Homeಮುಖಪುಟಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಶನ್‌ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಅವರನ್ನು ಆ ಬಳಿಕ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿ ಪ್ರಕರಣ ದಾಖಲಿಸಲಾಗಿತ್ತು. ಉತ್ತರಪ್ರದೇಶದ ಕೈಸರ್‌ಗಂಜ್ ಕ್ಷೇತ್ರದ ಹಾಲಿ ಸಂಸದರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಈ ಬಾರಿ ಟಿಕೆಟ್‌ ನೀಡಲಾಗಿಲ್ಲ. ಬದಲಾಗಿ ಆತನ ಪುತ್ರನಿಗೆ ಟಿಕೆಟ್‌ ನೀಡಲಾಗಿದ್ದು, ಕುಸ್ತಿಪಟುಗಳ ಆಕ್ಷೇಪಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಅವರ ಕಿರಿಯ ಮಗ ಕರಣ್‌ಗೆ(33) ಫೆಬ್ರವರಿಯಲ್ಲಿ ಉತ್ತರಪ್ರದೇಶ ಕುಸ್ತಿ ಅಸೋಸಿಯೇಷನ್ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಇದೇ ಕರಣ್ ಭೂಷಣ್ ಸಿಂಗ್‌ಗೆ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್‌ ನೀಡಿರುವುದು ಭಾರೀ ಟೀಕೆಗೆ ಕಾರಣವಾಗಿದೆ.

ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಭಾರತದ ಹೆಣ್ಣುಮಕ್ಕಳು ಸೋತಿದ್ದಾರೆ, ಬ್ರಿಜ್ ಭೂಷಣ್ ಗೆದ್ದಿದ್ದಾರೆ ಎಂದು ಬರೆದಿದ್ದಾರೆ. ನಾವೆಲ್ಲರೂ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ, ಬೀದಿಯಲ್ಲಿ ದಿನಗಳನ್ನು ಕಳೆದಿದ್ದೇವೆ. ಬ್ರಿಜ್ ಭೂಷಣ್ ಅವರನ್ನು ಇನ್ನೂ ಬಂಧಿಸಿಲ್ಲ. ನಾವು ಯಾವತ್ತೂ ಕೇಳಿದ್ದು ನ್ಯಾಯ ಮಾತ್ರ. ಆದರೆ ಬಂಧಿಸುವುದು ಬಿಡಿ, ಅವರ ಮಗನಿಗೆ ಟಿಕೆಟ್ ಸಿಕ್ಕಿದ್ದು ಅದು ಭಾರತದ ಕೋಟ್ಯಂತರ ಹೆಣ್ಣುಮಕ್ಕಳ ಉತ್ಸಾಹವನ್ನು ಮುರಿದಿದೆ. ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಒಬ್ಬ ವ್ಯಕ್ತಿಯ ಮುಂದೆ ಸರ್ಕಾರ ಏಕೆ ದುರ್ಬಲವಾಗಿದೆ? ನಿಮಗೆ ಬೇಕಾಗಿರುವುದು ಭಗವಾನ್ ರಾಮನ ಹೆಸರಿನಲ್ಲಿ ಮತಗಳು, ಅವರ ನೀತಿಗಳನ್ನು ಅನುಸರಿಸುವ ಬಗ್ಗೆ ನಿಮ್ಮ ನಿಲುವು ಏನು? ಎಂದು ಸಾಕ್ಷಿ ಮಲಿಕ್‌ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಬ್ರಿಜ್ ಭೂಷಣ್ ಅವರ ಸಹಾಯಕ ಸಂಜಯ್ ಸಿಂಗ್ WFI ಚುನಾವಣೆಯಲ್ಲಿ ಗೆದ್ದ ನಂತರ ಪ್ರತಿಭಟನೆ ವ್ಯಕ್ತಪಡಿಸಿ ಸಾಕ್ಷಿ ಮಲಿಕ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು.

ನಾವು ತೀವ್ರವಾಗಿ ನಿರಾಶೆಗೊಂಡಿದ್ದೇವೆ. ಕುಸ್ತಿಪಟುಗಳಿಗೆ ಇನ್ನೂ ಯಾವುದೇ ನ್ಯಾಯ ಸಿಕ್ಕಿಲ್ಲ ಮತ್ತು ಕರಣ್ ಅವರಿಗೆ ಟಿಕೆಟ್‌ ಸಿಕ್ಕಿರುವುದು ಯಾರೂ ನಮ್ಮ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸುವುದಿಲ್ಲ ಎಂಬುವುದನ್ನು ತೋರಿಸುತ್ತದೆ. ನನ್ನ ಮಗಳು ಪ್ರತಿಭಟಿಸಿ ಕುಸ್ತಿಯನ್ನು ತೊರೆದಳು. ಭಜರಂಗ್ ಮತ್ತು ವಿನೇಶ್ ತಮ್ಮ ರಾಷ್ಟ್ರೀಯ ಗೌರವಗಳನ್ನು ಹಿಂದಿರುಗಿಸಿದರು, ಎಲ್ಲವೂ ವ್ಯರ್ಥವಾಯಿತು ಎಂದು ತೋರುತ್ತದೆ ಎಂದು ಮಲಿಕ್ ಅವರ ತಾಯಿ ಹೇಳಿದ್ದಾರೆ.

ಜೂನ್ 2023ರಲ್ಲಿ ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 354D, 345Aಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ 1,000 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಸದ್ಯ ಪ್ರಕರಣದ ವಿಚಾರಣೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಕುರಿತ  ಮುಂದಿನ ವಿಚಾರಣೆ ಮೇ.7ರಂದು ನಡೆಯಲಿದೆ.

ಕುಸ್ತಿಪಟು ಜಿತೇಂದರ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕರಣ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು “ಬೆನ್ನಿಗೆ ಇರಿತ” ಎಂದು ಕರೆದಿದ್ದಾರೆ. ಇದಕ್ಕಾಗಿಯೇ ನಾವು ರಸ್ತೆಗಳಲ್ಲಿ ಮಲಗಿದ್ದೇವೆಯೇ? ನಾವು ಹೋರಾಟ ಮಾಡಿದ್ದು ಇದಕ್ಕಾಗಿಯೇ? ಬ್ರಿಜ್ ಭೂಷಣ್ ಅವರ ಜನರು WFIನ ನಾಯಕತ್ವ ವಹಿಸಿಕೊಂಡರು ಮತ್ತು ಈಗ ಅವರ ಮಗ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯ, ಬಿಜೆಪಿ ಮಹಿಳೆಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಹಾಗೂ ಪರಿವಾರವಾದ ಅಥವಾ ವಂಶಪಾರಂಪರ್ಯ ರಾಜಕಾರಣ ಆಡಳಿತಾರೂಢ ಬಿಜೆಪಿಯಲ್ಲೂ ಬೇರೂರಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...