Homeಮುಖಪುಟತನ್ನ 4 ಹೆಣ್ಣುಮಕ್ಕಳನ್ನು ಕೊಂದು ತಾನೂ ಸಾವಿಗೀಡಾದ ವ್ಯಕ್ತಿ!

ತನ್ನ 4 ಹೆಣ್ಣುಮಕ್ಕಳನ್ನು ಕೊಂದು ತಾನೂ ಸಾವಿಗೀಡಾದ ವ್ಯಕ್ತಿ!

- Advertisement -
- Advertisement -

ಒಬ್ಬ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರಿಯರು ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತಂದೆ ಮೊದಲು ಮಕ್ಕಳನ್ನು ಕೊಂದು ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಶುಕ್ರವಾರ ಕಟ್ಟಡದ ಮಾಲೀಕರಿಂದ ಕರೆ ಬಂದಿದ್ದು, ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಮಾಹಿತಿ ನೀಡಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.ತನ್ನ 4 ಹೆಣ್ಣು ಮಕ್ಕಳನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನೆರೆಹೊರೆಯವರು ಅವರನ್ನು ಕೊನೆಯದಾಗಿ ಸೆಪ್ಟೆಂಬರ್ 24 ರಂದು ನೋಡಿದ್ದರು. ಹೀಗಾಗಿ ಕಟ್ಟಡದ ಮಾಲೀಕ ಅವರ ಮನೆಯ ಬಾಗಿಲು ತಟ್ಟಿದ್ದು ತೆರೆಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಾವಿಗೀಡಾದವರ  ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಮತ್ತು ಅವರ ಮನೆಯಲ್ಲಿ ಮೂರು ಪ್ಯಾಕೆಟ್ ವಿಷ, ಐದು ಗ್ಲಾಸ್ ಮತ್ತು ಅನುಮಾನಾಸ್ಪದ ದ್ರವವನ್ನು ಹೊಂದಿರುವ ಚಮಚ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಣ್ಣು ಮಕ್ಕಳ ಸೊಂಟ ಮತ್ತು ಕುತ್ತಿಗೆಗೆ ಕೆಂಪು ದಾರವನ್ನು ಕಟ್ಟಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿಗೀಡಾದ ವ್ಯಕ್ತಿಯನ್ನು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಹೀರಾಲಾಲ್ ಶರ್ಮಾ (46) ಮತ್ತು ಅವರ ಪುತ್ರಿಯರಾದ ನೀತು(26), ನಿಕ್ಕಿ(24), ನೀರು(23) ಮತ್ತು ನಿಧಿ (20) ಎಂದು ಗುರುತಿಸಲಾಗಿದೆ. ಇಬ್ಬರು ಹೆಣ್ಣುಮಕ್ಕಳು ವಿಕಲಚೇತನರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ: FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

“ಬಾಗಿಲು ಒಳಗಿನಿಂದ ಚಿಲಕ ಹಾಕಲಾಗಿತ್ತು ಮತ್ತು ಅಗ್ನಿಶಾಮಕ ದಳದ ತಂಡದ ಸಹಾಯದಿಂದ ಪೊಲೀಸರು ತೆರೆಯಲು ಸಾಧ್ಯವಾಯಿತು. ಫ್ಲಾಟ್‌ನಲ್ಲಿ ಎರಡು ಕೊಠಡಿಗಳಿವೆ. ಮೊದಲ ಕೊಠಡಿಯಲ್ಲಿಯೇ ಒಬ್ಬ ಪುರುಷ ಶವವಾಗಿ ಬಿದ್ದಿರುವುದು ಕಂಡುಬಂದರೆ ನಾಲ್ಕು ಹೆಣ್ಣುಗಳು ಇನ್ನೊಂದು ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೆರೆಹೊರೆಯವರು ಮತ್ತು ಹತ್ತಿರದ ಸಂಬಂಧಿಕರೊಂದಿಗೆ ತನಿಖೆಯ ವೇಳೆ ಸಾವಿಗೀಡಾ ವ್ಯಕ್ತಿಯ ಪತ್ನಿ ಸುಮಾರು ಒಂದು ವರ್ಷದ ಹಿಂದೆ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ತನ್ನ 4 ಹೆಣ್ಣು ಮಕ್ಕಳನ್ನು

ಪತ್ನಿಯ ಮರಣದ ನಂತರ ಕುಟುಂಬ ವ್ಯವಹಾರಗಳಲ್ಲಿ ಆಸಕ್ತಿ ವಹಿಸುವುದನ್ನು ಸಾವಿಗೀಡಾದ ಹೀರಾಲಾಲ್‌ ನಿಲ್ಲಿಸಿದ್ದ ಎಂದು ಅವರ ಸಂಬಂಧಿಕರು ಹೇಳಿದ್ದಾರೆ. ಅವರು ಆಸ್ಪತ್ರೆಯಲ್ಲಿ ತಮ್ಮ ಹೆಣ್ಣುಮಕ್ಕಳ ಚಿಕಿತ್ಸೆಯಲ್ಲಿ ಯಾವಾಗಲೂ ನಿರತರಾಗಿದ್ದರು ಎಂದು ಅವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...