Homeಕರ್ನಾಟಕಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

- Advertisement -
- Advertisement -

‘ಸದ್ಗುರು’ ಎಂದು ಕರೆಯಲ್ಪಡುವ ಜಗ್ಗಿ ವಾಸುದೇವ್ ನೇತೃತ್ವದ ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ಬುಧವಾರ (ಫೆ.26) ಆಯೋಜಿಸಿದ್ದ ಅದ್ದೂರಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗ್ಗಿ ವಾಸುದೇವ್ ಜೊತೆ ಡಿಕೆಶಿ, ಅಮಿತ್ ಶಾ ಮತ್ತು ಇತರರು ವೇದಿಕೆ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಡಿಕೆಶಿ ನಡೆ ಕೆಲ ಕಾಂಗ್ರೆಸ್ ನಾಯಕರು ಮತ್ತು ಪ್ರಗತಿಪರರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಗ್ಗಿವಾಸುದೇವ್ ನೀಡಿದ್ದ ಆಹ್ವಾನ ಪತ್ರವನ್ನು ಫೆ.25ರಂದು ಡಿ.ಕೆ ಶಿವಕುಮಾರ್ ಅವರು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಆಗಲೇ ಡಿಕೆಶಿ ನಡೆಗೆ ಆಕ್ಷೇಪ ವ್ಯಕ್ತವಾಗಿತ್ತು.

ಡಿಕೆಶಿ ಫೇಸ್‌ಬುಕ್‌ನಲ್ಲಿ ಆಹ್ವಾನ ಪತ್ರದೊಂದಿಗೆ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು “ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿ ಮತ್ತು ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ, ರಾಷ್ಟ್ರದ ಭರವಸೆಯ ಸಂಕೇತವಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಅಪಹಾಸ್ಯ ಮಾಡಿದ, ಆರ್‌ಎಸ್‌ಎಸ್‌ ಜೊತೆ ಹೊಂದಾಣಿಕೆಯಾಗುವ ಅಭಿಪ್ರಾಯ ಹೊಂದಿರುವ ಯಾರಿಗಾದರೂ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆ ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿ ಮಾಡಿಕೊಳ್ಳುವ ಬದಲು, ದೃಢ ನಿಶ್ಚಯಕ್ಕೆ ಬದ್ಧತೆ ಅತ್ಯಗತ್ಯ; ಇದನ್ನು ನಿರ್ಲಕ್ಷಿಸುವುದರಿಂದ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರ್‌ಎಸ್‌ಎಸ್ ಹಿನ್ನಲೆಯ ಹಲವಾರು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಆತಂಕವಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡು ಇಡೀ ರಾತ್ರಿ ಕಳೆಯುವುದನ್ನು ನೋಡಲು ಸಾಧ್ಯವಿಲ್ಲ, ಇದನ್ನು ಗ್ರಹಿಸುವುದು ಕಷ್ಟ” ಎಂದು ಬರೆದುಕೊಂಡಿದ್ದಾರೆ.

ಇನ್ನು, ಜಗ್ಗಿ ವಾಸುದೇವ್ ಜೊತೆ ಡಿ.ಕೆ ಶಿವಕುಮಾರ್ ಮತ್ತು ಅಮಿತ್ ಶಾ ವೇದಿಕೆ ಹಂಚಿಕೊಂಡಿರುವ ಫೋಟೋ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಡಿವೈಎಫ್‌ಐ ನಾಯಕ ಮುನೀರ್ ಕಾಟಿಪಳ್ಳ ಅವರು “ಡಿಕೆಶಿ ಹಿಂದೆ ಮಂಗಳೂರಿನ ಯಾರೆಲ್ಲ ಕಾಂಗ್ರೆಸ್ ಮುಖಂಡರು ಹೋಗಬಹುದು?” ಎಂದು ಪ್ರಶ್ನಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ಡಿಕೆಶಿ ಹೋಗಬಾರದು. ಒಬ್ಬ ಡಿಸಿಎಂ ಆಗಿ, ಅವರು ಅಂತಹ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಮತ್ತು ಆಹ್ವಾನವನ್ನು ನಿರ್ಲಕ್ಷಿಸಬೇಕು” ಎಂದು ಪ್ರಗತಿಪರ ಚಿಂತಕರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಬಣ ಡಿ.ಕೆ ಶಿವಕುಮಾರ್ ನಾಯಕತ್ವದ ವಿರುದ್ದ ಒಳಗೊಳಗೆ ಅಸಮಾಧಾನ ಹೊಂದಿರುವ ನಡುವೆ, ಡಿಕೆಶಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ ಮಹದೇವಪ್ಪ ಅವರಂತಹ ಕಾಂಗ್ರೆಸ್‌ನ ಹಿರಿಯ ನಾಯಕರು ಪ್ರಯಾಗ್‌ರಾಜ್ ಕುಂಭಮೇಳದ ಕುರಿತು ವ್ಯತಿರಿಕ್ತ ಹೇಳಿಕೆ ನೀಡಿದ್ದರು. ಆದರೆ, ಅದಕ್ಕೆ ವಿರುದ್ದವೆಂಬಂತೆ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ತೆರಳಿ ಗಂಗಾಸ್ನಾನ ಮಾಡಿದ್ದರು.

ತಿ.ನರಸೀಪುರದ ಕುಂಭಮೇಳದಲ್ಲೂ ಬಹಳ ಉತ್ಸುಕತೆಯಿಂದ ಡಿಕೆಶಿ ಪಾಲ್ಗೊಂಡಿದ್ದರು. ಇಲ್ಲಿಯೂ ಸಂಗಮದಲ್ಲಿ ಸ್ನಾನ ಮಾಡಿದ್ದರು ಮತ್ತು ಕಾವೇರಿ ಆರತಿ ಮಾಡಿದ್ದರು.

ಆ ಬಳಿಕ, ಫೆ.26ರಂದು ಸದಾಶಿವನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ, “ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದಿದ್ದರು. ಈ ಮೂಲಕ ಕುಂಭಮೇಳದಲ್ಲಿ ಭಾಗಿಯಾದ ಬಗ್ಗೆ ಕೆಲವರ ಆಕ್ಷೇಪಕ್ಕೆ ತಿರುಗೇಟು ನೀಡಿದ್ದರು.

ಇನ್ನು, “ಪ್ರಯಾಗ್‌ರಾಜ್ ಕುಂಭಮೇಳವನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ” ಎಂದು ಡಿಕೆಶಿ ಶ್ಲಾಘಿಸಿದ್ದಾಗಿ ವರದಿಯಾಗಿದೆ.

ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಡಿಕೆಶಿಯ ಇತ್ತೀಚಿನ ನಡೆಗಳಿಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆಶಿ ಬಿಜೆಪಿ ಸೇರಬಹುದು ಎಂಬ ಚರ್ಚೆಗಳೂ ಗದಿಗೆದರಿವೆ.

ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...