಸ್‌ಐಟಿ ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...