Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...