Homeಕರ್ನಾಟಕSSLC ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್‌‌; ಇಲ್ಲಿದೆ ಪೂರ್ತಿ ವಿವರ

SSLC ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್‌‌; ಇಲ್ಲಿದೆ ಪೂರ್ತಿ ವಿವರ

- Advertisement -
- Advertisement -

ಕರ್ನಾಟಕದ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಬಗ್ಗೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಶುಕ್ರವಾರದಂದು ಫಲಿತಾಂಶ ಪ್ರಕಟನೆಯ ದಿನಾಂಕ ಘೋಷಣೆ ಮಾಡಿದ್ದಾರೆ

ಮೇ 19 ರಂದು ಕರ್ನಾಟಕದ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ನಾಗೇಶ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳು ರೋಲ್‌ ನಂಬರ್‌‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
    (ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು)
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.

ಪರೀಕ್ಷೆಯ ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಬಾರಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರ ಫಲಿತಾಂಶ ಪ್ರಕಟವಾಗುತ್ತದೆ.

ಇದನ್ನೂ ಓದಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮೇ 19ರಂದು Naanugauri.com ಫಲಿತಾಂಶದ ಪೂರ್ಣ ವಿವರಗಳನ್ನು ಪ್ರಕಟಿಸುತ್ತದೆ. ಆಸಕ್ತರು ನಾನುಗೌರಿ ವಾಟ್ಸಾಪ್ ಗುಂಪಿಗೆ ಸೇರಿ ಫಲಿತಾಂಶ ಪಡೆಯಬಹುದು. ವಾಟ್ಸಾಪ್ ಗುಂಪು ಸೇರಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

9 COMMENTS

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...