Homeಮುಖಪುಟಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿತ್ತು.

- Advertisement -
- Advertisement -

ಗೋ ಹತ್ಯೆಯಲ್ಲಿ ಭಾಗಿಯಾಗುವವರು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ಘೋಷಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಉನ್ನಾವೊದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

“ಎಂತಹ ಸ್ಥಿತಿಯಲ್ಲೂ ನಾವು ಹಸುಗಳನ್ನು ರಕ್ಷಿಸಿಯೇ ತಿರುತ್ತೇವೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ. “ಗೋಹತ್ಯೆ ಕೃತ್ಯದಲ್ಲಿ ಭಾಗಿಯಾಗುವವರು ಜೈಲಿಗೆ ಹೋಗುತ್ತಾರೆ. ಸರ್ಕಾರವು ಆರೋಪಿಗಳಿಗೆ ಕಠಿಣವಾದ ಶಿಕ್ಷೆ ಮತ್ತು ಕಠಿಣ ಕಾನೂನಿನ ಅಡಿಯಲ್ಲಿ ಶಿಕ್ಷಿಸುತ್ತದೆ’ ಎಂದು ಆದಿತ್ಯನಾಥ್ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

1955ರ ಉತ್ತರ ಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ನಿಬಂಧನೆಗಳು “ಆಗಾಗ್ಗೆ ದುರ್ಬಳಕೆ” ಆಗುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಈ ಹೇಳಿಕೆ ಬಂದಿದೆ.

ಗೋಹತ್ಯೆ ಕಾಯ್ದೆಯನ್ನು ಬಳಸಿ ಮುಗ್ಧ ಜನರನ್ನು ಬಲಿಪಶುಗಳನ್ನಾಗಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು. ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಆರೋಪ ಹೊತ್ತ ವ್ಯಕ್ತಿಯ ಅರ್ಜಿ ಆಲಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ಪತ್ತೆ ಮಾಡಿದ ಮಾಂಸವನ್ನು ಯಾವುದೇ ರೀತಿಯ ವಿಶ್ಲೇಷಣೆ ಮಾಡದೆ ಹಾಗೂ ದೃಢೀಕರಿಸದೆ ಗೋಮಾಂಸ ಎಂದು ಭಾವಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ ಅವರಿದ್ದ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು.

ನ್ಯಾಯಾಲಯದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿಗಳು ಗೋವುಗಳನ್ನು ಉಳಿಸಲು ತಮ್ಮ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಮಾತನಾಡಿದ್ದಾರೆ. “ಗೋವುಗಳನ್ನು ಸುರಕ್ಷಿತವಾಗಿಸಲು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ನಿರ್ಮಿಸಲಾಗುತ್ತಿದೆ. ಹಸುಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಮಾತುಗಳನ್ನು ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವ ಅಜೆಂಡಾದ ಭಾಗವಾಗಿ ಗೋಹತ್ಯೆ ಮತ್ತು ಸಣ್ಣ ಪ್ರಮಾಣದ ಗೋಮಾಂಸ ವ್ಯಾಪಾರವನ್ನು ಹೆಚ್ಚಾಗಿ ಮುಸ್ಲಿಮರು ಮತ್ತು ದಲಿತರು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಜೂನ್‌ನಲ್ಲಿ ಉತ್ತರ ಪ್ರದೇಶ ಕ್ಯಾಬಿನೆಟ್ ಗೋಹತ್ಯೆಗೆ 10 ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 5 ಲಕ್ಷ ರೂ.ವರೆಗೆ ದಂಡವನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ.

ಉತ್ತರಪ್ರದೇಶ ಗೋಹತ್ಯೆ ತಡೆ ಕಾಯ್ದೆ, 1955 ಅನ್ನು ಜನವರಿ 6, 1956 ರಂದು ರಾಜ್ಯದಲ್ಲಿ ಜಾರಿಗೆ ತರಲಾಯಿತು. ಈ ಕಾಯ್ದೆಯನ್ನು 1958, 1961, 1979 ಮತ್ತು 2002 ರಲ್ಲಿ ತಿದ್ದುಪಡಿ ಮಾಡಲಾಗಿದೆ.

ಕೇಂದ್ರ ಸರ್ಕಾರವು 2017 ರ ಮೇ ತಿಂಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಿತ್ತು. ಕೇರಳ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ ಮತ್ತು ಸಿಕ್ಕಿಂ ಹೊರತುಪಡಿಸಿ ಭಾರತದ ಉಳಿದ ರಾಜ್ಯಗಳಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಜಾರ್ಖಂಡ್: ಗೋಹತ್ಯೆ ನಿಲ್ಲಿಸಬೇಕೆಂದು ಯುವಕನ ಕೊರಳು ಕೊಯ್ದ ಸ್ನೇಹಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...