Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...