Homeಕರ್ನಾಟಕತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

ತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಸಚಿವ ಪಿ ಕೆ ಸೇಕರ್ ಬಾಬು ಅವರ ನವವಿವಾಹಿತ ಪುತ್ರಿ ಜಯಕಲ್ಯಾಣಿ ಸೋಮವಾರ ತನ್ನ ತಂದೆಯಿಂದ ಬೆದರಿಕೆಗೆ ಒಳಗಾಗಿ ಬೆಂಗಳೂರು ನಗರ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಬಾಬು ಅವರು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಪ್ತರಾಗಿದ್ದಾರೆ ಎಂದು ಡಿಎಚ್‌ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ವೈದ್ಯೆಯಾಗಿರುವ ಜಯಕಲ್ಯಾಣಿ ಅವರು ಕುಟುಂಬದವರ ತೀವ್ರ ವಿರೋಧದ ನಡುವೆಯೂ ಡಿಪ್ಲೊಮಾ ಪದವೀಧರರಾಗಿ ಉದ್ಯಮಿಯಾಗಿರುವ ಸತೀಶ್ ಕುಮಾರ್ ಅವರನ್ನು ವಿವಾಹವಾಗಿದ್ದಾರೆ.

ರಾಜ್ಯದ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲಸ್ವಾಮಿ ಮಠದಲ್ಲಿ ನಡೆದ ವಿವಾಹದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಜಯಕಲ್ಯಾಣಿ, “ಸತೀಶ್ ಮತ್ತು ನಾನು ಸುಮಾರು ಆರು ವರ್ಷಗಳಿಂದ ಸ್ನೇಹ ಹೊಂದಿದ್ದೇವೆ. ಮದುವೆಯಾಗಲು ನಮ್ಮ ಮನೆಯನ್ನು ತೊರೆದು ಬಂದಿದ್ದೇವೆ. ನಾವಿಬ್ಬರೂ ಪ್ರಾಪ್ತ ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆಯ ಮಾಡಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಸತೀಶ್‌ ಅವರ ಕುಟುಂಬಕ್ಕೆ ಬೆದರಿಕೆ ಹಾಕಬೇಡಿ ಎಂದು ಜಯಕಲ್ಯಾಣಿ ಅವರು ತನ್ನ ತಂದೆಯಾದ ಸಚಿವ ಪಿ.ಕೆ. ಸೇಕರ್ ಬಾಬು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ವರದಿಯ ಪ್ರಕಾರ ಜಯಕಲ್ಯಾಣಿ ಅವರಿಗೆ 24 ವರ್ಷ, ಸತೀಶ್‌ ಅವರಿಗೆ 27 ವರ್ಷ ವಯಸ್ಸಾಗಿದೆ.

ಮೂಲಗಳ ಪ್ರಕಾರ ಹುಡುಗಿಯ ಮನೆಯವರು ಆಕೆಯನ್ನು ಬೇರೆ ಸಮುದಾಯದ ಶ್ರೀಮಂತ ಕುಟುಂಬಕ್ಕೆ ಮದುವೆ ಮಾಡಲು ಬಯಸಿದ್ದರು. ಆದರೆ ಅವರು ಸತೀಶ್ ಜೊತೆ ಮನೆಬಿಟ್ಟು ತೆರಳಿದ್ದರು. ಇದರ ನಂತರ ಚೆನ್ನೈನಲ್ಲಿ ಜಯಕಲ್ಯಾಣಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

ವಿವಾಹ ನಡೆಸುವ ಮೊದಲು ದಂಪತಿಗಳ ವಿಚಾರಗಳನ್ನು ತಮಿಳುನಾಡಿನ ನಮ್ಮ ಮೂಲಗಳ ಮೂಲಕ ಪರಿಶೀಲಿಸಿದ್ದೇವೆ ಎಂದು ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮಿ ಅವರು ಡೆಕ್ಕನ್‌ ಹೆರಾಲ್ಡ್‌‌ಗೆ ತಿಳಿಸಿದ್ದಾರೆ.

“ನಾವು ಪ್ರೇಮ ವಿವಾಹಗಳನ್ನು ಬೆಂಬಲಿಸುವುದಿಲ್ಲ. ಆದರೆ ವೈದ್ಯೆಯಾಗಿರುವ ಕಲ್ಯಾಣಿ ತನ್ನ ಒಪ್ಪಿಗೆಯ ವಿರುದ್ಧ ಮದುವೆಯಾಗಲು ನಿರಾಕರಿಸಿ ತನ್ನ ಮನೆಯನ್ನು ತೊರೆದಿದ್ದಾರೆ. ಸತ್ಯಾಂಶ ತಿಳಿದುಕೊಂಡ ನಂತರವೇ ಹಿಂದೂ ಸಂಪ್ರದಾಯದಂತೆ ಮದುವೆ ನಡೆಸಿದ್ದೇವೆ” ಎಂದು ಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ಸಚಿವರ ಮಗಳು ರಕ್ಷಣೆ ಕೋರಿ ಇದುವರೆಗೆ ಅವರನ್ನು ಅಥವಾ ಅವರ ಕಚೇರಿಯನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಪೊಲೀಸರು ತಮಗೆ ಸಹಾಯ ಮಾಡಿಲ್ಲ ಎಂದು ಜಯಕಲ್ಯಾಣಿ ಆರೋಪಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ತನ್ನ ತಂದೆ ತನಗೆ ಬೆದರಿಕೆ ಹಾಕಲು ಸಚಿವ ಸ್ಥಾನವನ್ನು ಬಳಸುತ್ತಿದ್ದಾರೆ, ಹೀಗಾಗಿ ಅವರು ಪೊಲೀಸರ ಬೆಂಬಲವನ್ನು ಕೋರಿ ಬೆಂಗಳೂರಿಗೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು-ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...