Homeಮುಖಪುಟಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಕರವೇ ಕಾರ್ಯಕರ್ತರು

ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಕರವೇ ಕಾರ್ಯಕರ್ತರು

- Advertisement -
- Advertisement -

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿ ನೀರಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಾರ್ಯಕರ್ತರು ರಕ್ತದಲ್ಲಿ ಪತ್ರವನ್ನು ಬರೆದಿದ್ದಾರೆ.

ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿದ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ , ರೈತರಿಗೆ ಮೋಸವಾಗಿದೆ. ತಕ್ಷಣ ಪ್ರಧಾನ ಮಂತ್ರಿಗಳು ತಕ್ಷಣ ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿ ರಾಜ್ಯದ ಮುಖ್ಯಮಂತ್ರಿಗಳ ತುರ್ತು ಸಭೆ ಕರೆದು ಕರ್ನಾಟಕಕ್ಕೆ ಆದ ಅನ್ಯಾಯ ಸರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದ 28 ಸಂಸದರ ನಿಯೋಗ ಪ್ರಧಾನ ಮಂತ್ರಿ ಬಳಿ ತೆರಳಿ ಕರ್ನಾಟಕದ ಸ್ಥಿತಿಗತಿಗಳ ಬಗ್ಗೆ ಮತ್ತು ನೀರಿನ ಪ್ರಮಾಣದ ಬಗ್ಗೆ ಪ್ರಧಾನಿಯವರಿಗೆ ಮನವರಿಕೆ ಮಾಡಬೇಕು ಇಲ್ಲವಾದರೆ ಮುಂದಿನ ದಿನದಲ್ಲಿ ಸಂಸದರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದು ಹೇಳಿದ್ದಾರೆ.

ಈ ವೇಳೆ ಜಬಿವುಲ್ಲಾ, ಲೋಕೇಶ್, ಗೋಪಾಲ್ ದೇವರ ಮನಿ, ಶಿವಕುಮಾರ್, ರವಿಕುಮಾರ್, ಈಶ್ವರ್, ಮಹೇಶ್ವರಪ್ಪ, ಎಂಡಿ ರಫೀಕ್, ಖಾದರ್ ಭಾಷಾ, ಆಟೋ ರಫೀಕ್, ಮುಸ್ತಫ, ಭಾಷಾ,  ದಾದಾಪೀರ್, ತನ್ವೀರ್, ಖಾದರ್ ಭಾಷಾ ಇತರರು ಇದ್ದರು.

ಇದನ್ನು ಓದಿ: ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...