Homeಕರ್ನಾಟಕದತ್ತಪೀಠ ಬಾಬಾಬುಡನ್ ದರ್ಗಾ ವಿವಾದ ಶಾಶ್ವತವಾಗಿ ಬಗೆಹರಿಸುತ್ತೇವೆ: ಗೃಹ ಸಚಿವ ಪರಮೇಶ್ವರ

ದತ್ತಪೀಠ ಬಾಬಾಬುಡನ್ ದರ್ಗಾ ವಿವಾದ ಶಾಶ್ವತವಾಗಿ ಬಗೆಹರಿಸುತ್ತೇವೆ: ಗೃಹ ಸಚಿವ ಪರಮೇಶ್ವರ

- Advertisement -
- Advertisement -

ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‌ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ದತ್ತಪೀಠ ಬಾಬಾಬುಡನ್ ದರ್ಗಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿಶೇಷ ಅರ್ಜಿ ಕುರಿತು ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರುಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಮೇಶ್ವರ ಅವರು ಶುಕ್ರವಾರ ಸಮಾಲೋಚನಾ ಸಭೆ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ದಾಖಲೆಗಳು ಶಾಶ್ವತವಾಗಿ ಇರುವಂತಹವು.‌ ಈ ವಿಚಾರದಲ್ಲಿ ಕಾನೂನಿನ ಸಲಹೆ ಪಡೆಯಬೇಕಾಗುತ್ತದೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ. ಅಲ್ಲಿ ಶಾಂತಿ ಸಾಮರಸ್ಯ ನೆಲೆಸುವಂತೆ‌ ಮಾಡಬೇಕು. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ” ಎಂದು ಅವರು ಸಭೆಯಲ್ಲಿ ತಿಳಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರದೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್‌ಗಿರಿ ದರ್ಗಾ ಕರ್ನಾಟಕದಲ್ಲಿ ಭಾವೈಕ್ಯತೆಯ ಸ್ಥಳ. 1975ರವರೆಗೆ ಒಂದು ರೀತಿಯ ಕಾರ್ಯಕ್ರಮಗಳು ನಡೆದರೆ, ತದನಂತರದ ದಿನಗಳಲ್ಲಿ ಅನೇಕ ಗೊಂದಲಗಳನ್ನು ಕಂಡಿದ್ದೇವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಪ್ರಯತ್ನಗಳನ್ನು ಮಾಡಿದೆ ಎಂದು ಹೇಳಿದ್ದಾರೆ. ದತ್ತಪೀಠ ಬಾಬಾಬುಡನ್ ದರ್ಗಾ

ಹಿಂದು, ಮುಸ್ಲಿಂ ಸಮುದಾಯದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಸಮಿತಿ, ಸಚಿವ ಸಂಪುಟ ಉಪ ಸಮಿತಿಗಳನ್ನು ರಚಿಸಿ ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್‌ಗೆ ತಿಳಿಸಲಾಗಿದ್ದು, ತೀರ್ಪುಗಳು ಬಂದಿವೆ. ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...