Homeಮುಖಪುಟನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್...

ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೇ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವವರ ಪಟ್ಟಿಯಲ್ಲಿ ನ್ಯಾಯಾಧೀಶರ ಹೆಸರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೆಸರು ಕೇಳಿಬಂದಿದೆ.

ಏಪ್ರಿಲ್ 2019 ರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ  ಮಾಡಿದ್ದ ಸುಪ್ರೀಂಕೋರ್ಟ್ ಸಿಬ್ಬಂದಿಗೆ ಸಂಬಂಧಿಸಿದ ಮೂರು ಮೊಬೈಲ್ ನಂಬರ್‌ಗಳನ್ನು ಹ್ಯಾಕ್ ಮಾಡಲಾಗಿದೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಈ ಕಂಪನಿಯು ಅಧಿಕೃತ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುತ್ತದೆ. ಖಾಸಗಿ ಸಂಸ್ಥೆಗಳಿಗೆ ಅಲ್ಲ ಎಂದು ಮಾಹಿತಿ ನೀಡಲಾಗಿದೆ. ಆದರೂ ಕಂಪನಿಯು ತನ್ನ ಉತ್ಪನ್ನವನ್ನು ಯಾವ ಸರ್ಕಾರಗಳಿಗೆ ಮಾರುತ್ತದೆ ಎಂಬುದನ್ನು ಖಚಿತಪಡಿಸುವುದಿಲ್ಲ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ನ್ಯಾಯಾಧೀಶರ ಮೇಲೆ ಆರೋಪ ಮಾಡಿದ್ದ ಮಹಿಳಾ ಸಿಬ್ಬಂದಿಯನ್ನು 2018 ರ ಡಿಸೆಂಬರ್‌ನಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಇದಾದ ಬಳಿಕ ಅವರು ಏಪ್ರಿಲ್ 20, 2019 ರಂದು ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿದ್ದರು. ಇದಾದ ಕೆಲವೇ ದಿನಗಳ ಅವರ ಪೋನ್ ಅನ್ನು ಹ್ಯಾಕ್ ಮಾಡಲಾಗಿದೆ  ಎಂದು ವರದಿ ತಿಳಿಸಿದೆ.

ಇದೇ ವರದಿಯಲ್ಲಿ ಆಕೆ ದೂರು ನೀಡಿದ ಒಂದು ವಾರದಲ್ಲಿ ಆಕೆಯ ಪತಿ ಮತ್ತು ಅವರ ಇಬ್ಬರು ಸಹೋದರರು ಸೇರಿದಂತೆ ಎಂಟು ಮಂದಿಯ ದೂರವಾಣಿ ಸಂಖ್ಯೆಗಳನ್ನು ಸಹ ಹ್ಯಾಕ್ ಮಾಡಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.  ದೂರುದಾರ ಮತ್ತು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಒಟ್ಟು 11 ದೂರವಾಣಿ ಸಂಖ್ಯೆಗಳನ್ನು ಆಯ್ಕೆ ಮಾಡಿ ಹ್ಯಾಕ್ ಮಾಡಲಾಗಿದೆ.

“ಲೈಂಗಿಕ ಕಿರುಕುಳ ಪ್ರಕರಣ ಆದ ಕೂಡಲೇ ರಂಜನ್ ಗೊಗೊಯ್ ಸರಣಿಯಾಗಿ ಬಿಜೆಪಿಗೆ ಅನುಕೂಲಕರವಾದ ತೀರ್ಪು ಯಾಕೆ ಕೊಟ್ಟರು ಅನ್ನೋದು ಈಗ ಸ್ಪಷ್ಟವಾಯಿತು. ದೂರುದಾರಲೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಯನ್ನು ಆಧಾರವಾಗಿ ಇಟ್ಟುಕೊಂಡು ಗೊಗೋಯ್‌ ಅವರಿಗೆ ಬೆದರಿಕೆ ಒಡ್ಡಿದ್ದಾರೆ. ಶಿಕ್ಷೆ ಬೇಕೆ ಅಥವಾ ರಾಜ್ಯಸಭೆಗೆ ಸ್ಥಾನ ಬೇಕೇ ಎಂಬ ಆಯ್ಕೆ ಇಟ್ಟಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಚರ್ಚೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪದ ನಂತರ, ನ್ಯಾಯಮೂರ್ತಿ ಗೊಗೊಯ್ ಅವರು ನವೆಂಬರ್ 17, 2019 ರವರೆಗೆ 46 ನೇ ಸಿಜೆಐ ಆಗಿ ತಮ್ಮ ಅವಧಿಯನ್ನು ಪೂರೈಸಿದರು. ಅವರು ನಿವೃತ್ತಿಯಾದ ಆರು ತಿಂಗಳಲ್ಲಿ, ಅವರನ್ನು ರಾಜ್ಯಸಭೆಗೆ ಕೇಂದ್ರ ಸರ್ಕಾರವು “ಶ್ರೇಷ್ಠ ಸದಸ್ಯ” ಎಂದು ನಾಮಕರಣ ಮಾಡಿತ್ತು.


ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...