HomeUncategorizedಲಸಿಕೆ ಹಾಕಿಸಿಕೊಂಡಿದ್ದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತ ಸಾವು: ಲಸಿಕೆ ಕಾರಣವಲ್ಲ ಎಂದ ಸರ್ಕಾರ

ಲಸಿಕೆ ಹಾಕಿಸಿಕೊಂಡಿದ್ದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತ ಸಾವು: ಲಸಿಕೆ ಕಾರಣವಲ್ಲ ಎಂದ ಸರ್ಕಾರ

ಲಸಿಕೆ ಪಡೆದ ನಂತರ ಈ ಘಟನೆಯೂ ಸೇರಿದಂತೆ 3 ಸಾವುಗಳ ವರದಿಯಾಗಿವೆ. ಆದರೆ ಇದಕ್ಕೆ ಲಸಿಕೆ ಕಾರಣವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

- Advertisement -
- Advertisement -

ಕೊರೊನಾ ಲಸಿಕೆ ಹಾಕಿಸಿಕೊಂಡ ಒಂದು ದಿನದ ನಂತರ ಹೈದರಾಬಾದ್‌ನಲ್ಲಿ 42 ವರ್ಷದ ಆರೋಗ್ಯ ಕಾರ್ಯಕರ್ತ ಬುಧವಾರ ನಿಧನರಾಗಿದ್ದಾರೆ. “ಮೃತರ ಮರಣೋತ್ತರ ಪರೀಕ್ಷೆ ಇನ್ನೂ ನಡೆದಿಲ್ಲ, ಆದರೆ ಇದು ಲಸಿಕೆ ಪರಿಣಾಮದಿಂದಾಗಿ ಸಂಭವಿಸಿದ ಸಾವಲ್ಲ” ಎಂದು ತೆಲಂಗಾಣ ಸರ್ಕಾರ ಹೇಳಿದೆ.

ಜನವರಿ 19 ರಂದು ಹೈದರಾಬಾದ್‌ನ ನಿರ್ಮಲ್ ಜಿಲ್ಲೆಯ ಕುಂತಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಲಸಿಕೆ ಹಾಕಲಾಯಿತು. ಇದಾಗಿ ಒಂದು ದಿನದ ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಬೆಳಿಗ್ಗೆ 5:30 ರ ಸುಮಾರಿಗೆ ನಿರ್ಮಲ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಅವರ ಸಾವು ವ್ಯಾಕ್ಸಿನೇಷನ್‌ನಿಂದಾಗಿ ಸಂಭವಿಸಿಲ್ಲ ಎಂದು ತೋರುತ್ತಿದೆ. ಮಾರ್ಗಸೂಚಿಯ ಪ್ರಕಾರ, ವೈದ್ಯರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು” ಎಂದು ಸಾರ್ವಜನಿಕ ಆರೋಗ್ಯ ಮತ್ತು ಕಲ್ಯಾಣ ನಿರ್ದೇಶಕರು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ 19 ಲಸಿಕೆ ಕುರಿತ ಪ್ರಶ್ನೆಗಳು ಮತ್ತು ಕಳವಳಗಳು: ಜನ ಆರೋಗ್ಯ ಚಳವಳಿ

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಲಸಿಕೆ ಪಡೆದ ನಂತರ, ಈ ಘಟನೆಯೂ ಸೇರಿದಂತೆ ಒಟ್ಟು 3 ಸಾವುಗಳ ವರದಿಯಾಗಿವೆ. ಆದರೆ ಇದಕ್ಕೆ ಲಸಿಕೆ ಕಾರಣವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೊದಲ ಎರಡು ಪ್ರಕರಣಗಳಲ್ಲಿ, ಮೊರಾದಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ಬಾಯ್ ಆಗಿ ಕೆಲಸ ಮಾಡುತ್ತಿದ್ದ 52 ವರ್ಷದ ಮಹಿಪಾಲ್ ಸಿಂಗ್ ಅವರು ಲಸಿಕೆ ಹಾಕಿಸಿಕೊಂಡ ಒಂದು ದಿನದ ನಂತರ ನಿಧನರಾದರು. ಎರಡನೇ ಪ್ರಕರಣದಲ್ಲಿ, ಬಳ್ಳಾರಿಯಲ್ಲಿರುವ ರಾಜ್ಯ ಆರೋಗ್ಯ ವಿಭಾಗದ ಉದ್ಯೋಗಿ 43 ವರ್ಷದ ನಾಗರಾಜು ಲಸಿಕೆ ಹಾಕಿಸಿಕೊಂಡ 2 ದಿನದ ನಂತರ ಸಾವನ್ನಪ್ಪಿದ್ದರು.

ಲಸಿಕೆಯು ಅಡ್ಡಪರಿಣಾಮಗಳನ್ನು ಬೀರುತ್ತದೆ ಎಂದು ಹಲವರು ಆರೋಪಿಸಿದ್ದಾರೆ. ಆದರೆ ಸರ್ಕಾರ ಇದನ್ನು ನಿರಾಕರಿಸುತ್ತಲೆ ಬಂದಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...