Homeಮುಖಪುಟಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

- Advertisement -
- Advertisement -

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಮೃತ ಎಂದು ಘೋಷಿಸಿದ್ದಾರೆ. ಈ ವಿಚಾರ ಕೇಳಿ ಆಘಾತಕ್ಕೊಳಗಾದ ಅನ್ವರ್ ಕುಟುಂಬಸ್ಥರು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಥಳಿಸಿದ್ದಾರೆ, ಆತನದ್ದು ಆತ್ಮಹತ್ಯೆಯಲ್ಲ, ಇದೊಂದು ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಿದ್ದಾರೆ.

ಅನ್ವರ್ ಅವರ ಹಿರಿಯ ಸಹೋದರ ಸೈಫ್ ಅಲಿ, “ನನ್ನ ಸಹೋದರನ ದೇಹದ ಮೇಲೆ ಗಾಯದ ಗುರುತುಗಳಿದ್ದವು. ಆತನ ಕುತ್ತಿಗೆಯ ಮೇಲೆ ಎರಡು ಆಳವಾದ ಗುರುತುಗಳಿದ್ದವು. ಇದು ಬಲವಂತವಾಗಿ ಕತ್ತು ಹಿಸುಕಿ ಹತ್ಯೆ ಮಾಡಿರುವುದನ್ನು ಸೂಚಿಸುತ್ತದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ನನ್ನ ಸಹೋದರನನ್ನು ಭೇಟಿಯಾಗಲು ಹಲವಾರು ಬಾರಿ ಪ್ರಯತ್ನಿಸಿದೆ, ಆದರೆ ಪೊಲೀಸರು ನನ್ನನ್ನು ಮೂರು ಬಾರಿ ಹಿಂದಕ್ಕೆ ಕಳುಹಿಸಿದರು. ನಾನು ಅಂತಿಮವಾಗಿ ಅವನನ್ನು ಭೇಟಿಯಾಗಲು ಅವಕಾಶ ಪಡೆದಾಗ, ಪೊಲೀಸರು ನನ್ನ ಸಹೋದರನ ದೇಹವನ್ನು ಜೈಲಿನ ಆವರಣದಿಂದ ಹೊರಗೆ ಕೊಂಡೊಯ್ಯುವುದನ್ನು ನೋಡಿದೆ. ಅದು ನನ್ನ ಸಹೋದರ ಫೈಜ್ ಎಂದು ಪೊಲೀಸರು ನನಗೆ ತಿಳಿಸಲಿಲ್ಲ” ಎಂದು ಅಲಿ ಆರೋಪಿಸಿದ್ದಾರೆ.

“ನಾನು ಮಧ್ಯಪ್ರವೇಶಿಸಿ, ಅದು ನನ್ನ ಸಹೋದರ ಎಂದು ಖಚಿತಪಡಿಸಿಕೊಂಡೆ. ಪೊಲೀಸರ ಬಳಿ ದೇಹವನ್ನು ಎಲ್ಲಿಗೆ ಮತ್ತು ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳಿದಾಗ, ಅವರು ಆತ ಜೈಲಿನ ಆಸ್ಪತ್ರೆಯ ಒಳಗೆ ಬಿದ್ದಿದ್ದಾನೆ, ಆ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಆದರೆ ನಾವು ಸದರ್ ಆಸ್ಪತ್ರೆಗೆ ತಲುಪಿದಾಗ, ಆತನನ್ನು ಮೃತನೆಂದು ಘೋಷಿಸಲಾಗಿತ್ತು” ಎಂದು ಸೈಫ್ ಅಲಿ ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ನನ್ನನ್ನು ಪೊಲೀಸರ ಬಳಿ ಕಳುಹಿಸುತ್ತಿದ್ದರು ಮತ್ತು ಪೊಲೀಸರು ನನ್ನನ್ನು ವೈದ್ಯರ ಬಳಿ ಕಳುಹಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯಿಂದ ಬೇಸತ್ತು, ಅನ್ವರ್ ಅವರ ಕುಟುಂಬವು ಆಸ್ಪತ್ರೆಯ ಹೊರಗೆ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿತು. ನಂತರದಲ್ಲಿ, ಪೊಲೀಸರು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆಯ ವರದಿಯನ್ನು ತಡೆಹಿಡಿದಿದ್ದಾರೆ ಎಂದು ಸೈಫ್ ಅಲಿ ಆರೋಪಿಸಿದ್ದಾರೆ. ಈ ವಿಳಂಬವು ಕಸ್ಟಡಿಯಲ್ಲಿನ ಸಾವಿನ ಮೂಲಭೂತ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಸತ್ಯಾಂಶವನ್ನು ಮುಚ್ಚಿಡುವ ಪ್ರಯತ್ನದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೃತನ ಕುಟುಂಬವು ಆಗಸ್ಟ್ 8, 2025ರಂದು ಮೊಫಾಸಿಲ್ ಪೊಲೀಸ್ ಠಾಣೆಯಲ್ಲಿ ಲಿಖಿತ ಅರ್ಜಿ ಸಲ್ಲಿಸಿದೆ, ಆದರೆ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ. ಅನ್ವರ್ ಅವರ ತಾಯಿ ಜೈದಾ ಖಾತೂನ್, ಜಿಲ್ಲಾಧಿಕಾರಿಗೆ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ, “ನನ್ನ ಮಗನನ್ನು ಪೊಲೀಸರು ಕಸ್ಟಡಿಯಲ್ಲಿ ಕೊಂದಿದ್ದಾರೆ” ಎಂದು ಹೇಳಿದ್ದಾರೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸೈಫ್ ಅಲಿ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ, ಸಿಬಿಐ ತನಿಖೆ ಮತ್ತು ಫೈಜ್‌ನ ಬಂಧನದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಅಧಿಕಾರಿಗಳ ತಕ್ಷಣದ ಅಮಾನತಿಗೆ ಒತ್ತಾಯಿಸಿದ್ದಾರೆ. ಕುಟುಂಬಕ್ಕೆ ಸಹಾಯ ಮಾಡುತ್ತಿರುವ ವಕೀಲರಾದ ಕೈಫ್ ಹಸನ್, ಈ ಪ್ರಕರಣದ ನಿರ್ವಹಣೆಯನ್ನು “ನ್ಯಾಯ ನಿರಾಕರಣೆ” ಎಂದು ಖಂಡಿಸಿದ್ದಾರೆ.

“ಇಂತಹ ಪ್ರಕರಣಗಳಲ್ಲಿ ಪಾರದರ್ಶಕತೆ ಖಚಿತಪಡಿಸುವುದು, ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸುವುದು ಮತ್ತು ಸ್ವತಂತ್ರ ತನಿಖೆಗಳನ್ನು ಪ್ರಾರಂಭಿಸುವುದು ಸರ್ಕಾರದ ಕಾನೂನುಬದ್ಧ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಲಾಕಪ್‌ ಅಥವಾ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಯಾವುದೇ ಸಿಸಿಟಿವಿ ದೃಶ್ಯಾವಳಿ ಅಥವಾ ಅಧಿಕೃತ ದಾಖಲೆಗಳನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೈಜ್ ಅವರ ಕುಟುಂಬವು ತಮ್ಮ ಮರಣೋತ್ತರ ವರದಿಗಾಗಿ ಮತ್ತು ಅವರ ಸಾವಿಗೆ ನ್ಯಾಯಕ್ಕಾಗಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ, ಪ್ರಶ್ನಿಸಿಲ್ಲ ಅಥವಾ ಯಾವುದೇ ಅಧಿಕೃತ ವಿಚಾರಣೆ ಪ್ರಾರಂಭವಾಗಿಲ್ಲ. ಕುಟುಂಬಸ್ಥರು ಇನ್ನೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...