Homeಕರ್ನಾಟಕಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

- Advertisement -
- Advertisement -

ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು, ಪ್ರಗತಿಪರ ಸಂಘಟನೆಯ ಒಕ್ಕೂಟದವರು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಉತ್ತಂಬಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಿದ್ದಪ್ಪಾಜಿ ಕೊಂಡೋತ್ಸವಕ್ಕೆ ಶಾಸಕರು ಆಗಮಿಸಿದ್ದಾಗ ವಾದ್ಯ ನುಡಿಸುವ ಸಿದ್ದರಾಜು ಉತ್ತಂಬಳ್ಳಿ ಅವರು ಶಾಸಕರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಶಾಸಕರ ಸೈದ್ಧಾಂತಿಕ ಬದಲಾವಣೆಯನ್ನು ಖಂಡಿಸಿ ಸಿದ್ದರಾಜು ಚಪ್ಪಲಿಯನ್ನು ತೋರಿಸಿದರು ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ‘ಶಾಸಕರಿಂದ ನಮಗ್ಯಾವುದೇ ಅಭಿವೃದ್ಧಿ ಆಗಿಲ್ಲ. ಚಿಕ್ಕದೊಂದು ಲೋನ್‌ ಕೂಡ ಕೊಡಿಸಲಿಲ್ಲ. ಉತ್ತಂಬಳ್ಳಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿಲ್ಲ’ ಸಿದ್ದರಾಜು ಪ್ರಶ್ನಿಸಿದ್ದರಿಂದ ಶಾಸಕರು ಸಿಟ್ಟಾದರು ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ಕಮಲ್ ನಾಗರಾಜ್‌, “ನಮ್ಮ ಜೀವನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಯುವವರೆಗೂ ವಾದ್ಯ ನುಡಿಸಬೇಕು ಎಂದು ಸಿದ್ದರಾಜು ಶಾಸಕರನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಸಿಟ್ಟಾದ ಎನ್.ಮಹೇಶ್ ಅವರು, ಈತ ಜಾಸ್ತಿ ಮಾತನಾಡುತ್ತಿದ್ದಾನೆ, ಸ್ವಲ್ಪ ರಿಪೇರಿ ಮಾಡ್ರಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಚಪ್ಪಲಿ ತೋರಿಸಿದರೆಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ” ಎಂದು ದೂರಿದರು.

ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

“ಶುಕ್ರವಾರ ಬೆಳಿಗ್ಗೆಯೇ ಠಾಣೆಗೆ ಕರೆದೊಯ್ದು, ಸಂಜೆಯವರೆಗೂ ಹೊಡೆದಿದ್ದಾರೆ. ಇಷ್ಟು ಹೊತ್ತಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಹೋಗಿ ನೋಡಿದರೆ ಸಿದ್ದರಾಜು ನಿಂತುಕೊಳ್ಳಲೂ ಆಗದಷ್ಟು ಗಾಯಗೊಂಡಿದ್ದರು. ಅಂಗಾಲಿಗೆ ಹೊಡೆದಿದ್ದರು. ಮಂಡಿ ಮೂಳೆಯನ್ನು ಲಾಠಿಯಲ್ಲಿ ಉಜ್ಜಿದ್ದರು. ಕೈಗಳೆಲ್ಲ ಊದುಕೊಂಡಿದ್ದವು. ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಸ್ಪತ್ರೆಗೂ ಕೆಲವು ಗೂಂಡಾಗಳು ಆಗಮಿಸಿ ಸಿದ್ದರಾಜು ಅವರಿಗೆ ತೊಂದರೆ ನೀಡಲು ಪ್ರಯತ್ನಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

“ಘಟನೆಯನ್ನು ಖಂಡಿಸಿ ಉತ್ತಂಬಳ್ಳಿ ಗ್ರಾಮಸ್ಥರು, ಬಿಎಸ್‌ಪಿ ಕಾರ್ಯಕರ್ತರು ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇವೆ. ಮಾಂಬಳ್ಳಿ ಠಾಣೆಗೆ ಬಂದಿದ್ದ ಯಳಂದೂರು ಸರ್ಕಲ್ ಇನ್‌ಸ್ಪೆಕ್ಟರ್‌ ಶಿವಮಾದಯ್ಯನವರು ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಸುಂದರ್‌ ರಾಜ್‌ ಅವರು ಜನರಲ್ಲಿ ಕ್ಷಮೆಯಾಚಿಸಿದ್ದು, ಒಂದು ವಾರ ಸಮಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಜು ಅವರಿಗೆ ಹೈ ಬಿಪಿಯಾಗಿದೆ. ಹಲ್ಲೆ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಸಿದ್ದರಾಜು ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಕಮಲ್ ತಿಳಿಸಿದರು.

ಚಪ್ಪಲಿ ಧರಿಸಿಯೇ ಇರಲಿಲ್ಲ: ಸಿದ್ದರಾಜು

ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದಿದ್ದಾರೆ.

ಘಟನೆಯ ಕುರಿತು ಶಾಸಕ ಎನ್‌.ಮಹೇಶ್‌ ಅವರ ಪ್ರತಿಕ್ರಿಯೆಗಾಗಿ ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu mathe mathe BJP sertharalla…? Yee ghatanegalannu gamanisi innadaru horge bandu bere paksha nodkolli… BJP dalithara dhamanakaagiye irodu gothilva

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...