Homeಮುಖಪುಟಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

ಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

- Advertisement -
- Advertisement -

ಸಿಪಿಐ(ಎಂ) ನಾಯಕಿ ಮತ್ತು ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ ಪಿ ದಿವ್ಯಾ ಅವರಿಂದ ಸಾರ್ವಜನಿಕ ಸಮಾರಂಭದಲ್ಲಿ ಟೀಕೆಗೊಳಗಾದ ಮರುದಿನವೇ, ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನವೀನ್ ಬಾಬು ಮಂಗಳವಾರ ಅವರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬಾಬು ಅವರ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ಅವರು ನಾಳೆ ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದರು.

ಸೋಮವಾರ ಕಣ್ಣೂರಿನಲ್ಲಿ ಬಾಬು ಅವರ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಅರ್ಜುನ್ ಪಾಂಡನ್ ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದಿವ್ಯಾ ಅವರನ್ನು ಆಹ್ವಾನಿಸಿರಲಿಲ್ಲ.

ಆದರೆ, ದಿವ್ಯಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾತನಾಡಿದ್ದ ಅವರು, “ಬೇರೆ ಜಿಲ್ಲೆಗೆ ತೆರಳುತ್ತಿರುವ ಎಡಿಎಂಗೆ ನಾನು ಎಲ್ಲಾ ರೀತಿಯ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಮಾಜಿ ಎಡಿಎಂ ಅಧಿಕಾರಾವಧಿಯಲ್ಲಿ ಹಲವು ಬಾರಿ ನಾನು ಅವರ ಜೊತೆ ಮಾತನಾಡಿದ್ದೆ. ಆದರೆ, ಈ ಎಡಿಎಂ ಜೊತೆ ನನಗೆ ಅಂತಹ ಅವಕಾಶ ಸಿಕ್ಕಿಲ್ಲ. ಚೆಂಗಲೈನಲ್ಲಿ ಪೆಟ್ರೋಲ್ ಬಂಕ್ ಒಂದಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ಕೊಡಿಸುವ ಬಗ್ಗೆ ಮಾತನಾಡಲು ಇವರಿಗೆ ನಾನು ಒಮ್ಮೆ ಕರೆ ಮಾಡಿದ್ದೆ. ಎಡಿಎಂ ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಲು ನಾನು ಬಯಸಿದ್ದೆ. ಬಳಿಕ ಎಡಿಎಂ ಪೆಟ್ರೋಲ್ ಬಂಕ್‌ಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದರು. ಆದರೆ, ಪೆಟ್ರೋಲ್ ಬಂಕ್ ಮಾಲೀಕ ಎಡಿಎಂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ನನ್ನ ಬಳಿ ಹಲವು ಬಾರಿ ಬಂದಿದ್ದರು. ಈ ಬಗ್ಗೆ ಎಡಿಎಂ ಅವರನ್ನು ಕೇಳಿದಾಗ, ಅಂಕುಡೊಂಕು ರಸ್ತೆಯಿಂದ ಕೆಲವು ಸಮಸ್ಯೆಗಳಿದ್ದು, ಎನ್‌ಒಸಿ ನೀಡಲು ಸಮಸ್ಯೆ ಇದೆ ಎಂದಿದ್ದರು. ನೀವು ಆಗಾಗ ಎಡಿಎಂ ಅವರನ್ನು ಭೇಟಿ ಮಾಡುವ ಅಗತ್ಯ ಇಲ್ಲ ಎಂದು ಬಂಕ್ ಮಾಲೀಕರಿಗೆ ಹೇಳಿದ್ದ ನಾನು, ಎನ್‌ಒಸಿ ಪಡೆಯಲು ಅವರಿಗೆ ಸಹಾಯ ಮಾಡಲು ಮುಂದಾಗಿದ್ದೆ” ಎಂದಿದ್ದರು.

“ಈಗ ಎಡಿಎಂ ಇಲ್ಲಿಂದ ಬಿಟ್ಟು ಹೋಗುವಾಗ ಎನ್‌ಒಸಿ ನೀಡಲಾಗಿದೆ ಎನ್ನುತ್ತಿದ್ದಾರೆ. ಎನ್‌ಒಸಿ ಕೊಟ್ಟಿದ್ದು ಹೇಗೆ ಅಂತ ನನಗೆ ಗೊತ್ತು. ಆ ಎನ್‌ಒಸಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಜೀವನದಲ್ಲಿ ನಾವು ಪ್ರಾಮಾಣಿಕರಾಗಿರಬೇಕು. ಹೊಸ ಪೋಸ್ಟಿಂಗ್ ಜಾಗದಲ್ಲಿ ಕಣ್ಣೂರಿನಲ್ಲಿ ಮಾಡಿದ ರೀತಿಯಲ್ಲಿ ಕೆಲಸ ಮಾಡಬೇಡಿ. ನೀವು ಜನರಿಗೆ ಉತ್ತಮ ರೀತಿಯಲ್ಲಿ ಸಹಾಯ ಮಾಡಿ. ಇದು ಸರ್ಕಾರಿ ಸೇವೆ ಮತ್ತು ಏನಾದರೂ ಆಗಲು ಒಂದು ಕ್ಷಣ ಸಾಕು” ಎಂದು ಹೇಳಿದ್ದರು.

ಎಡಿಎಂಗೆ ಉಡುಗೊರೆ ನೀಡುವಾಗ ಅಲ್ಲಿ ತಾನು ಇರಬಾರದು ಎಂದು ಹೇಳಿದ ದಿವ್ಯಾ ಅವರು, ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅವರ ಸಹೋದ್ಯೋಗಿಗಳು ಹಾಜರಿದ್ದಾಗಲೇ ಸ್ಥಳದಿಂದ ನಿರ್ಗಮಿಸಿದ್ದರು. ಅವರು ಕಾರ್ಯಕ್ರಮದಿಂದ ಅರ್ಧಕ್ಕೆ ಹೋಗಲು ಕಾರಣ ಏನು ಎಂಬುವುದನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದಿದ್ದರು.

ಈ ನಡುವೆ ಇಂದು ಬಾಬು ಅವರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಕುರಿತು ಸಿಪಿಐ(ಎಂ) ಕಣ್ಣೂರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದಿವ್ಯಾ ಅವರು ಸಿಪಿಐ(ಎಂ) ಮಹಿಳಾ ಘಟಕ, ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ದಿವ್ಯಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ಓದಿ : ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...