Homeಮುಖಪುಟತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ...

ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ ಕಿಡಿ

- Advertisement -
- Advertisement -

ಬಿಜೆಪಿ ನಾಯಕಿ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿಂದಿಸಿರುವ ರೀತಿಯಲ್ಲಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾದ ವಿವಾದ ಮತ್ತು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಇದರ ಬೆನ್ನಲ್ಲಿ ಪ್ರತಿಕ್ರಿಯಿಸಿದ ಮಾರನ್ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ.

ಗೃಹ ಸಚಿವ ಅಮಿತ್‌ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಜೊತೆ ಅದೇ ರೀತಿಯಾಗಿ ವರ್ತಿಸುತ್ತಾರೆಯೇ? ಅವರು ತಮಿಳುನಾಡಿನವರು ಎಂಬ ಕಾರಣಕ್ಕೆ ಆಕೆಯನ್ನು ಯಾವುದೇ ರೀತಿಯಲ್ಲಿ ನಡೆಸಿಕೊಳ್ಳಬಹುದೇ? ಇದು ಅತ್ಯಂತ ಅನಪೇಕ್ಷಿತವಾಗಿದೆ ಎಂದು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹೇಳಿದ್ದಾರೆ.

ಈ ಕುರಿತು ವೈರಲ್‌ ಆಗಿರುವ ವಿಡಿಯೋದಲ್ಲಿ ತಮಿಳಿಸೈ ಅಮಿತ್ ಶಾ ಅವರನ್ನು ಅಭಿನಂದಿಸುತ್ತಿರುವುದನ್ನು ಕಾಣಬಹುದು. ಆ ಬಳಿಕ ಅಮಿತ್‌ ಶಾ ತಮಿಳಿಸೈ ಅವರನ್ನು ಮರಳಿ ಕರೆದು ಗಂಭೀರ ಚರ್ಚೆಯಲ್ಲಿ ತೊಡಗಿದ್ದಾರೆ. ತಮಿಳಿಸೈಗೆ ಅಮಿತ್‌ ಶಾಗೆ ಕೈ ಸನ್ನೆಯಲ್ಲಿ ವಾರ್ನ್‌ ಮಾಡುವುದು ಸೆರೆಯಾಗಿದೆ.

ಈ ಕುರಿತ ಪೋಟೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದ ಬಳಕೆದಾರರು ಸಂಭಾಷಣೆಯ ಸ್ವರೂಪದ ಬಗ್ಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ತಮಿಳಿಸೈ ಮತ್ತು ಅಣ್ಣಾಮಲೈ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ.

ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಅವರು ತಮಿಳುನಾಡು ಬಿಜೆಪಿ ಘಟಕದ ವಿರುದ್ಧ ಟೀಕೆ ಮಾಡಿದ್ದರು. ಅಪರಾಧ ಹಿನ್ನೆಲೆಯ ಜನ ಪಕ್ಷದಲ್ಲಿ ಸೇರಿದ್ದಾರೆ ಎಂದು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು. ಅದರ ಬಗ್ಗೆ ಕೋಪಗೊಂಡಿದ್ದ ಅಮಿತ್ ಶಾ, ಪಕ್ಷದ ವಿಚಾರಗಳ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡಬಾರದು ಎಂದು ವಾರ್ನ್‌ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...