Homeಕರ್ನಾಟಕಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

- Advertisement -
- Advertisement -

‘ಜಸ್ಟೀಸ್ ಎಚ್.ಎನ್.ನಾಗಮೋಹನ್‌ದಾಸ್ ರವರ ಸಮೀಕ್ಷಾ ವರದಿ ಜುಲೈ 30ರೊಳಗೆ ಸಲ್ಲಿಕೆಯಾಗಲಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆಯನ್ನು ಪ್ರಕಟಿಸಬೇಕು. ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕಸಬೇಕು ಎಂದು ಆಗ್ರಹಿಸಿ ಆಗಸ್ಟ್ 11 ರಿಂದ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹ ಆರಂಭ ಮಾಡಲಾಗುವುದು” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ ಸಂಚಾಲಕರಾದ ಬಸವರಾಜ್ ಕೌತಾಳ್ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 1, 2024 ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪನ್ನು ನೀಡಿ ಒಂದುವರ್ಷ ಗತಿಸುತ್ತಿದೆ. ಎರಡೇ ತಿಂಗಳಲ್ಲಿ ಪರಿಶಿಷ್ಠ ಜಾತಿ ಸಮುದಾಯಗಳ ಜನಸಂಖ್ಯಾ ಸಮೀಕ್ಷೆಯನ್ನು ಪೂರ್ಣಗೊಳಿಸಿ ತಮ್ಮ ನೈತಿಕ ಜವಾಬ್ದಾರಿಯನ್ನು ಪೂರೈಸಿದ್ದರೆ, 30 ವರ್ಷಗಳ ಒಳಮೀಸಲಾತಿ ಹೋರಾಟವು ಮತ್ತೊಂದು ಸುತ್ತಿನ ಹೋರಾಟವಾಗಿ ಪರಿವರ್ತನೆಯಾಗುವ ಅಗತ್ಯವಿರಲಿಲ್ಲ” ಎಂದು ಹೇಳಿದರು.

“ಈಗಲಾದರೂ ಇಂತಹ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸದೇ, ಆಡಳಿತರೂಢ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ತಮ್ಮ ಬದ್ಧತೆಯನ್ನು ಪ್ರಕಟಿಸಬೇಕಾಗಿದೆ. ಏಕೆಂದರೆ, ಜಸ್ಟಿಸ್ ನಾಗಮೋಹನ್ ದಾಸ್‌ರವರ ನೇತೃತ್ವದಲ್ಲಿ ನೇಮಕವಾದ ಏಕಸದಸ್ಯ ಆಯೋಗವು ಪರಿಶಿಷ್ಠ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವೈಜ್ಞಾನಿಕ ಹಾಗೂ ವಸ್ತುನಿಷ್ಠ ವರದಿಯನ್ನು ಜುಲೈ 30ರೊಳಗಡೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ” ಎಂದರು.

“ವರದಿಯನ್ನು ಆದಷ್ಟು ಬೇಗ ಪಡೆದು ಆಗಸ್ಟ್ 11 ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಸರ್ವಪಕ್ಷಗಳ ಅನುಮೋದನೆಯೊಂದಿಗೆ ಒಳಮೀಸಲಾತಿ ಬೇಡಿಕೆಯನ್ನು ಅಂಗೀಕರಿಸಿದರೆ, ನೇಮಕಾತಿ ಆಗಬೇಕಾದ 30 ಸಾವಿರಕ್ಕೂ ಅಧಿಕ ಹುದ್ದೆಗಳು ವಂಚಿತ ನಿರುದ್ಯೋಗಿ ಯುವಕ, ಯುವತಿಯರು ಪಡೆಯಬಹುದಾಗಿದೆ. ವಿಷಾದಕರ ಸಂಗತಿ ಎಂದರೆ, ಕಳೆದ 30ವರ್ಷಗಳಲ್ಲಿ ಆಯೋಗ ನೇಮಕವಾಗಲು, ನೇಮಕವಾದ ಆಯೋಗಕ್ಕೆ ಅನುದಾನ ನೀಡಲು, ಸರ್ಕಾರಕ್ಕೆ ಒಪ್ಪಿಸಿದ ವರದಿಯನ್ನು ಅನುಷ್ಠಾನಗೊಳಿಸಲು 3 ದಶಕಗಳ ವಿಳಂಬ ಮುಂದುವರೆದಿರುವುದರಿಂದ ನೊಂದ ಸಮುದಾಯಗಳು ಯಾವುದೇ ಸರ್ಕಾರಗಳನ್ನು ನಂಬುವ ಸ್ಥಿತಿಯಲ್ಲಿಲ್ಲ” ಎಂದು ಬೇಸರ ಹೊರಹಾಕಿದರು.

“ಈ ಎಲ್ಲ ಕಹಿ ಅನುಭವಗಳು ಮುಂದುವರೆಯದಂತೆ ಸರ್ಕಾರವು ಆಗಸ್ಟ್ 11 ರಿಂದ ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆಯಲು ಆಗ್ರಹಿಸಿ ದಿನಾಂಕ: 11-08-2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ, ಎಲ್ಲ ಸಂಘ- ಸಂಸ್ಥೆಗಳ ಮುಖಂಡರುಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಈ ಹೋರಾಟದಲ್ಲಿ ಭಾಗವಹಿಸಬೇಕೆಂದು ವಿನಂತಿಸುತ್ತೇವೆ” ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್‌ ಕೌತಾಳ್‌, ಚಂದ್ರು ತರಹುಣಿಸೆ, ಮೂರ್ತಿ ಅಂಬೇಡ್ಕರ್‌, ವೇಣುಗೋಪಾಲ್‌ ಮೌರ್ಯ, ಮಂಜುನಾಥ ಮರಾಟ, ಪೌರಕಾರ್ಮಿಕರ ಸಂಘದ ಶ್ರೀನಿವಾಸ್‌ ಹಾಜರಿದ್ದರು.

‘ಕರ್ನಾಟಕ ಹೈಕೋರ್ಟ್‌ ಆದೇಶ ಸ್ವೀಕಾರಾರ್ಹವಲ್ಲ..’; ನಟ ದರ್ಶನ್ ಜಾಮೀನಿಗೆ ಸುಪ್ರೀಂ ಕೋರ್ಟ್ ಮತ್ತೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...