ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೃಷ್ಣ ಕುಮಾರಿ ಅವರ ಹಠಾತ್ ನಿರ್ಧಾರದ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ವರದಿಗಳು ಹೇಳಿವೆ.
ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಾಮ್ಚಿ-ಸಿಂಘಿತಂಗ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೃಷ್ಣ ಕುಮಾರಿ, ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ಅಭ್ಯರ್ಥಿ ಬಿಮಲ್ ರೈ ಅವರ ವಿರುದ್ಧ ಜಯಗಳಿಸಿದ್ದರು.
ಕೃಷ್ಣ ಕುಮಾರಿ ಅವರ ರಾಜೀನಾಮೆಯನ್ನು ಸ್ಪೀಕರ್ ಎಂ.ಎನ್ ಶೆರ್ಪಾ ಅಂಗೀಕರಿಸಿದ್ದಾರೆ ಎಂದು ಸಿಕ್ಕಿಂ ವಿಧಾನಸಭೆ ಕಾರ್ಯದರ್ಶಿ ಲಲಿತ್ ಕುಮಾರ್ ಗುರುಂಗ್ ಹೇಳಿದ್ದಾರೆ.
ಈ ಬೆಳವಣಿಗೆಯ ಕುರಿತು ಕೃಷ್ಣ ಕುಮಾರಿಯಾಗಲಿ ಅಥವಾ ಅವರ ಪಕ್ಷ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ನಾಯಕರು ಯಾವುದೇ ಹೇಳಿಕೆ ನೀಡಿಲ್ಲ.
ಮುಖ್ಯಮಂತ್ರಿ ಪ್ರೇಮ್ ಸಿಂಗ್ ಅವರು ಪ್ರಸ್ತುತ ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಪೆಮಾ ಖಂಡು ಅವರ ಪ್ರಮಾಣ ವಚನ ಸಮಾರಂಭಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ


